Karnataka: ಸಾಮಾಜಿಕ ನ್ಯಾಯದ ಪರ ನಿಲ್ಲಿ: ಸಿಎಂ ಸಿದ್ದರಾಮಯ್ಯ

"ಉಳುವವನೇ ಭೂಮಿ ಒಡೆಯ" ಕಾನೂನಿಗೆ ಕಾಗೋಡು ಕಾರಣ ಕಾಗೋಡು ತಿಮ್ಮಪ್ಪ ಅವರಿಗೆ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ

Team Udayavani, Aug 20, 2023, 11:08 PM IST

SIDDARAMAYYA 1

ಬೆಂಗಳೂರು: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲ ಪಡೆದ ಫ‌ಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಯುವ ಸಮೂಹಕ್ಕೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ರವಿವಾರ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ನೆಲ ಸಾಮಾಜಿಕ ನ್ಯಾಯವನ್ನು ಕ್ರಾಂತಿಕಾರಿಯಾಗಿ ಜಾರಿ ಮಾಡಿದ ಇತಿಹಾಸ ಹೊಂದಿದೆ. ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ದೇವರಾಜ ಅರಸು ಅವರವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗಿದೆ ಎಂದರು.

ದೇವರಾಜ ಅರಸು ಮತ್ತು ರಾಜೀವ್‌ ಗಾಂಧಿ ಅವರು ಭವಿಷ್ಯದ ಭಾರತ ಮತ್ತು ಭವಿಷ್ಯದ ಸಮಾಜ ಹೇಗಿರಬೇಕು ಎನ್ನುವ ಸಾಮಾಜಿಕ ನ್ಯಾಯದ ಕನಸು-ಕಾರ್ಯಕ್ರಮಗಳನ್ನು ರೂಪಿಸಿದ ಮಹಾನ್‌ ಚೇತನಗಳು. ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇರಬಾರದು ಎನ್ನುವ ಆಶಯ ಬಸವಣ್ಣನವರ ಕಾಲದಿಂದಲೂ ಈ ನೆಲದಲ್ಲಿ ನೆಲೆಯೂರಿದೆ ಎಂದರು.

ಕಾಗೋಡು ಹೋರಾಟವೇ ಸ್ಫೂರ್ತಿ
ದೇವರಾಜ ಅರಸರು “ಉಳುವವನೇ ಭೂಮಿ ಒಡೆಯ’ ಎಂಬ ಕಾನೂನನ್ನು ಜಾರಿಗೆ ತಂದರು. ಇದಕ್ಕೆ ಕಾಗೋಡು ತಿಮ್ಮಪ್ಪನವರು ಮಾಡಿದ ಹೋರಾಟ ಸ್ಫೂರ್ತಿ. ಬಿಜೆಪಿ ಅವಧಿಯಲ್ಲಿ ಉಳ್ಳವರೇ ಭೂಮಿ ಒಡೆಯ ಎನ್ನುವಂತೆ ಕಾನೂನು ಮಾಡಿದ್ದರು. ಕಾಗೋಡು ಹೋರಾಟ ಮತ್ತು ಗೇಣಿ ಹೋರಾಟದ ಫ‌ಲಾನುಭವಿಗಳು ಮತ್ತು ಈಗಿನ ಪೀಳಿಗೆಯ ಯುವಕ, ಯುವತಿಯರು ಇದನ್ನೆಲ್ಲ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಇದ್ದರೂ ಅದು ಜಾರಿ ಆಗಿರಲಿಲ್ಲ. ರಾಜ್ಯದಲ್ಲಿ ದೇವರಾಜ ಅರಸರು ಮುಖ್ಯಮಂತ್ರಿಯಾಗಿ ಹಾವನೂರು ವರದಿ ತರಿಸಿಕೊಂಡು ಅದನ್ನು ಜಾರಿ ಮಾಡುವ ಎದೆಗಾರಿಕೆ ತೋರಿಸಿದರು. ಹೀಗೆ ಮಾಡುವಾಗ ಎಲ್ಲ ಜಾತಿ-ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆ ಮೂಲಕ ಸಂವಿಧಾನಬದ್ಧವಾದ ಮೀಸಲಾತಿಯನ್ನು ಕನ್ನಡ ನೆಲದಲ್ಲಿ ಜಾರಿ ಮಾಡಿದರು ಎಂದರು.

ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು. ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ. ನಾನು ಮುಖ್ಯಮಂತ್ರಿ ಆಗಿರುವ ಅವಧಿಯÇÉೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿ ತಂದಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿ¨ªಾರೆ ಎಂದು ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ಎಸ್‌.ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ , ಶಾಸಕ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್‌, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

ಎಲೆಕ್ಟ್ರಾನಿಕ್‌ ಸಿಟಿಗೆ ಅರಸು ಹೆಸರು?
ಹಲವು ಸುಧಾರಣೆಗಳನ್ನು ಜಾರಿಗೆ ತಂದ ದೇವರಾಜ ಅರಸು ಅವರು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಗೆ ಆ ಕಾಲದಲ್ಲಿ ಜಾಗ ಕೊಟ್ಟವರು. ಹೀಗಾಗಿ ಅದರ ಹೆಸರನ್ನು ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ಬದಲಿಸುವ ಸಾಧ್ಯವೇ ಎಂಬುದನ್ನು ಸಚಿವ ಸಂಪುಟ ಸಭೆಯಲ್ಲಿ ಪರಿಶೀಲಿಸಲಾಗುವುದು ಎಂದು ಸಿಎಂ ಪ್ರಕಟಿಸಿದರು.

 

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.