ಕೋವಿಡ್ ನಿಯಮದಿಂದ ತಪ್ಪಿಸಿಕೊಳ್ಳಲು ವಿಮಾನದಲ್ಲಿ ಮದುವೆ; ವೈರಲ್ ವಿಡಿಯೋದಿಂದ ತನಿಖೆಯ ಬಿಸಿ!
ದೂರು ದಾಖಲಿಸುವಂತೆ ಸ್ಪೈಸ್ ಜೆಟ್ ಗೆ ಸೂಚಿಸಲಾಗಿದೆ ಎಂದು ಡಿಜಿಸಿಎ ತಿಳಿಸಿರುವುದಾಗಿ ವರದಿ ಹೇಳಿದೆ.
Team Udayavani, May 24, 2021, 4:53 PM IST
ಮದುರೈ: ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಹಾಗೂ ಕಠಿಣ ಮಾರ್ಗಸೂಚಿ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ವಿವಾಹ ಸೇರಿದಂತೆ ಜಾತ್ರೆ, ಸಮಾರಂಭಗಳಿಗೆ ನಿರ್ಬಂಧ ವಿಧಿಸಲಾಗಿದೆ. ಆದರೆ ತಮಿಳುನಾಡಿನ ಮದುರೈಯಲ್ಲಿ ಜೋಡಿಯೊಂದು ಕೋವಿಡ್ ನಿಯಮ ತಪ್ಪಿಸಿಕೊಳ್ಳಲು ವಿಮಾನದಲ್ಲಿ ವಿವಾಹವಾಗಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿಯಾಗಿ ವೈರಲ್ ಆದ ಬೆನ್ನಲ್ಲೇ ಅವರಿಗೆ ತನಿಖೆಯ ಬಿಸಿ ಮುಟ್ಟಿದೆ!
ಕೋವಿಡ್ ನಿಯಮದಿಂದ ತಪ್ಪಿಸಿಕೊಳ್ಳಲು ಮದುರೈಯ ಯುವಜೋಡಿಯೊಂದು ಬೆಂಗಳೂರಿಗೆ ತಲುಪುವ ವಿಮಾನವನ್ನು ಬಾಡಿಗೆ ಪಡೆದು ಮಾರ್ಗಮಧ್ಯೆದಲ್ಲಿಯೇ ವಿವಾಹವಾಗಿದ್ದರು. ಈ ಸಂದರ್ಭದಲ್ಲಿ ವಧು, ವರನ ಸಂಬಂಧಿಕರು, ಆಪ್ತರು ಎಲ್ಲರೂ ಹಾಜರಿದ್ದರು ಎಂದು ವರದಿ ತಿಳಿಸಿದೆ.
A couple tied the knot on-board a chartered flight from Madurai, Tamil Nadu. Their relatives & guests were on the same flight.
“A SpiceJet chartered flight was booked y’day from Madurai. Airport Authority officials unaware of the mid-air marriage ceremony,” says Airport Director pic.twitter.com/wzMCyMKt5m
— ANI (@ANI) May 24, 2021
ಬೋಯಿಂಗ್ 737 ವಿಮಾನದಲ್ಲಿ ಅತಿಥಿಗಳು, ಸಂಬಂಧಿಕರು ಇದ್ದಿರುವುದು ವೈರಲ್ ಆದ ವಿಡಿಯೋ ಮತ್ತು ಫೋಟೊಗಳಿಂದ ಬಹಿರಂಗವಾಗಿತ್ತು. ಒಂದು ವಿಡಿಯೋದಲ್ಲಿ ವರ ವಧುವಿನ ಮಂಗಳಸೂತ್ರ ಕಟ್ಟುವ ವೇಳೆ ಜನರ ಗುಂಪು ಕೂಡಾ ಸೆರೆಯಾಗಿತ್ತು. ವಿಮಾನದಲ್ಲಿ ಕುಳಿತಿರುವ ಜನರು ಯಾರೂ ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರವನ್ನೂ ಕಾಪಾಡಿಲ್ಲ ಎಂಬುದು ವೈರಲ್ ಆದ ವಿಡಿಯೋದಿಂದ ಬಹಿರಂಗವಾಗಿದೆ.
ವಿಮಾನದಲ್ಲಿ ವಿವಾಹವಾದ ಜೋಡಿ ಹಾಗೂ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ತನಿಖೆಯನ್ನು ಆರಂಭಿಸಿದೆ. ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ದಾಖಲಿಸುವಂತೆ ಸ್ಪೈಸ್ ಜೆಟ್ ಗೆ ಸೂಚಿಸಲಾಗಿದೆ ಎಂದು ಡಿಜಿಸಿಎ ತಿಳಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.