ಗುರುಮಿಟ್ಕಲ್ ತಾಲೂಕಿನಿಂದ ಸಿಎಂ ಗ್ರಾಮವಾಸ್ತವ್ಯ ಶುರು
Team Udayavani, Jun 4, 2019, 3:09 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಗ್ರಾಮ ವಾಸ್ತವ್ಯವನ್ನು ಜೂ.21 ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನಿಂದ ಆರಂಭಿಸಲಿದ್ದಾರೆ. ಈ ಹಿಂದೆ ತಮಗೆ ಜನಪ್ರಿಯತೆ ತಂದುಕೊಟ್ಟ ಗ್ರಾಮವಾಸ್ತವ್ಯ ಕಾರ್ಯಕ್ರಮ ಮತ್ತೆ ಆರಂಭಿಸಲು ತೀರ್ಮಾನಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಹೈದರಾಬಾದ್ ಕರ್ನಾಟಕ ಭಾಗದಿಂದ ಪ್ರಾರಂಭಿಸಲು ತೀರ್ಮಾನಿಸಿದ್ದಾರೆ.
ಜೂನ್ 21 ಹಾಗೂ 22 ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್, ಜೂ.22 ರಂದು ಕಲಬುರಗಿ ಜಿಲ್ಲೆಯ ಅಫjಲಪುರ ತಾಲೂಕಿನಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದಾರೆ. ಅದೇ ರೀತಿ ಜುಲೈ 5 ಹಾಗೂ 6 ರಂದು ಬೀದರ್ ಜಿಲ್ಲೆಯ ಬಸವ ಕಲ್ಯಾಣ, ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕುಗಳಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದಾರೆ.
ಮುಖ್ಯಮಂತ್ರಿಯವರು ಸೋಮವಾರ ಗ್ರಾಮವಾಸ್ತವ್ಯ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿ ಗ್ರಾಮವಾಸ್ತವ್ಯದ ಸ್ವರೂಪ ಹೇಗಿರಬೇಕು ಎಂಬ ಬಗ್ಗೆ ಅಭಿಪ್ರಾಯ ಪಡೆದು ದಿನಾಂಕ ಅಂತಿಮಗೊಳಿಸಿದರು. ಗ್ರಾಮ ವಾಸ್ತವ್ಯದ ಜತೆಗೆ ಜನತಾದರ್ಶನವೂ ನಡೆಯಲಿದೆ ಎಂದು ಹೇಳಲಾಗಿದೆ. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಗ್ರಾಮವಾಸ್ತವ್ಯ ಆರಂಭಿಸುತ್ತಿರುವ ಬಗ್ಗೆ ಮೆಚ್ಚುಗೆ ಸೂಚಿಸಿದರು.
ಸರ್ಕಾರದ ಆಡಳಿತ ಚುರುಕುಗೊಳಿಸಲು ಮತ್ತು ಸರ್ಕಾರದ ಯೋಜನೆಗಳ ಕುರಿತು ಜನಾಭಿಪ್ರಾಯ ಪಡೆಯಲು ಇದು ಉತ್ತಮ ಅವಕಾಶ ಎಂದು ಅಭಿಪ್ರಾಯಪಟ್ಟರು. ಸಭೆಯಲ್ಲಿ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಡಾ.ಎಸ್.ಸುಬ್ರಹ್ಮಣ್ಯ, ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.