ಸಾಯ್ ಕ್ರಮ: ಕ್ರೀಡಾ ಸಚಿವ ರಿಜಿಜು ಪರಿಶೀಲನೆ
Team Udayavani, Apr 8, 2020, 5:55 AM IST
ಹೊಸದಿಲ್ಲಿ: ಕೋವಿಡ್ 19 ದಿಂದಾಗಿ ದೇಶದೆಲ್ಲೆಡೆ 21 ದಿನ ಲಾಕ್‌ಡೌನ್ ಇರುವುದರಿಂದ ಆ್ಯತ್ಲೀಟ್‌ಗಳು ಈ ಅಮೂಲ್ಯ ಸಮಯವನ್ನು ಬಳಸಿ ಕೊಳ್ಳಲು ಕ್ರೀಡಾ ಸಚಿವಾಲಯ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ತೆಗೆದುಕೊಂಡಿರುವ ಕ್ರಮಗಳ ಪರಿಶೀಲನೆಯನ್ನು ಮಂಗಳವಾರ ಕೇಂದ್ರದ ಕ್ರೀಡಾ ಸಚಿವ ಕಿರಣ್ ರಿಜಿಜು ಮಾಡಿದರು.
ದೇಶಾದ್ಯಂತ ಇರುವ ಸಾಯ್ ಕೇಂದ್ರಗಳ ವಲಯ ನಿರ್ದೇಶಕರ ಜತೆ ವೀಡಿಯೊ ಕಾನೆ#ರನ್ಸ್ ನಡೆಸಿದ ರಿಜಿಜು ಅವರು ಪರಿಸ್ಥಿತಿಯ ಅವಲೋಕನ ನಡೆಸಿದರು. ಲಾಕ್‌ಡೌನ್ ಬಳಿಕ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಅವರು ಚರ್ಚಿಸಿದರು. ಕಾನೆ#ರೆನ್ಸ್ ವೇಳೆ ಸಾಯ್ ಮತ್ತು ಕ್ರೀಡಾ ಸಚಿವಾಲಯದ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಆಟಗಾರರ ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ಸಮಯದ ಉಪಯೋಗವನ್ನು ಯಾವ ರೀತಿ ಮಾಡುತ್ತಿದ್ದಾರೆ ಎಂದು ತಿಳಿಯಲು ಈ ಕಾನೆ#ರೆನ್ಸ್ ಅನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನಲ್ಲಿರುವ ಸಾಯ್ ದಕ್ಷಿಣ ಕೇಂದ್ರ ಮತ್ತು ಪಟಿಯಾಲದಲ್ಲಿರುವ ರಾಷ್ಟ್ರೀಯ ಇನ್‌ಸ್ಟಿಟ್ಯೂಟ್ ಆಫ್ ನ್ಪೋರ್ಟ್ಸ್ ಬಿಟ್ಟರೆ ಉಳಿದ ಯಾವುದೇ ಕೇಂದ್ರದಲ್ಲಿ ಯಾವುದೇ
ಆ್ಯತ್ಲೀಟ್‌ಗಳಿಲ್ಲ. ಬೆಂಗಳೂರು ಕೇಂದ್ರದಲ್ಲಿ
ಪುರುಷ ಮತ್ತು ವನಿತಾ ಹಾಕಿ ತಂಡದ ಸದಸ್ಯರು ಸಾಮಾಜಿಕ ಅಂತರ ಕಾಯ್ದುಕೊಂಡು ತರಬೇತಿ ನಡೆಸುತ್ತಿದ್ದಾರೆ. ಮನೆಯಲ್ಲಿ ಉಳಿದುಕೊಂಡಿರುವ ಆ್ಯತ್ಲೀಟ್‌ಗಳು ಅಭ್ಯಾಸದ ಜತೆ ಸಾಯ್ ಪ್ರತಿದಿನ ನಡೆಸುತ್ತಿರುವ ಆನ್‌ಲೈನ್ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿದೆ. ಈ ಕಾರ್ಯ ಕ್ರಮದಲ್ಲಿ ತಜ್ಞರು ದೈಹಿಕ ಫಿಟ್‌ನೆಸ್, ಪೌಷ್ಟಿಕ ಆಹಾರ ಸಹಿತ ಕ್ರೀಡಾಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ ಗಳ ಕುರಿತು ಮಾರ್ಗದರ್ಶನ ನೀಡುತ್ತಾರೆ.
ಮೇಲ್ವಿಚಾರಣೆ
ಆಟಗಾರರು ತಮ್ಮ ದೇಹದ ತೂಕವನ್ನು ಯಾವ ರೀತಿ ಕಾಪಾಡುತ್ತಿದ್ದಾರೆ, ತಮ್ಮ ಕೋಚ್, ತಜ್ಞರ ಜತೆ ಯಾವ ರೀತಿ ಸಂಪರ್ಕ ಇಟ್ಟುಕೊಂಡಿದ್ದಾರೆ ಎಂಬ ಕುರಿತು ತಂಡವೊಂದು ಪ್ರತಿದಿನ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಸಾಯ್ ಅಧಿಕಾರಿಗಳು ರಿಜಿಜು ಅವರಿಗೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಲಾಕ್‌ಡೌನ್ ಮಾರ್ಗಸೂಚಿಯನ್ನು ಶಿಸ್ತಿನಿಂದ ಪಾಲಿಸುತ್ತಿರುವ ಕ್ರೀಡಾಪಟುಗಳನ್ನು ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.