ದಕ್ಷಿಣ ಕೊರಿಯ :ಒಂದೇ ದಿನ 34 ಹೊಸ ಸೋಂಕು

ತಿಂಗಳ ಬಳಿಕ ಅಧಿಕ ಪ್ರಕರಣ

Team Udayavani, May 11, 2020, 4:17 PM IST

ದಕ್ಷಿಣ ಕೊರಿಯ :ಒಂದೇ ದಿನ 34 ಹೊಸ ಸೋಂಕು

ಸೋಲ್‌ : ಕೋವಿಡ್ ವಿರುದ್ಧ ಗೆದ್ದೇಬಿಟ್ಟೆ ಎಂದು ಬೀಗುತ್ತಿದ್ದ ದಕ್ಷಿಣ ಕೊರಿಯ ಈಗ ಎರಡನೇ ಸುತ್ತಿನ ವೈರಸ್‌ ಹಾವಳಿಗೆ ತುತ್ತಾಗಿ ಪರಿತಪಿಸುತ್ತಿದೆ. ಒಂದೇ ದಿನ ಹೊಸತಾಗಿ 34 ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದು ಕಳೆದ ಒಂದು ತಿಂಗಳ ಅವಧಿಯಲ್ಲಿ ಒಂದೇ ದಿನದಲ್ಲಿ ವರದಿಯಾದ ಅತಿ ಹೆಚ್ಚಿನ ಪ್ರಕರಣ.

ಕೋವಿಡ್ ಸೋಂಕಿತನೊಬ್ಬ ನೈಟ್‌ಕ್ಲಬ್‌ಗ ಭೇಟಿಕೊಟ್ಟ ಕಾರಣ ಹೊಸದಾಗಿ ಸೋಂಕು ಹರಡಿದೆ. ಇದು ಲಾಕ್‌ಡೌನ್‌ ಸಡಿಲಿಕೆಯ ಮುಂದೆ ಒಂದು ಪ್ರಶ್ನಾರ್ಥಕ ಚಿಹ್ನೆಯನ್ನು ಇಟ್ಟಿದೆ.

34 ಮಂದಿಯ ಪೈಕಿ 26 ಮಂದಿಗೆ ಸ್ಥಳೀಯವಾಗಿ ಸೋಂಕು ತಗಲಿಕೊಂಡಿದೆ. ಉಳಿದವರು ಹೊರಗಿನಿಂದ ಅಂಟಿಸಿಕೊಂಡು ಬಂದಿದ್ದಾರೆ. ಎ.9ರ ಬಳಿಕ ಒಂದೇ ದಿನ ಇಷ್ಟು ಸೋಂಕು ವರದಿಯಾಗಿರುವುದು ಇದೇ ಮೊದಲು. ಹೀಗಾಗಿ ದಕ್ಷಿಣ ಕೊರಿಯ ಆಡಳಿತ ಚಿಂತಾಕ್ರಾಂತವಾಗಿದೆ.

ಒಂದು ಸುತ್ತಿನ ಕೋವಿಡ್ ಹಾವಳಿಯನ್ನು ಯಶಸ್ವಿಯಾಗಿ ನಿಯಂತ್ರಿಸಿ ವಿಶ್ವವನ್ನು ಬೆರಗಾಗಿಸಿದ್ದ ದೇಶಕ್ಕೆ ಎರಡನೇ ಸುತ್ತಿನ ಹಾವಳಿ ನುಂಗಲಾರದ ಬಿಸಿ ತುಪ್ಪದಂತಾಗಿದೆ. ಲಾಕ್‌ಡೌನ್‌ ಸಡಿಲಿಕೆ ಮಾಡಿದ ಬಳಿಕ ನೈಟ್‌ಕ್ಲಬ್‌ಗಳಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಆದರೆ ಈ ನೈಟ್‌ಕ್ಲಬ್‌ಗಳೇ ಕೋವಿಡ್ ಹಾಟ್‌ಸ್ಪಾಟ್‌ಗಳಾಗಿ ಬದಲಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸರಕಾರ ನೈಟ್‌ಕ್ಲಬ್‌ಗಳನ್ನು ಮುಚ್ಚುವ ಕುರಿತು ಚಿಂತಿಸುತ್ತಿದೆ. ಶನಿವಾರ ಒಂದು ದಿನದ ಮಟ್ಟಿಗೆ ಸೋಲ್‌ನ ನೈಟ್‌ಕ್ಲಬ್‌ಗಳನ್ನು ಮುಚ್ಚಲಾಗಿತ್ತು. 1500 ಮಂದಿ ನೈಟ್‌ಕ್ಲಬ್‌ಗಳಿಗೆ ಭೇಟಿ ನೀಡಿದ್ದು, ಹೀಗಾಗಿ ಕೋವಿಡ್ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿಯಿದೆ.

ವ್ಯಾಪಕವಾದ ಪರೀಕ್ಷೆ, ಸೋಂಕಿತರ ಸಂಪರ್ಕದಲ್ಲಿದ್ದ ವ್ಯಕ್ತಿಗಳ ತೀವ್ರ ಶೋಧ, ಕೋವಿಡ್ ಪತ್ತೆ ಹಚ್ಚುವ ಆ್ಯಪ್‌ ಈ ಮುಂತಾದ ಕ್ರಮಗಳನ್ನು ಕೈಗೊಂಡ ಪರಿಣಾಮವಾಗಿ ಚೀನದ ಪಕ್ಕದಲ್ಲಿದ್ದರೂ ಮೊದಲ ಹಂತದಲ್ಲಿ ದಕ್ಷಿಣ ಕೊರಿಯ  ಕೋವಿಡನ್ನು ನಿಯಂತ್ರಿಸುವಲ್ಲಿ ಸಫ‌ಲವಾಗಿತ್ತು ಹಾಗೂ ಇದಕ್ಕಾಗಿ ಭಾರೀ ಪ್ರಶಂಸೆಯನ್ನೂ ಗಿಟ್ಟಿಸಿತ್ತು. ವಿವಿಧ ದೇಶಗಳು ಕೊರಿಯ ಮಾದರಿಯನ್ನು ಅನುಸರಿಸುವ ಕುರಿತು ಮಾತನಾಡುತ್ತಿದ್ದವು. ಆದರೆ ಇದೀಗ ಎಲ್ಲ ಪ್ರಯತ್ನಗಳು ನೀರಿನಲ್ಲಿ ಹೋಮ ಮಾಡಿದಂತಾಗುವ ಲಕ್ಷಣಗಳು ಕಾಣಿಸುತ್ತಿವೆ.

ಟಾಪ್ ನ್ಯೂಸ್

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.