Karnataka: ಗೌರಿ, ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ವಿಶೇಷ ಕೋರ್ಟ್
Team Udayavani, Dec 7, 2023, 1:09 AM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಸಂಶೋಧಕ ಡಾ| ಎಂ. ಎಂ. ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಲು ವಿಶೇಷ ನ್ಯಾಯಾಲಯ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಅದಕ್ಕೆ ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಕಲಬುರ್ಗಿ ಅವರ ಪತ್ನಿ ಉಮಾದೇವಿ ಮತ್ತು ಗೌರಿ ಅವರ ಸೋದರಿ ಕವಿತಾ ಲಂಕೇಶ್ ಅವರು ವಿಶೇಷ ನ್ಯಾಯಾಲಯ ರಚಿಸುವಂತೆ ತಮ್ಮನ್ನು ಕೋರಿರುವ ಹಿನ್ನೆಲೆ
ಯಲ್ಲಿ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.