ಕಾಂಗರೂಗಳಿಗೆ ಶಾಕ್ ನೀಡಿದ ಹರಿಣಗಳು

ತಾಹೀರ್, ಡ್ಯುಮಿನಿಗೆ ಗೆಲುವಿನ ವಿದಾಯ ಹೇಳಿದ ದ.ಆಫ್ರಿಕಾ

Team Udayavani, Jul 7, 2019, 9:37 AM IST

tahir-d

ಮ್ಯಾಂಚೆಸ್ಟರ್: ವಿಶ್ವಕಪ್ ಕೂಟದ ಕೊನೆಯಲ್ಲಿ ಮೈಕೊಡವಿ ಮೇಲೆದ್ದ ದಕ್ಷಿಣ ಆಫ್ರಿಕಾ ಅಂತಿಮ ಪಂದ್ಯದಲ್ಲಿ ಬಲಿಷ್ಟ ಆಸೀಸ್ ವಿರುದ್ಧ 10 ರನ್ ಗಳ ಅಂತರದ ಜಯ ದಾಖಲಿಸಿದೆ. ಈ ಗೆಲುವಿನ ಮೂಲಕ ಇಮ್ರಾನ್ ತಾಹೀರ್ ಮತ್ತು ಜೀನ್ ಪಾಲ್ ಡ್ಯುಮಿನಿ ಗೆ ಗೆಲುವಿನ ವಿದಾಯ ಹೇಳಿದೆ.

ಇಲ್ಲಿನ ಓಲ್ಡ್ ಟ್ರಾಫೋರ್ಡ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹರಿಣಗಳ ನಾಯಕ ಫಾಫ್ ಡುಪ್ಲೆಸ್ ಮೊದಲು ಬ್ಯಾಟಿಂಗ್ ನಡೆಸುವ ನಿರ್ಧಾರ ಮಾಡಿದರು. ಅದರಂತೆ ಬ್ಯಾಟಿಂಗ್ ಮಾಡಿದ ಆರಂಭಿಕ ಜೋಡಿ ಆಡೆನ್ ಮಾಕ್ರಮ್ ಮತ್ತು ಕ್ವಿಂಟನ್ ಡಿ ಕಾಕ್ ಸರಣಿಯಲ್ಲಿ ಮೊದಲ ಬಾರಿಗೆ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್ ಗೆ 79 ರನ್ ಈ ಜೋಡಿ ಪೇರಿಸಿತ್ತು. ಡಿಕಾಕ್ ಅರ್ಧಶತಕ ಬಾರಿಸಿ ಮಿಂಚಿದರು. ಮೂರನೇ ವಿಕೆಟ್ ಗೆ ಜೊತೆಗೂಡಿದ ನಾಯಕ ಫಾಫ್ ಮತ್ತು ವ್ಯಾನ್ ಡರ್ ಡ್ಯೂಸೆನ್ ಅದ್ಭುತ ಜೊತೆಯಾಟ ನಡೆಸಿದರು. ಫಾಫ್ ಭರ್ಜರಿ ಶತಕ ಬಾರಿಸಿದರು. 94  ಎಸೆತಗಳಿಂದ 100 ಬಾರಿಸಿದ ಫಾಫ್, ವೇಗಿ ಬೆಹ್ರಾಂಡಫ್ ಗೆ ವಿಕೆಟ್ ನೀಡಿದರು. ಡ್ಯೂಸೆನ್ 95 ರನ್ ಗೆ ಔಟಾಗಿ ಶತಕದಿಂದ ವಂಚಿತರಾದರು. ಅಂತಿಮವಾಗಿ ಆರು ವಿಕೆಟ್ ನಷ್ಟಕ್ಕೆ 325 ರನ್ ಗಳಿಸಿತು.

ಆಫ್ರಿಕಾ ನೀಡಿದ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಆಸೀಸ್ ಗೆ ಆರಂಭಿಕ ಆಘಾತ ಎದುರಾಯಿತು. 32 ರನ್ ಗೆ ಎರಡು ವಿಕೆಟ್ ಕಳೆದುಕೊಂಡ ಕಾಂಗರೂಗಳನ್ನು ಮೇಲಕ್ಕೆತ್ತಿದ್ದು ಡೇವಿಡ್ ವಾರ್ನರ್. ವಾರ್ನರ್ 122 ರನ್ ಗಳಿಸಿದರು. ಅಂತಿಮವಾಗಿ ಕೀಪರ್ ಅಲೆಕ್ಸ್ ಕ್ಯಾರಿ 85 ರನ್ ಗಳಿಸಿ ಹೋರಾಟ ನಡೆಸಿದರು. ಆದರೆ ಅಂತಿಮವಾಗಿ ಆಸೀಸ್ 49.5 ಓವರ್ ಗಳಲ್ಲಿ 2015 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಹರಿಣಗಳಿಗೆ 10 ರನ್ ಗಳಿಂದ ಶರಣಾಯಿತು.

ಶತಕ ಬಾರಿಸಿದ ಫಾಫ್ ಡು ಪ್ಲೆಸಿಸ್ ಪಂದ್ಯಪುರುಷ ಪ್ರಶಸ್ತಿ ಪಡೆದರು. ಈ ಸೋಲಿನಿಂದ ಆಸೀಸ್ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರಿತು.

ತಾಹೀರ್, ಡ್ಯುಮಿನಿ ನಿವೃತ್ತಿ: ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಇಮ್ರಾನ್ ತಾಹೀರ್ ಮತ್ತು ಆಲ್ ರೌಂಡರ್ ಜೀನ್ ಪಾಲ್ ಡ್ಯುಮಿನಿ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಿಗೆ ವಿದಾಯ ಹೇಳಿದರು. ಇವರಿಬ್ಬರು ಮುಂದೆ ಫ್ರಾಂಚೈಸಿ ಕೂಟಗಳಲ್ಲಿ ಪಾಲ್ಗೊಳ್ಳುವ ಅಭಿಲಾಷೆ ಹೊಂದಿದ್ದಾರೆ. ಆಪ್ರಿಕಾ ಜಯದೊಂದಿಗೆ ಅವರಿಬ್ಬರಿಗೂ ವಿದಾಯ ಹೇಳಿತು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.