Karnataka: ರಾಜ್ಯದ 70 ಎಕ್ರೆ ಪ್ರದೇಶದಲ್ಲಿ ಕ್ರೀಡಾನಗರಿ- ಡಾ| ಜಿ. ಪರಮೇಶ್ವರ್
Team Udayavani, Dec 26, 2023, 11:29 PM IST
ಬೆಂಗಳೂರು: ಕರ್ನಾಟಕದಲ್ಲಿ 70 ಎಕ್ರೆ ಪ್ರದೇಶದಲ್ಲಿ ಕ್ರೀಡಾನಗರ (ಸ್ಫೋರ್ಟ್ಸ್ ಸಿಟಿ) ಮಾಡುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಬಂದಿದ್ದು, ಮುಂದಿನ ದಿನಗಳಲ್ಲಿ ಇದನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ಒಲಿಂಪಿಕ್ ಅಸೋಸಿಯೇ ಶನ್‌ನ 2023ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, “ರಾಜ್ಯದ ಎಲ್ಲ ಇಲಾಖೆಗಳಲ್ಲೂ ಶೇ. 3ರಷ್ಟು ಕ್ರೀಡಾ ಮೀಸಲಾತಿ ನೀಡಲು ನಿರ್ಧರಿಸಲಾ ಗಿದೆ. ಕ್ರೀಡೆಗೆ ಯುವಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಶೇ. 2ರಷ್ಟಿದ್ದ ಕ್ರೀಡಾ ಕೋಟಾದ ಮೀಸಲಾತಿಯನ್ನು ಶೇ. 3ಕ್ಕೆ ಹೆಚ್ಚಿಸಲಾಗಿದೆ. ಕಳೆದ 2 ವರ್ಷಗಳಿಂದ 180 ಮಂದಿ ಪೊಲೀಸರು ಕ್ರೀಡಾ ಕೋಟಾ ದಲ್ಲಿ ನೇಮಕಗೊಂಡಿದ್ದಾರೆ’ ಎಂದರು.
ಕ್ರೀಡಾ ವಿವಿ ಅಗತ್ಯ
ವಿದೇಶಗಳಲ್ಲಿರುವಂತೆಯೇ ಕರ್ನಾಟಕದಲ್ಲೂ ಕ್ರೀಡಾ ವಿಶ್ವವಿದ್ಯಾನಿಲಯ ನಿರ್ಮಿಸುವ ಅಗತ್ಯವಿದೆ. ಈ ಬಗ್ಗೆ ಮುಂದಿನ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದರೆ 5 ಕೋಟಿ ರೂ., ಬೆಳ್ಳಿ ಪದಕಕ್ಕೆ 3, ಕಂಚಿಗೆ 2 ಕೋಟಿ ರೂ. ಹಾಗೂ ಏಷ್ಯನ್ಸ್ ಗೇಮ್ಸ್‌ನಲ್ಲಿ ಪದಕ ಪಡೆದವರಿಗೆ 25 ಲಕ್ಷ ರೂ. ಸರಕಾರದಿಂದ ನೀಡಲಾಗುತ್ತಿದೆ’ ಎಂದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, ಸಚಿವ ಬಿ. ನಾಗೇಂದ್ರ, ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ. ಕೆ. ಗೋವಿಂದರಾಜ್, ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.