ಬೃಹತ್ ಕೈಗಾರಿಕೆಗಳಿಗೆ ಸರ್ಕಾರಿ ಜಮೀನು: ಮಾಹಿತಿ ಕೇಳಿದ ಸಮಿತಿ
Team Udayavani, Jun 26, 2019, 3:08 AM IST
ಬೆಂಗಳೂರು: ಬೃಹತ್ ಉದ್ಯಮಗಳಿಗೆ ರಾಜ್ಯ ಸರ್ಕಾರ ಎಷ್ಟು ಜಮೀನು ನೀಡಿದೆ ಮತ್ತು ಜಮೀನು ಪಡೆದುಕೊಂಡ ಸಂಸ್ಥೆಗಳು ಎಷ್ಟು ಪ್ರಮಾಣದಲ್ಲಿ ಉದ್ಯಮಕ್ಕೆ ಬಳಕೆ ಮಾಡಿಕೊಂಡಿವೆ ಎನ್ನುವುದರ ವರದಿ ನೀಡುವಂತೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಅಧಿಕಾರಿಗಳಿಗೆ ಸೂಚಿಸಿದೆ.
ಮಂಗಳವಾರ ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಆರ್.ಅಶೋಕ್ ಅಧ್ಯಕ್ಷತೆಯ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಸಭೆ ನಡೆಯಿತು. ರಾಜ್ಯ ಸರ್ಕಾರ ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ಮಾಡಲು ನಿರ್ಧರಿಸಿರುವ ವಿಷಯ ಚರ್ಚೆಗೆ ಬರಬೇಕಿತ್ತು. ಆದರೆ, ಮುಂದಿನ ವಾರ ಚರ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದುವರೆಗೂ ರಾಜ್ಯದಲ್ಲಿ ಬೃಹತ್ ಉದ್ಯಮ ಸ್ಥಾಪನೆಗೆ ಎಷ್ಟು ಎಕರೆ ಸರ್ಕಾರಿ ಜಮೀನು ನೀಡಿದೆ, ಆ ಜಮೀನು ಪಡೆದ ಕಾರ್ಖಾನೆಗಳು ಎಷ್ಟು ಜಮೀನು ಬಳಕೆ ಮಾಡಿಕೊಂಡಿವೆ ಮತ್ತು ಎಷ್ಟು ಜನರಿಗೆ ಉದ್ಯೋಗ ನೀಡಿವೆ ಎನ್ನುವ ವರದಿ ನೀಡುವಂತೆ ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಆದರೆ, ಜಿಂದಾಲ್ ಕಂಪನಿಗೆ ಜಮೀನು ಪರಬಾರೆ ಮಾಡಲು ಸರ್ಕಾರ ತೀರ್ಮಾನಿಸಿರುವ ಕುರಿತು ಪರಿಶೀಲನೆ ನಡೆಸಲು ಸಚಿವ ಸಂಪುಟ ಉಪ ಸಮಿತಿ ರಚಿಸಿರುವ ಬಗ್ಗೆ ಆಡಳಿತ, ಪ್ರತಿಪಕ್ಷಗಳ ಶಾಸಕರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಿರುವುದನ್ನು ಆರ್.ಅಶೋಕ್ ವಿರೋಧಿಸಿದರೆ, ಕಾಂಗ್ರೆಸ್ ನಾಯಕ ಎಚ್.ಕೆ. ಪಾಟೀಲ್ ಸಮಿತಿ ರಚನೆ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ, ರಾಜ್ಯ ಸರ್ಕಾರದ ಸಚಿವ ಸಂಪುಟ ಉಪ ಸಮಿತಿ ರಚನೆ ವಿಳಂಬವಾಗಿದೆ, ಆದಷ್ಟು ಬೇಗ ಸಮಿತಿ ರಚಿಸುವಂತೆ ಆಗ್ರಹಿಸಿದ್ದಾರೆ.
ಸಮಿತಿ ರಚನೆ ಕಣ್ಣೊರೆಸುವ ತಂತ್ರ: ಅಶೋಕ್
* ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ಮಾಡಿರುವುದು ಕಣ್ಣೊರೆಸುವ ತಂತ್ರ. ಸಂಪುಟ ಉಪ ಸಮಿತಿಯಲ್ಲಿ ಸಂಪುಟ ಸದಸ್ಯರು ಮಾತ್ರ ಇರುತ್ತಾಯೇ ವಿನಃ ಪ್ರತಿಪಕ್ಷದ ನಾಯಕರಿಗೆ ಅವಕಾಶ ಇರುವುದಿಲ್ಲ. ಸಿಎಂ ಕುಮಾರಸ್ವಾಮಿ ಈ ರೀತಿಯ ಹೇಳಿಕೆ ನೀಡುವಾಗ ಆಲೋಚನೆ ಮಾಡಬೇಕು.
* ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ಕೈ ಬಿಟ್ಟು ಜಮೀನು ಮಾರಾಟ ಮಾಡಲು ತೆಗೆದುಕೊಂಡ ತೀರ್ಮಾನವನ್ನು ರದ್ದು ಪಡಿಸಬೇಕು. ಅದರ ಬದಲು ಮತ್ತೆ 10 ವರ್ಷ ಲೀಸ್ ನೀಡಲು ಅಭ್ಯಂತರವಿಲ್ಲ. ಹಿಂದೆ ನೈಸ್ ಸಂಸ್ಥೆಗೆ ರಾಜ್ಯ ಸರ್ಕಾರ ಸಾವಿರಾರು ಎಕರೆ ಜಮೀನು ನೀಡಿದೆ. ಆದರೆ, ಆ ಸಂಸ್ಥೆ ಸರ್ಕಾರದ ಜಮೀನನ್ನೇ ಬ್ಯಾಂಕ್‌ನಲ್ಲಿ ಅಡವಿಟ್ಟು ಸಾಲ ತೆಗೆದುಕೊಂಡಿದೆ.
* ಜಿಂದಾಲ್ ಸಂಸ್ಥೆಯೂ ಅದೇ ಕೆಲಸ ಮಾಡುವ ಸಾಧ್ಯತೆಯಿದೆ. ಸರ್ಕಾರಿ ಜಮೀನು ಅಡ ಇಟ್ಟು ಅವರು ಲಾಭ ತೆಗೆದುಕೊಳ್ಳುವುದಾದರೆ ನಮ್ಮ ಜಮೀನು ಏಕೆ ನೀಡಬೇಕು? ಬೇರೆ ದೇಶದಲ್ಲಿ ಇದಕ್ಕಿಂತ ಶೇ.25ರಷ್ಟು ಕಡಿಮೆ ಜಮೀನಿನಲ್ಲಿ 2 ಲಕ್ಷ ಮೆಟ್ರಿಕ್ ಟನ್ ಉಕ್ಕು ತೆಗೆದಿದ್ದಾರೆ. ನಮ್ಮ ರಾಜ್ಯದಲ್ಲಿ 12 ಸಾವಿರ ಎಕರೆ ಜಮೀನು ನೀಡಲಾಗಿದೆ. ಅದರಲ್ಲಿ ಕೇವಲ 1.5 ಲಕ್ಷ ಮೆಟ್ರಿಕ್ ಟನ್ ಉಕ್ಕು ಉತ್ಪಾದನೆ ಮಾಡಲಾಗುತ್ತಿದೆ.
ತೀರ್ಮಾನಕ್ಕೆ ವಿರೋಧ ಸಲ್ಲ: ಎಚ್.ಕೆ.ಪಾಟೀಲ್
* ಸರ್ಕಾರದ ನಿರ್ಧಾರಗಳಲ್ಲಿ ಆಗಿರುವ ಲೋಪಗಳ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಸರ್ಕಾರದ ವ್ಯವಸ್ಥೆಯ ಬಗ್ಗೆ ವಿಶ್ವಾಸ ಇಟ್ಟುಕೊಳ್ಳಬೇಕು. ಸಂಪುಟ ಉಪ ಸಮಿತಿ ಸಾರ್ವಜನಿಕರ ಅಹವಾಲುಗಳನ್ನು ಕೇಳಬೇಕು. ತಕರಾರು ಮಾಡುವವರಿಂದ ಮಾಹಿತಿ ಪಡೆಯಬೇಕು. ಎಲ್ಲರ ಅಭಿಪ್ರಾಯ ಪಡೆದು ವರದಿ ನೀಡಬೇಕು. ಸರ್ಕಾರ ಆಡಳಿತಾತ್ಮಕವಾಗಿ ತೆಗೆದುಕೊಳ್ಳುವ ತೀರ್ಮಾನಕ್ಕೆ ವಿರೋಧ ಮಾಡುವುದು ಸರಿಯಲ್ಲ.
* ಸಂಪುಟ ಸಮಿತಿಗಳಲ್ಲಿ ಸಚಿವರ ಹೊರತು ಬೇರೆಯವರಿಗೆ ಅವಕಾಶವಿಲ್ಲ. ಒಂದು ವೇಳೆ ಸಂಪುಟ ಉಪ ಸಮಿತಿ ಹೊರಗಿನವರಿಂದ ಮಾಹಿತಿ ಬಯಸಿದರೆ, ತಜ್ಞರೆಂದು ಪರಿಗಣಿಸಿ ಅವರಿಂದ ವಿವರಣೆ ಪಡೆಯಬಹುದು.
* ಸಂಪುಟ ಉಪ ಸಮಿತಿ ಜಿಂದಾಲ್‌ಗೆ ನೀಡಿರುವ ಜಮೀನಿನ ಭೂ ಸಮೀಕ್ಷೆ (ಲ್ಯಾಂಡ್ ಆಡಿಟ್) ನಡೆಸಬೇಕು.
ಜಿಂದಾಲ್‌ಗೆ ಅಷ್ಟೊಂದು ಜಮೀನು ಏಕೆ?: ವಿಶ್ವನಾಥ್
* ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರಾಗಿದ್ದಾಗ ಬಳ್ಳಾರಿ ಗಣಿ ಧಣಿಗಳ ವಿರುದ್ಧ ಪಾದಯಾತ್ರೆ ಮಾಡಿದ್ದರು. ಜಿಂದಾಲ್‌ನವರು ಅಷ್ಟೊಂದು ಜಮೀನು ಏಕೆ ತೆಗೆದುಕೊಂಡಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಬೇಕು. ಜಿಂದಾಲ್‌ನವರು ಜೋಳ ಬೆಳೆಯಲು ತೆಗೆದುಕೊಂಡಿದ್ದಾರಾ? ಗಣಿಗಾರಿಕೆ ಮಾಡಲು ತೆಗೆದುಕೊಂಡಿದ್ದಾರಾ ಎನ್ನುವ ಬಗ್ಗೆ ತನಿಖೆಯಾಗಬೇಕು.
* ಪ್ರತಿಪಕ್ಷದ ನಾಯಕರು ಸಮಿತಿ ಸದಸ್ಯರಾಗಲು ಅವಕಾಶವಿಲ್ಲ. ಆದರೆ, ಸರ್ಕಾರ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಪ್ರತಿಪಕ್ಷ ನಾಯಕರು ಸರ್ಕಾರದ ಉತ್ತಮ ಕೆಲಸಗಳಿಗೆ ಸಹಕಾರ ನೀಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.