ಗದ್ದಲಕ್ಕೆ ಕೋಪಗೊಂಡ ಸ್ಪೀಕರ್‌ -ಲೋಕಸಭೆಗೆ ಕಲಾಪ ನಿರ್ವಹಿಸಲು ಬಾರದ ಓಂ ಬಿರ್ಲಾ

-ರಾಜ್ಯಸಭೆಯಲ್ಲಿ ಗದ್ದಲದ ನಡುವೆ 2 ವಿಧೇಯಕಗಳ ಅಂಗೀಕಾರ

Team Udayavani, Aug 3, 2023, 7:44 AM IST

SAMSATH

ನವದೆಹಲಿ: ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನ ಜು.20ರಿಂದ ಶುರುವಾದ ದಿನದಿಂದ ಇದುವರೆಗೆ ಸುಗಮ ಕಲಾಪ ನಡೆದೇ ಇಲ್ಲ. ಇದರಿಂದಾಗಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಕೋಪಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಇದೇ ಕಾರಣದಿಂದ ಅವರು ಬುಧವಾರ ಕಲಾಪಕ್ಕೆ ಹಾಜರಾಗಿಲ್ಲ.

ಸದನದಲ್ಲಿ ಗೌರವಯುತವಾಗಿ ಸಂಸದರು ವರ್ತಿಸುವವರೆಗೆ ಕಲಾಪ ನಿರ್ವಹಿಸಲು ಬರುವುದೇ ಇಲ್ಲ ಎಂದು ತೀರ್ಮಾನಿಸಿದ್ದಾರೆ ಎಂದು ಅವರ ಆಪ್ತ ವಲಯಗಳನ್ನು ಉಲ್ಲೇಖಿಸಿ ವರದಿಗಳು ಪ್ರಕಟಗೊಂಡಿವೆ.

ಆಡಳಿತ ಮತ್ತು ಪ್ರತಿಪಕ್ಷಗಳ ಮುಖಂಡರಿಗೆ ಸ್ಪೀಕರ್‌ ಬಿರ್ಲಾ ಅವರ ಅಸಂತೋಷವನ್ನು ತಿಳಿಯಪಡಿಸಲಾಗಿದೆ ಎಂದು ಸಂಸತ್‌ನ ಅಧಿಕಾರಿಗಳು ಹೇಳಿದ್ದಾರೆ. ಇದೇ ವೇಳೆ, ಸ್ಪೀಕರ್‌ ಅನುಪಸ್ಥಿತಿಯಲ್ಲಿ ಬಿಜೆಪಿ ಸದಸ್ಯ ಕಿರೀಟ್‌ ಸೋಲಂಕಿ ಅವರು ಕಲಾಪ ನಿರ್ವಹಿಸಿದರು. ಪ್ರತಿಪಕ್ಷಗಳು ಸಂಯಮ ವಹಿಸಿ ಕಲಾಪ ನಡೆಸಲು ಅನುವು ಮಾಡಿಕೊಡಬೇಕೆಂದು ಕೇಳಿದರೂ, ಸ್ಪಂದನೆ ವ್ಯಕ್ತವಾಗದ್ದರಿಂದ ಗುರುವಾರಕ್ಕೆ ಕಲಾಪ ಮುಂದೂಡಿದ್ದಾರೆ.

ವಿಧೇಯಕ ಅಂಗೀಕಾರ: ಪ್ರತಿಪಕ್ಷಗಳ ಗದ್ದಲದ ನಡುವೆಯೇ ರಾಜ್ಯಸಭೆಯಲ್ಲಿ ಖಾಸಗಿ ವಲಯಕ್ಕೆ ಲೀಥಿಯಂ ಸೇರಿದಂತೆ ಆರು ಖನಿಜಗಳ ಕ್ಷೇತ್ರದಲ್ಲಿ ಗಣಿಗಾರಿಕೆ ನಡೆಸಲು ಅನುವು ಮಾಡಿಕೊಡುವ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ವಿಧೇಯಕ 2023ಕ್ಕೆ ಅನುಮೋದನೆ ಪಡೆದುಕೊಳ್ಳಲಾಗಿದೆ. ವಿಶೇಷವಾಗಿ ಪರಮಾಣು ಕ್ಷೇತ್ರದಲ್ಲಿ ಅವುಗಳ ಉಪಯೋಗ ಹೆಚ್ಚಾಗಿದೆ. ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ಅದರ ಬಗ್ಗೆ ಮಾತನಾಡಿದರು. ಇದರ ಜತೆಗೆ ಮೇಲ್ಮನೆಯಲ್ಲಿ ಅರಣ್ಯ (ಸಂರಕ್ಷಣೆ ) ತಿದ್ದುಪಡಿ ವಿಧೇಯಕಕ್ಕೆ ಕೂಡ ಪ್ರತಿಪಕ್ಷಗಳ ಅನುಪಸ್ಥಿತಿಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ.

ಪ್ರಧಾನಿಗೆ ಮಾತಾಡಲು ಸೂಚಿಸಿ: ರಾಷ್ಟ್ರಪತಿಗೆ ಮನವಿ
ಮಣಿಪುರ ಹಿಂಸಾಚಾರದ ವಿಚಾರದಲ್ಲಿ ಸಂಸತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾತನಾಡಲು ಸೂಚಿಸಿ. ಹೀಗೆಂದು ಪ್ರತಿಪಕ್ಷಗಳ ಒಕ್ಕೂಟ ಐ.ಎನ್‌.ಡಿ.ಐ.ಎ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಮಾಡಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಪಕ್ಷಗಳ ನಿಯೋಗ ಮುರ್ಮು ಅವರಿಗೆ ಮನವಿ ಸಲ್ಲಿಸಿದೆ. ಬಳಿಕ ಮಾತನಾಡಿದ ಖರ್ಗೆ “ಗಲಭೆ ಪೀಡಿತ ರಾಜ್ಯಕ್ಕೆ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವಂತೆ ಮತ್ತು ಸಂಸತ್‌ನಲ್ಲಿ ಹೇಳಿಕೆ ನೀಡುವಂತೆ ರಾಷ್ಟ್ರಪತಿಗಳಿಗೆ ಪ್ರತಿಪಕ್ಷಗಳ 31 ಮುಖಂಡರ ನಿಯೋಗ ಮನವಿ ಮಾಡಿದೆ. ಇದಲ್ಲದೆ ಹರ್ಯಾಣದ ನೂಹ್‌ನಲ್ಲಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ಕೂಡ ರಾಷ್ಟ್ರಪತಿಗಳ ಗಮನ ಸೆಳೆಯಲಾಗಿದೆ’ ಎಂದರು.

ಪ್ರಧಾನಿಗಳು ಸಂಸತ್‌ನಲ್ಲಿ ಹೇಳಿಕೆ ನೀಡಬೇಕು ಎನ್ನುವುದೇ ಪ್ರಧಾನ ಬೇಡಿಕೆ. 92 ದಿನಗಳಿಂದ ಮಣಿಪುರದಲ್ಲಿ ಹಿಂಸೆಯ ವಾತಾವರಣವೇ ಇದೆ. ಸರಿ ಸುಮಾರು 200 ಮಂದಿ ಅಸುನೀಗಿದ್ದಾರೆ, 500 ಮಂದಿ ಗಾಯಗೊಂಡಿದ್ದಾರೆ. ಜತೆಗೆ 60 ಸಾವಿರಕ್ಕೂ ಅಧಿಕ ಮಂದಿ ನಿರ್ವಸಿತರಾಗಿದ್ದಾರೆ. ಹೀಗಾಗಿ, ನರೇಂದ್ರ ಮೋದಿಯವರ ಹೇಳಿಕೆ ಮಹತ್ವ ಪಡೆಯುತ್ತದೆ ಎಂದರು.

ಸದನಕ್ಕೆ ಬನ್ನಿ ಎಂದು ಪ್ರಧಾನಿಗೆ ಸೂಚಿಸಲು ಸಾಧ್ಯವಿಲ್ಲ
ಮಣಿಪುರ ವಿಚಾರದಲ್ಲಿ ಸಂಸತ್‌ನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸುತ್ತಿರುವ ಪ್ರತಿಪಕ್ಷಗಳು ಈಗ ಅಧಿವೇಶನಕ್ಕೆ ನರೇಂದ್ರ ಮೋದಿ ಬರಬೇಕು ಎಂದು ಆಗ್ರಹಿಸಿವೆ. ಈ ಬಗ್ಗೆ ಅವರಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯಸಭೆ ಸಭಾಪತಿ ಜಗದೀಪ್‌ ಧನ್ಕರ್‌ “ಸದನಕ್ಕೆ ಬರಬೇಕು ಎಂದು ಪ್ರಧಾನಿಯವರಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ನಾನು ಆ ರೀತಿ ನಡೆದುಕೊಳ್ಳಲಾರೆ. ಅಧಿವೇಶನದಲ್ಲಿ ಹಾಜರಾಗಬೇಕು ಎನ್ನುವುದು ಸಂಸತ್‌ ಸದಸ್ಯರ ವಿವೇಚನೆಗೆ ಬಿಟ್ಟ ವಿಚಾರ, ಪ್ರಧಾನಿಯವರಿಗೂ ಅದು ಅನ್ವಯಿಸುತ್ತದೆ ಎಂದರು. ಆ ಹೇಳಿಕೆ ಖಂಡಿಸಿ ಪ್ರತಿಪಕ್ಷಗಳು ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿದವು.

ಪ್ರತಿಪಕ್ಷಗಳ ಮುಖಂಡರಿಗೆ ಸಂಸತ್‌ನಲ್ಲಿ ಚರ್ಚೆ ನಡೆಸಲು ಆಸಕ್ತಿಯೇ ಇಲ್ಲ. ವಿನಾ ಕಾರಣ ಮಣಿಪುರ ವಿಚಾರ ಮುಂದಿಟ್ಟು ಗದ್ದಲ ನಡೆಸುತ್ತಿವೆ. ಪ್ರತಿಪಕ್ಷಗಳ ಪ್ರಶ್ನೆಗೆ ಸರ್ಕಾರದ ಉತ್ತರವಿದೆ ಎನ್ನುವುದು ಅವರಿಗೂ ತಿಳಿದಿದೆ.
ಸುಶೀಲ್‌ ಕುಮಾರ್‌ ಮೋದಿ, ಬಿಜೆಪಿ ರಾಜ್ಯಸಭೆ ಸದಸ್ಯ

ಆಪ್‌ಗೆ ಆಘಾತ ನೀಡಿದ ಟಿಡಿಪಿ
ದೆಹಲಿ ಆಡಳಿತಾತ್ಮಕ ಸೇವೆಗಳ ವಿಧೇಯಕದ ವೇಳೆ ಅಚ್ಚರಿಯ ಬೆಳವಣಿಗೆ ನಡೆದಿದೆ. ಆಪ್‌ ಪರ ನಿಲ್ಲಬಹುದು ಎಂದು ಭಾವಿಸಲಾಗಿದ್ದ ಟಿಡಿಪಿ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಿದೆ. ಇದರಿಂದಾಗಿ ಆಪ್‌ಗೆ ಭಾರೀ ಹಿನ್ನಡೆ ಉಂಟಾಗಿದೆ. ಬೆಂಬಲ ಪಡೆಯುವ ನಿಟ್ಟಿನಲ್ಲಿ ಪ್ರತಿಪಕ್ಷಗಳ ಮುಖಂಡರನ್ನು ಭೇಟಿ ಮಾಡುವ ಸರಣಿಯಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರನ್ನೂ ಭೇಟಿಯಾಗಿದ್ದರು. ಬಿಜೆಡಿ, ವೈಎಸ್‌ಆರ್‌ಸಿಪಿ ಕೂಡ ಕೇಂದ್ರ ಸರ್ಕಾರದ ಪರ ನಿಂತಿವೆ.

 

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.