Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ
Team Udayavani, Nov 27, 2024, 11:25 PM IST
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ಕಾರ್ತಿಕ ಬಹುಳ ದ್ವಾದಶಿಯಾದ ಬುಧವಾರ ಕೊಪ್ಪರಿಗೆ ಏರುವುದರ ಮೂಲಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭವಾಯಿತು. ಎಲ್ಲ ಕ್ಷೇತ್ರಗಳಲ್ಲಿ ಕೊಡಿ ಏರುವುದರ ಮೂ ಲಕ ಜಾತ್ರೆ ಆರಂಭವಾದರೆ, ಕುಕ್ಕೆಯಲ್ಲಿ ಮಾತ್ರ ಕೊಪ್ಪರಿಗೆ ಏರುವುದರೊಂದಿಗೆ ಜಾತ್ರೋತ್ಸವ ಆರಂಭವಾಗುತ್ತದೆ.
ಬುಧವಾರ ಮುಂಜಾನೆ 7.42ರ ವೃಶ್ಚಿಕ ಲಗ್ನ ಸುಮು ಹೂರ್ತದಲ್ಲಿ ಅವಳಿ ಕೊಪ್ಪರಿಗೆಗಳನ್ನು ಏರಿಸಲಾಯಿತು. ಪೂರ್ವಶಿಷ್ಠ ಸಂಪ್ರದಾಯದಂತೆ ದೇಗುಲದ ಪ್ರಧಾನ ಅರ್ಚಕ ವೇ| ಸೀತಾರಾಮ ಎಡಪಡಿತ್ತಾಯ ಅವರು ವಿವಿಧ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.
ಆರಂಭದಲ್ಲಿ ಪ್ರಧಾನ ಅರ್ಚಕರು “ರಾಮ ಲಕ್ಷ್ಮಣ’ ಹೆಸರಿನ ಜೋಡಿ ಅನ್ನದ ಕೊಪ್ಪರಿಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಅನಂತರ ದೇಗುಲದ ಒಳಾಂಗಣದಲ್ಲಿರುವ ದೊಡ್ಡದಾದ ಎರಡು ಒಲೆಗಳ ಮೇಲೆ ಅನ್ನದಾನದ ಸಂಕೇತವಾದ ಕೊಪ್ಪರಿಗೆಗಳನ್ನು ಏರಿಸಲಾಯಿತು.
ದೇಗುಲದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತ ಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ನ.28 ಮತ್ತು 29ರಂದು ಶೇಷ ವಾಹನಯುಕ್ತ ಬಂಡಿ ಉತ್ಸವ, ನ.30 ರಂದು ಲಕ್ಷದೀಪೋತ್ಸವ ನಡೆಯಲಿದೆ. ಡಿ.1ರಂದು ಶೇಷವಾಹನೋತ್ಸವ, 2ರಂದು ಅಶ್ವವಾಹನೋತ್ಸವ, 3ರಂದು ಮಯೂರ ವಾಹ ನೋತ್ಸವ, 4ರಂದು ಶೇಷವಾಹನೋತ್ಸವ, 5ರಂದು ಚೌತಿ ಹೂವಿನ ತೇರಿನ ಉತ್ಸವ, 6ರಂದು ಪಂಚಮಿ ದಿನ ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ, 7ರಂದು ಚಂಪಾ ಷಷ್ಠಿ ಮಹಾರಥೋತ್ಸವ, 8ರಂದು ಅವಭೃಥೋತ್ಸವ ಮತ್ತು ನೌಕವಿಹಾರ, 12ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೆ ಸಮಾಪನಗೊಳ್ಳಲಿದೆ. ರಾತ್ರಿ ನೀರಿನಲ್ಲಿ ಬಂಡಿ ಉತ್ಸವ, ದೈವಗಳ ನಡಾವಳಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್!
Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.