ಬೀದರ್ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೋವಿಡ್ ಸೋಂಕು ದೃಢ ; ಶಾಲೆಗೆ ರಜೆ
Team Udayavani, Jan 8, 2021, 6:35 PM IST
ಬೀದರ್ : ಕೋವಿಡ್- 19 ಸೋಂಕು ಕಡಿಮೆಯಾಗುತ್ತಿರುವ ಸಮಾಧಾನದ ನಡುವೆಯೇ ತಾಲೂಕಿನ ರೇಕುಳಗಿ ಸರ್ಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬನಿಗೆ ಪಾಸಿಟಿವ್ ಕಂಡು ಬಂದಿದ್ದು ಆತಂಕ ಹೆಚ್ಚಿಸಿದೆ. ಹೀಗಾಗಿ, ಶಾಲೆಗೆ ರಜೆ ಘೋಷಿಸಲಾಗಿದೆ.
ಕೋವಿಡ್ ಸೋಂಕು ಕಂಡು ಬಂದ ಜಿಲ್ಲೆಯ ಮೊದಲ ವಿದ್ಯಾರ್ಥಿ ಈತನಾಗಿದ್ದು, ಕೂಡಲೇ ವಿದ್ಯಾರ್ಥಿಗೆ ಬೇರೆ ವಿದ್ಯಾರ್ಥಿಗಳಿಂದ ಪ್ರತ್ಯೇಕಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಜತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ 10 ಜನ ಶಿಕ್ಷಕರು ಹಾಗೂ ಓರ್ವ ಶಾಲಾ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಶಾಲಾ ಆರಂಭದ ವೇಳೆ ಮಾಡಿಸಲಾದ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರು ಶಾಲೆಗೆ ಬಾರದ ಹಿನ್ನೆಲೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. ಎಲ್ಲರಿಗೂ ಆಸ್ಪತ್ರೆ ಹಾಗೂ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಡಿಪಿಐ ಗಂಗಣ್ಣ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಕೇಂದ್ರ, ರೈತ ಸಂಘಟನೆ ನಡುವಿನ 8ನೇ ಸುತ್ತಿನ ಮಾತುಕತೆಯೂ ಅಪೂರ್ಣ, ಜ.15ಕ್ಕೆ ಮತ್ತೆ ಮಾತುಕತೆ
ಶಾಲೆಯ ಬೇರೆ ವಿದ್ಯಾರ್ಥಿಗಳಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದರೆ, ಅವರನ್ನೂ ಪರೀಕ್ಷಿಸಲಾಗುತ್ತದೆ. ವಿದ್ಯಾರ್ಥಿಗಳು, ಪಾಲಕರು ಆತಂಕ ಪಡುವ ಅಗತ್ಯವಿಲ್ಲ. ಇನ್ನೂ 11 ಜನ ಸೋಂಕಿತ ಸಿಬ್ಬಂದಿಯಲ್ಲಿ ಒಬ್ಬರೂ ಶಾಲೆಗೆ ಬಂದಿಲ್ಲ. ಶಾಲಾ ಆರಂಭಕ್ಕೂ ಮುಂಚೆಯೇ ನಡೆಸಲಾದ ಪರೀಕ್ಷೆಯಲ್ಲಿ ಸೋಂಕಿರುವುದು ದೃಢಪಟ್ಟಿರುವುದರಿಂದ ಅವರನ್ನು ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನಡೆಯುತ್ತಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಶೇ. 60 ರಷ್ಟು ಎಸ್ಎಸ್ಎಲ್ಸಿ ಮಕ್ಕಳು ಶಾಲೆಗೆ ಹಾಜರಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.