ಸಚಿವ ಶ್ರೀಮಂತ ಪಾಟೀಲ್‌ರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ
Team Udayavani, Feb 12, 2021, 4:00 AM IST
ಉಳ್ಳಾಲ: ಮಂಗಳೂರು ವಿಧಾನಸಭೆ ಕ್ಷೇತ್ರ ಉಳ್ಳಾಲ ತಾಲೂಕು ಆಗಿ ಘೋಷಣೆಯಾಗುತ್ತಿದ್ದಂತೆ ಶಿಕ್ಷಣ ಕ್ಷೇತ್ರಕ್ಕೂ ಆದ್ಯತೆ ನೀಡುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಡಿ ಶೈಕ್ಷಣಿಕ ಕ್ಷೇತ್ರಕ್ಕೆ ಸರಕಾರದ ಅನುದಾನ ಬಿಡುಗಡೆಯಾಗುತ್ತಿದ್ದು, ಗುರುವಾರ ದ.ಕ. ಜಿಲ್ಲಾಡಳಿತ ಹಾಗೂ ಅಲ್ಪ ಸಂಖ್ಯಾಕರ ಕಲ್ಯಾಣ ಇಲಾಖೆಯಡಿ 37 ಕೋ.ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ಪಸಂಖ್ಯಾಕ ಬಾಲಕರ ವಸತಿ ಶಾಲೆ ನೂತನ ಕಟ್ಟಡ ಮತ್ತು ಕೊಣಾಜೆ ಅಸೈಗೋಳಿಯಲ್ಲಿ ನಿರ್ಮಾಣ ಗೊಂಡ ಮೊರಾರ್ಜಿ ದೇಸಾಯಿ ಹೆಣ್ಮಕ್ಕಳ ಪ್ರೌಢಶಾಲೆಯ ನೂತನ ಕಟ್ಟಡವನ್ನು ಜವಳಿ, ಕೈಮಗ್ಗ ಹಾಗೂ ಅಲ್ಪಸಂಖ್ಯಾಕ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಬಾಳಾಸಾಹೇಬ ಪಾಟೀಲ ಉದ್ಘಾಟಿಸಿದರು.
ಈ ಸಂದರ್ಭ 10 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಕೊಣಾಜೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಸಹಿತ 7 ಕೋ.ರೂ. ವೆಚ್ಚದಲ್ಲಿ ಬೋಳಿಯಾರ್, ಮಂಜನಾಡಿ, ಪುದು ಪರಂಗಿಪೇಟೆ ಇಲ್ಲಿ ನಿರ್ಮಾಣಗೊಳ್ಳಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಕೊಣಾಜೆ ಅಲ್ಪಸಂಖ್ಯಾಕ ವಿದ್ಯಾರ್ಥಿನಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿ ನಿಯರಲ್ಲಿ ವ್ಯವಸ್ಥೆಯ ಬಗ್ಗೆ ಸಮಾಲೋಚಿಸಿದರು.
ಕಳಪೆ ಕಾಮಗಾರಿ: ಸಚಿವರಿಂದ ಅಸಮಾಧಾನ
ಕೊಣಾಜೆ ಅಸೈ ಮದಕ ಅಲ್ಪಸಂಖ್ಯಾಕ ವಸತಿ ಶಾಲೆಯನ್ನು ಉದ್ಘಾಟಿಸಿದ ಸಚಿವರು, ಕಟ್ಟಡದ ಗುಣಮಟ್ಟ ವೀಕ್ಷಿಸಿ ಕಟ್ಟಡಕ್ಕೆ ಅಳವಡಿಸಿದ ಕಬ್ಬಿಣದ ಸರಳುಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಕಟ್ಟಡದ ವಿನ್ಯಾಸದಲ್ಲಿ ಲೋಪಗಳಿವೆ ಎಂದು ತಿಳಿಸಿದ ಅವರು ಕರಾವಳಿ ಸಮುದ್ರ ತೀರಭಾಗದಲ್ಲಿ ವಿದ್ಯಾರ್ಥಿಗಳು ಇರುವ ಜಾಗ ದಲ್ಲಿ ತೆಳುವಾದ ಸರಳು ಅಳವಡಿಸಿದರೆ ಅಪಾಯ ಸಂಭವಿಸಬಹುದು. ಮುಂದಿನ ಯೋಜನೆಗಳಲ್ಲಿ ಇಂತಹ ಬೇಜವಾಬ್ದಾರಿ ಪುನರಾವರ್ತನೆ ಆಗಬಾರದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.