Voter list: ಮತದಾರರ ಪಟ್ಟಿ ಪರಿಷ್ಕರಣೆಗೆ ವಿಶೇಷ ಅಭಿಯಾನ
Team Udayavani, Aug 9, 2023, 9:33 PM IST
ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರನ್ನು ಸೇರಿಸುವ ಉದ್ದೇಶದಿಂದ ಭಾರತ ಚುನಾವಣಾ ಆಯೋಗವು ನಡೆಸುತ್ತಿರುವ “ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಹಿನ್ನೆಲೆಯಲ್ಲಿ ವಿಶೇಷ ಅಭಿಯಾನ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದೆ.
ಅದರಂತೆ, ಪ್ರತಿ ದಿನ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳು ತಮ್ಮ ಅಧಿಕೃತ ಜಾಲತಾಣಗಳಲ್ಲಿ, ಟ್ವೀಟರ್ ಖಾತೆಗಳಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಸಂಬಂಧ ಕನಿಷ್ಠ ಎರಡು ಅಂಶಗಳನ್ನು ವಿನಿಯಮ ಮಾಡಬೇಕು. ಅದನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತ್ತು ಭಾರತ ಚುನಾವಣಾ ಆಯೋಗಕ್ಕೂ ಟ್ಯಾಗ್ ಮಾಡಬೇಕು.
ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳು, ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರು, ಅಲೆಮಾರಿ ಜನಾಂಗ, ಲಿಂಗಪರಿವರ್ತಿತರು, ತೃತೀಯ ಲಿಂಗಿಗಳು, ದಮನಿತ ಮಹಿಳೆಯರು (ಲೈಂಗಿಕ ಕಾರ್ಯಕರ್ತೆಯರು), ವಿಶೇಷ ಚೇತನರು, ಸಮಾಜದ ಮಖ್ಯ ವಾಹಿನಿಯಿಂದ ಹೊರಗಿರುವವರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸಲು ಪ್ರೇರೇಪಿಸುವಂತೆ ವಿಶೇಷ ಅಭಿಯಾನ ಹಮ್ಮಿಕೊಳ್ಳಬೇಕು.
ಅಭಿಯಾನಕ್ಕಾಗಿ ವಿವಿಧ ರೀತಿಯ ಪೋಸ್ಟರ್, ಬ್ಯಾನರ್, ಹೋರ್ಡಿಂಗ್ಸ್, ಡಿಜಿಟಲ್ ಮಿಡಿಯಾ ಇತ್ಯಾದಿಗಳನ್ನು ಬಳಕೆ ಮಾಡಿಕೊಂಡು ತಮ್ಮ ಇಲಾಖೆಗಳ ಮುಂಭಾಗದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಬೇಕು. ರೇಡಿಯೋ ಜಿಂಗಲ್ಸ್‌ಗಳನ್ನು, ವಿಡಿಯೋಗಳನ್ನು ಮತ್ತು ಇತರೇ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡು ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ನೋಂದಣಿ ಮತ್ತು ಪರಿಶೀಲನೆ ಮಾಡುವ ಸಲುವಾಗಿ ಹೈಕೋರ್ಟ್ ನ್ಯಾಯಮೂರ್ತಿಗಳು, ಸಿಬ್ಬಂದಿ, ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರು ಹಾಗೂ ಸಿಬ್ಬಂದಿ, ಇತರೆ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ಸಿಬ್ಬಂದಿ, ವಕೀಲರ ಸಂಘದ ಸದಸ್ಯರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರಕ್ಕಾಗಿ ಚುನಾವಣಾ ಪಾಠಾಶಾಲಾ/ಚುನಾವಣಾ ಜಾಗೃತಿ ಸಂಘ, ಮತದಾರರ ಸಾಕ್ಷರತಾ ಸಂಘಗಳ ಸದಸ್ಯರುಗಳಿಗೆ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದೆಯೇ ಪರಿಶೀಲಿಸಿ ಮತ್ತು ನೋಂದಾಯಿಸಿ ಎಂಬ ವಿಶೇಷ ಅಭಿಯಾನ ಹಮ್ಮಿಕೊಳ್ಳಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.