ಶೀಘ್ರದಲ್ಲೇ ಕೇಂದ್ರದಿಂದ ನೆರೆ ಪರಿಹಾರ


Team Udayavani, Sep 29, 2019, 3:09 AM IST

shigra

ಬೆಂಗಳೂರು: ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಜ್ಯಕ್ಕೆ ನೆರೆ ಪರಿಹಾರ ಘೋಷಣೆ ಮಾಡಲಿದೆ ಎಂಬ ಭರವಸೆಯನ್ನು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವ್ಯಕ್ತಪಡಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭೀಕರ ನೆರೆ-ಪ್ರವಾಹ ಎದುರಾಗಿದ್ದು, ಅಪಾರ ನಷ್ಟು ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಸದ್ಯದಲ್ಲೇ ಕೇಂದ್ರ ಸರ್ಕಾರ ನೆರೆ ಪರಿಹಾರ ಧನವನ್ನು ಬಿಡುಗಡೆ ಮಾಡಲಿದೆ ಎಂದು ಹೇಳಿದರು.

ಅನರ್ಹತೆಗೊಂಡಿರುವ ಶಾಸಕರಿಗೆ ಟಿಕೆಟ್‌ ಹಂಚಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆ ಶಾಸಕರೊಂದಿಗೆ ಮಾತನಾಡಿದ ರೀತಿಯಲ್ಲೇ ಟಿಕೆಟ್‌ ಹಂಚಿಕೆ ಪ್ರಕ್ರಿಯೆ ನಡೆಯಲಿದೆ. ಈ ಬಗ್ಗೆ ಗೊಂದಲಗಳು ಇಲ್ಲ ಎಂದು ಸ್ಪಷ್ಟಪಡಿಸಿದರು.

ವಿಪಕ್ಷಗಳಿಂದ ಗೊಂದಲ: ರಾಜ್ಯದ ವಿಚಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಯಾವುದೇ ರೀತಿಯ ಗೊಂದಲಗಳನ್ನು ಉಂಟು ಮಾಡಿಲ್ಲ. ಉಪ ಚುನಾವಣೆ ವಿಚಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಬಗ್ಗೆ ವಿರೋಧ ಪಕ್ಷಗಳೇ ಗೊಂದಲ ಸೃಷ್ಟಿಸುತ್ತವೆ ಎಂದು ದೂರಿದರು. ಯಾವುದೇ ಪಕ್ಷದ ಶಾಸಕ ಆಗಿರಲಿ ಆತ ರಾಜೀನಾಮೆ ನೀಡಿದ ಆರು ತಿಂಗಳಲ್ಲಿ ಚುನಾವಣೆ ನಡೆಯಬೇಕು ಎಂಬ ನಿಯಮವಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲೂ ಕೂಡ ಉಪ ಚುನಾವಣೆ ಪ್ರಕ್ರಿಯೆ ಸಾಗಿದೆ ಎಂದು ಹೇಳಿದರು.

ಒಂದೆರಡು ದಿನದಲ್ಲಿ ಕೇಂದ್ರದಿಂದ ಪರಿಹಾರ ಬಿಡುಗಡೆ – ಸಿಎಂ ಯಡಿಯೂರಪ್ಪ: ಒಂದೆರಡು ದಿನದಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೆರೆ ಪರಿಹಾರ ವಿತರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಡಾಲರ್ ಕಾಲೋನಿ ನಿವಾಸಕ್ಕೆ ಶನಿವಾರ ಭೇಟಿ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರೊಂದಿಗೆ ಚರ್ಚಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಈ ಕುರಿತು ಚರ್ಚೆ ನಡೆದಿದ್ದು, ಒಂದೆರಡು ದಿನಗಳಲ್ಲಿ ಕೇಂದ್ರ ನೆರೆ ಪರಿಹಾರ ಬಿಡುಗಡೆ ಮಾಡಲಿದೆ.

ನಮ್ಮ ರಾಜ್ಯ ಸೇರಿದಂತೆ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಿಗೆ ಪರಿಹಾರ ಘೋಷಣೆ ಮಾಡಲಿದೆ ಎಂದು ಹೇಳಿದರು. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿರುವ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, ಮತ್ತೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಎದುರಿಸುತ್ತೇವೆ. ಉಪಚುನಾವಣೆ ಸಂಬಂಧ ಪಕ್ಷದವರ ಜೊತೆಗೆ ಚರ್ಚಿಸಿ ಮುಂದುವರಿಯಲಾಗುವುದು ಎಂದು ತಿಳಿಸಿದರು. ವಿಜಯನಗರ ಜಿಲ್ಲೆ ರಚನೆ ಚಿಂತನೆಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರಶ್ನಿಸಿದಾಗ ಎಲ್ಲರನ್ನೂ ಕರೆಸಿ ಮಾತನಾಡಲಾಗುವುದು ಎಂದರು.

ಕಾಶ್ಮೀರ ವಿಚಾರದಲ್ಲಿ ನೆಹರು ದೇಶಕ್ಕೆ ವಿಷ ಉಣಿಸಿದರು
ಬೆಂಗಳೂರು: ಕಾಶ್ಮೀರ ವಿಚಾರದಲ್ಲಿ ನೆಹರು ಅವರು ದೇಶದ ಜನರಿಗೆ ಹಾಲುಣಿಸುವ ಬದಲು ವಿಷ ಉಣಿಸಿದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್‌ ಜೋಶಿ ಅಭಿಪ್ರಾಯ ಪಟ್ಟಿದ್ದಾರೆ. ಬಿಜೆಪಿಯ ಬೆಂಗಳೂರು ನಗರ ಜಿಲ್ಲಾ ಘಟಕದಿಂದ ಶನಿವಾರ ನಡೆದ “370ನೇ ವಿಧಿ ರದ್ದತಿ ಕುರಿತ “ಜನ ಜಾಗರಣ್‌’ ಸಭೆಯಲ್ಲಿ ಮಾತನಾಡಿ, ಈ ವಿಧಿ ದೇಶದ ಏಕತೆಗೆ ಧಕ್ಕೆ ತರುವಂತಹ ವಿಧಿಯಾಗಿತ್ತು ಎಂದರು.

ಶೇಖ್‌ ಅಬ್ದುಲ್ಲಾ ನೇತೃತ್ವದ ಮುಸ್ಲಿಂ ಕಾನ್ಫರೆನ್ಸ್‌ ನೀಡುತ್ತಿದ್ದ ತೊಂದರೆಗಳನ್ನು ಸಹಿಸಿಕೊಳ್ಳದೆ ಅಂದಿನ ಕಾಶ್ಮೀರ ರಾಜ ರಾಜಾಹರಿಸಿಂಗ್‌ ಕಾಶ್ಮೀರವನ್ನು ಭಾರತದ ಆಡಳಿತ ವ್ಯವಸ್ಥೆಯಲ್ಲಿ ವಿಲೀನಗೊಳಿಸಲು ಮುಂದಾದರೂ ಶೇಖ್‌ ಅಬ್ದುಲ್ಲಾ ಇದಕ್ಕೆ ಅವಕಾಶ ನೀಡಿಲ್ಲ. ಶೇಖ್‌ ಅಬ್ದುಲ್ಲಾಗೆ ನೆಹರು ಬೆಂಬಲವಾಗಿ ನಿಂತಿದ್ದೇ ಇಷ್ಟಕ್ಕೆಲ್ಲಾ ಕಾರಣ ಎಂದು ಟೀಕಿಸಿದರು. ಜನ ಸಂಘದ ಸಂಸ್ಥಾಪಕ ಶ್ಯಾಮ್‌ ಪ್ರಕಾಶ್‌ ಮುಖರ್ಜಿ ಅವರು ಕಾಶ್ಮೀರಕ್ಕೆ ನೀಡ ಲಾಗಿದ್ದ ಪ್ರತ್ಯೇಕ ಧ್ವಜ, ಪ್ರತ್ಯೇಕ ಸಂವಿಧಾನ ವಿರುದ್ಧ ಹೋರಾಟ ನಡೆಸಿದ್ದರು. ಆದರೆ ನಂತರ ದಿನಗಳಲ್ಲಿ ಅನು ಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಅಂದಿನ ಪ್ರಧಾನಿ ನೆಹರು ಅವರನ್ನು ಒತ್ತಾಯಿಸಿದರೂ, ಪ್ರಯೋಜನವಾಗಲಿಲ್ಲ ಎಂದರು.

ಕಾಶ್ಮೀರದ ಬಗ್ಗೆ ಅಪಪ್ರಚಾರ: 370ನೇ ವಿಧಿ ರದ್ಧತಿಯ ನಂತರ ಕಾಶ್ಮೀರ ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು ಈ ಬಗ್ಗೆ ಅಪ ಪ್ರಚಾರ ಮಾಡುತ್ತಿವೆ. ದೇಶ ದೋಹಿಗಳನ್ನು ಮಾತ್ರ ಬಂಧನ ದಲ್ಲಿ ಡಲಾಗಿದ್ದು, ಝಡ್‌ ಪ್ಲಸ್‌ ಶ್ರೇಣಿ ಭದ್ರತೆ ಯನ್ನು ಹಿಂಪಡೆಯಲಾಗಿದೆ. ಕಾಶ್ಮೀರ ವಿಚಾರದಲ್ಲಿ ಪಾಕಿ ಸ್ತಾನಕ್ಕೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖ ಭಂಗ ವಾ ಗಿದೆ ಎಂದರು. ಕಾಶ್ಮೀರಿ ಪಂಡಿತರು ಈ ಹಿಂದೆ ಸಾಕಷ್ಟು ನೋವು ಅನುಭವಿಸಿದ್ದಾರೆ. ಹೀಗಾಗಿ ಅವರು ಮನೆ ಬಿಟ್ಟು ಹೊರಬಂದಿದ್ದಾರೆ.ಅಂಥಹವರು ಮತ್ತೆ ತಮ್ಮ ಮನೆ ಸೇರಲಿ ದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತ ಒಂದು ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದರು.

ಪಿಒಕೆ ಭಾರತದ ತೆಕ್ಕೆಗೆ ತೆಗೆದುಕೊಳ್ಳುವ ದಿನ ದೂರವಿಲ್ಲ: ಭಯೋತ್ಪಾದನೆ ಮುಕ್ತ ಭಾರತಕ್ಕಾಗಿ ಕೇಂದ್ರ ಸರ್ಕಾರ ಪಣತೊಟ್ಟಿದೆ. ಈಗಾಗಲೇ ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ವನ್ನು ರದ್ದು ಮಾಡಿದೆ. ಹೀಗಾಗಿ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಭಾರತ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ದಿನ ಬಹಳ ದೂರವಿಲ್ಲ ಎಂದು ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು. ಅಂಬೇಡ್ಕರ್‌ ವಿರೋಧಿಸಿದ್ದರು: ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡುವ ಕುರಿತಂತೆ ನೆಹರು ನಿರ್ಧಾರವನ್ನು ಅಂದಿನ ಕಾನೂನು ಸಚಿವರಾಗಿದ್ದ ಡಾ.ಬಿ.ಆರ್‌. ಅಂಬೇಡ್ಕರ್‌ ಮತ್ತು ಗೃಹ ಸಚಿವ ಸರ್ದಾರ್‌ ವಲ್ಲಬಾಯಿ ಪಟೇಲ್‌ ವಿರೋಧಿಸಿದ್ದರು. ಆದರೂ, ನೆಹರು ಅವರು ಜಾರಿ ಮಾಡಲು ತಿಳಿಸಿದ್ದರು.

ಟಾಪ್ ನ್ಯೂಸ್

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.