“ಸುಪ್ರೀಂ ಆದೇಶದ ನಂತರವೇ ಮಾತು’
Team Udayavani, Jul 12, 2019, 5:06 AM IST
ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದ್ಯ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಶಾಸಕರ ರಾಜೀನಾಮೆಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆ ಶುಕ್ರವಾರ
ನಡೆಯಲಿದ್ದು, ಸುಪ್ರೀಂಕೋರ್ಟ್ ಆದೇಶದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸಭೆ ನಂತರ ಮಾತನಾಡಿದ ಅವರು, 10 ಮಂದಿ ಶಾಸಕರು ಗುರುವಾರ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ಸದ್ಯ ನಾನು ಏನನ್ನೂ ಚರ್ಚಿಸುವುದಿಲ್ಲ. ಸುಪ್ರೀಂಕೋರ್ಟ್ ಆದೇಶದ ನಂತರ ಮಾತನಾಡುತ್ತೇನೆ ಎಂದು ಹೇಳಿದರು.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮಾತನಾಡಿ, ಸ್ಪೀಕರ್ ಅವರ ಮಾತಿನ ವೈಖರಿ ಗಮನಿಸಿದರೆ ವರ್ಷಾನುಗಟ್ಟಲೇ ರಾಜೀನಾಮೆ ಅಂಗೀಕರಿಸದಿರುವ ವಿಳಂಬ ಮಾದರಿ ಅನುಸರಿಸಿದಂತಿದೆ. ಸರ್ಕಾರ ಯಾವುದೇ ವಿಧೇಯಕಗಳನ್ನು ಮಂಡಿಸಲು ಅವಕಾಶ ನೀಡುವುದಿಲ್ಲ. ಯಾವುದೇ ಕಾರಣಕ್ಕೂ ಸಭಾತ್ಯಾಗ ಮಾಡುವುದಿಲ್ಲ. ಮುಂದಿನ ಹೋರಾಟದ ಬಗ್ಗೆ ಶುಕ್ರವಾರ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಶಾಸಕರ ರಾಜೀನಾಮೆ ಸಂಬಂಧ ಸ್ಪೀಕರ್ ಕೂಡಲೇ ಕ್ರಮ ಕೈಗೊಳ್ಳಬೇಕು.ಸುಪ್ರೀಂಕೋರ್ಟ್ ಆದೇಶ ಸಂವಿಧಾನ ಬದ್ಧವಾಗಿದೆ ಎಂದು ಹೇಳಿದರು.
ಬಿಜೆಪಿ ಶಾಸಕ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಶಾಸಕರು ರಾಜೀನಾಮೆ ನೀಡಿದ್ದರೂ ಅದನ್ನು ಅಂಗೀಕರಿಸಲು ಇಷ್ಟೊಂದು ಹಿಂಸೆ ನೀಡುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಣುಕು ಪ್ರಮಾಣ ವಚನ: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗುವುದಕ್ಕೂ ಮೊದಲು ಗುಂಪುಗೂಡಿದ್ದ ಶಾಸಕರು ಬಿಜೆಪಿ ಸರ್ಕಾರ ರಚನೆ ಬಗ್ಗೆಯೇ ಚರ್ಚೆಯಲ್ಲಿ ತೊಡಗಿದ್ದರು. ಕೆಲವರು ಸರ್ಕಾರ ರಚನೆಯಾಗಿದ್ದು, ತಮಗೆ ಇಂಥದ್ದೇ
ಸಚಿವ ಸ್ಥಾನ ಸಿಗಲಿದೆ ಎಂದು ಲಘು ಧಾಟಿಯಲ್ಲಿ ಮಾತಾಡಿಕೊಳ್ಳುತ್ತಿದ್ದರು. ಇನ್ನೂ ಕೆಲವರು, “…..’ಇಂತಹ ಹೆಸರಿನವನಾದ ಎಂಬಂತೆ ಅಣುಕು ಪ್ರಮಾಣ ವಚನ ಸ್ವೀಕಾರ ನಡೆಸಿ ಸಂತಸದಲ್ಲಿದ್ದರು ಎಂದು ಶಾಸಕರೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.