Karnataka: ಲಾರಿ ಮುಷ್ಕರ ಆರಂಭ: ರಸ್ತೆಗಿಳಿಯದ ಶೇ. 85 ಲಾರಿಗಳು
Team Udayavani, Jan 18, 2024, 9:09 PM IST
ಬೆಂಗಳೂರು: ಕೇಂದ್ರ ಸರಕಾರದ ನೂತನ ಮೋಟಾರು ಕಾಯ್ದೆ ವಿರುದ್ಧ ಲಾರಿ ಓನರ್ ಅಸೋಸಿಯೇಶನ್ ಮುಷ್ಕರ ಆರಂಭಿಸಿದೆ. ಸರಕು ಸೇವೆಗಳನ್ನು ಸ್ಥಗಿತಗೊಳಿಸಿ ಲಾರಿ ಚಾಲಕರು ಶಾಂತಿಯುತ ಬಂದ್ ಆರಂಭಿಸಿದ್ದು, ಲಾರಿ ಮಾಲಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಕೇರಳ, ತೆಲಂಗಾಣ, ಆಂಧ್ರಪ್ರದೇಶ ಸಹಿತ ತಮಿಳುನಾಡಿನಲ್ಲೂ ಮುಷ್ಕರ ಆರಂಭವಾಗಿದೆ. ಸದ್ಯ ನಾವು ಯಾವುದೇ ಪ್ರತಿಭಟನೆಗೆ ತೀರ್ಮಾನಿಸಿಲ್ಲ. ಶಾಂತಿಯುತವಾಗಿ ಮುಷ್ಕರ ಮಾಡಲಾಗುತ್ತಿದೆ. ಸಣ್ಣ, ಮಧ್ಯಮ, ಭಾರೀ ಸರಕು ಸಾಗಾಟದ ಲಾರಿಗಳು ಸಂಚಾರ ಸ್ಥಗಿತಗೊಳಿಸಿವೆ ಎಂದು ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷ ನವೀನ್ ರೆಡ್ಡಿ ತಿಳಿಸಿದ್ದಾರೆ.
ಕೇಂದ್ರ ಸರಕಾರದ ನೂತನ ಮೋಟಾರು ವಾಹನ ಕಾಯ್ದೆ ಚಾಲಕರಿಗೆ ಸಂಕಷ್ಟ ತರಲಿದೆ. ಅಗತ್ಯ ವಸ್ತುಗಳ ಪೊರೈಕೆಗೆ ಚಾಲಕರು ಲಾರಿ ಚಾಲನೆಗೆ ಹಿಂದೇಟು ಹಾಕುತ್ತಿದ್ದಾರೆ. ಕೇಂದ್ರ ಅಥವಾ ರಾಜ್ಯ ಸರಕಾರ ಈವರೆಗೂ ನಮ್ಮನ್ನು ಮಾತುಕತೆಗೆ ಆಹ್ವಾನಿಸಿಲ್ಲ ಎಂದು ಅವರು ಹೇಳಿದ್ದಾರೆ.
ಶೇ.85ರಷ್ಟು ಲಾರಿಗಳು ರಸ್ತೆಗಿಳಿದಿಲ್ಲ
ರಾಜ್ಯದಲ್ಲಿ ಬುಧವಾರ ಮಧ್ಯರಾತ್ರಿಯಿಂದಲೇ ಮುಷ್ಕರ ಆರಂಭವಾಗಿದ್ದು, ಶೇ.85ರಷ್ಟು ವಾಹನಗಳ ಸೇವೆ ಸ್ಥಗಿತಗೊಂಡಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಮುಂದಿನ 2-3 ದಿನಗಳಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಲಾರಿ ಮಾಲಕರ ಸಂಘದ ಅಧ್ಯಕ್ಷ ಚನ್ನಾರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.