![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 27, 2023, 10:53 PM IST
ಬೆಂಗಳೂರು: ರಾಜ್ಯ ಸರಕಾರವು ಯುವನೀತಿ ಅನುಷ್ಠಾನದ ವೇಳೆ ಕರ್ನಾಟಕದ ಯುವಜನರನ್ನು ವಂಚಿಸಿದೆ ಎಂದು ಬಿಜೆಪಿ ಅಸಮಾ ಧಾನ ವ್ಯಕ್ತಪಡಿಸಿದೆ. ಈ ಕುರಿತು ವಿಪಕ್ಷ ನಾಯಕ ಅಶೋಕ್ ಟ್ವೀಟ್ ಮಾಡಿದ್ದಾರೆ. ಮೇಲ್ಮನೆ ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಯುವನೀತಿ ಕುರಿತ ಪ್ರಣಾಳಿಕೆಯಲ್ಲಿ ಪದವಿ ಪಡೆದ ಎಲ್ಲ ನಿರುದ್ಯೋಗಿಗಳಿಗೆ 3 ಸಾವಿರ, ಡಿಪ್ಲೊಮಾ ಮಾಡಿದ ನಿರುದ್ಯೋಗಿಗೆ ಒಂದೂವರೆ ಸಾವಿರ ಕೊಡುವುದಾಗಿ ಹೇಳಿದ್ದರು. ರಾಜ್ಯ ದಲ್ಲಿ ಡಿಗ್ರಿ ಮತ್ತು ಡಿಪ್ಲೊಮಾ ಆದ 40 ಲಕ್ಷ ಜನರಿದ್ದಾರೆ. ಆದರೆ ಬಿಜೆಪಿಯು ಯುವನೀತಿ ಅನುಷ್ಠಾನ ವಿಳಂಬದ ಕುರಿತು ಟೀಕಿಸಿದ ಬಳಿಕ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
2022-23ರಲ್ಲಿ ಪದವಿ ಪಡೆದ 4 ಲಕ್ಷ ಯುವಕರು, 48 ಸಾವಿರ ಜನ ಡಿಪ್ಲೊಮಾ ಪಡೆದವರು ಇದ್ದಾರೆ. ಅದರಲ್ಲಿ ಉದ್ಯೋಗ ಪಡೆದವರನ್ನು ಕೈಬಿಟ್ಟು ಹೆಚ್ಚು ಕಡಿಮೆ 3ರಿಂದ 3.5 ಲಕ್ಷ ನಿರುದ್ಯೋಗಿಗಳಿಗೆ 600- 700 ಕೋಟಿ ರೂ. ಖರ್ಚು ಮಾಡಿ ಯುವನೀತಿ ಅನುಷ್ಠಾನ ಮಾಡಿದ್ದಾಗಿ ಹೇಳಿ ಹೆಮ್ಮೆಪಡುವ ಕೆಲಸ ಮಾಡಿದ್ದಾರೆ ಎಂದು ದೂರಿದರು.
ಚುನಾವಣೆಗೆ ಮುನ್ನ 18-25ನೇ ವಯಸ್ಸಿನ ಎಲ್ಲ ನಿರುದ್ಯೋಗಿ ಡಿಪ್ಲೊಮಾ ಪದವೀಧರಿಗೆ 1,500 ರೂ. ಹಾಗೂ ಎಲ್ಲ ನಿರುದ್ಯೋಗಿ ಪದವೀಧರರಿಗೆ 3,000 ರೂ. ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್, ಈಗ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಾಸಾದ ಯುವಕರು ಮಾತ್ರ ಅರ್ಜಿ ಕಲ್ಪಿಸಲು ಅರ್ಹರು ಎಂದು ವರಸೆ ಬದಲಿಸಿದೆ. ನುಡಿದಂತೆ ನಡೆದ ಸರಕಾರ ಎಂದು ಹಸಿ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ಅವರು ನಾಡಿನ ಯುವ ಸಮುದಾಯಕ್ಕೆ ಮೋಸ ಮಾಡುತ್ತಿದ್ದಾರೆ.
– ಆರ್.ಅಶೋಕ, ವಿಧಾನಸಭೆ ವಿಪಕ್ಷದ ನಾಯಕ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.