Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನುಡಿನಮನ

Team Udayavani, May 22, 2024, 12:00 AM IST

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳ್ತಂಗಡಿ: ರಾಜಕೀಯ ರಂಗದಲ್ಲಿ ವಸಂತ ಬಂಗೇರ ಅಪೂರ್ವ ವ್ಯಕ್ತಿ. ಕುವೆಂಪು ಅವರ ವಿಶ್ವಮಾನವ ಸಂದೇಶ ಅವರಿಗೆ ಒಪ್ಪುವಂತಹದು. ನಿಧನಹೊಂದುವವರೆಗೂ ಮಾನ ವೀಯ ವ್ಯಕ್ತಿಯಾಗಿಯೇ ಇದ್ದರು. ಅವರಿಲ್ಲದೆ ರಾಜ್ಯದ ರಾಜಕಾರಣಕ್ಕೆ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಾಜಿ ಶಾಸಕ ದಿ| ಕೆ. ವಸಂತ ಬಂಗೇರ ನಿಧನದ ಹಿನ್ನೆಲೆಯಲ್ಲಿ ಮಂಗಳವಾರ ಗುರುವಾಯನಕೆರೆಯ ಮಂಜಿಬೆಟ್ಟು ಎಫ್‌.ಎಂ. ಗಾರ್ಡನ್‌ನಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ನುಡಿನಮನ ಸಲ್ಲಿಸಿದರು.

ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಸುದೀರ್ಘ‌ ಕಾಲದ ಸ್ನೇಹಿತರು. ಅವರು ಬಿಜೆಪಿ ಯಿಂದ ಗೆದ್ದಿದ್ದರೂ ನಾನು ವಿಶೇಷವಾಗಿ ಮೆಚ್ಚಿಕೊಂಡಿದ್ದೆ. ನೇರ ನಡೆ ನುಡಿಯವರು. ಬಡವರು ಹಾಗೂ ಸತ್ಯದ ಪರವಿದ್ದ ನಾಯಕ. ಯಾವುದೇ ಸನ್ನಿವೇಶದಲ್ಲೂ ಸತ್ಯವನ್ನು ನೇರವಾಗಿ ಹೇಳುವಂತಹ ವಿಶೇಷ ಗುಣ ಅವರದ್ದು. 2023ರಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಹೇಳಿದ್ದೆ, ಅವರು ಒಪ್ಪಿರಲಿಲ್ಲ, ಒಪ್ಪಿ ಗೆದ್ದಿದ್ದರೆ ನೂರಕ್ಕೆ ನೂರು ಮಂತ್ರಿಯಾಗುತ್ತಿದ್ದರು. ಅವರ ಕುಟುಂಬದ ನೋವಲ್ಲಿ ನಾನು ಪಾಲುದಾರನಾಗಿದ್ದೇನೆೆ ಎಂದರು.

ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಮಾತನಾಡಿ, ಜನಸಾಮಾ ನ್ಯರ ಧ್ವನಿಯಾಗಿದ್ದ ಬಂಗೇರರನ್ನು ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಅಧಿಕಾರ ಇದ್ದಾ ಗಲೂ ಇಲ್ಲದಾಗಲೂ ಒಂದೇ ವ್ಯಕ್ತಿತ್ವ ವನ್ನು ಹೊಂದಿದ್ದ ಅವರು ನಮ್ಮೆಲ್ಲರಿಗೂ ದಾರಿದೀಪ ಎಂದು ತಿಳಿಸಿದರು.

ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ, ಸೋಲೂರು ಮಠದ ಪೀಠಾಧೀಶ ಬಲೊÂಟ್ಟು ಶ್ರೀ ವಿಖ್ಯಾತನಂದ ಸ್ವಾಮೀಜಿ, ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್‌ ಮುಕ್ಕುಯಿ, ಶಾಸಕ ಹರೀಶ್‌ ಪೂಂಜ, ಪುತ್ತೂರು ಶಾಸಕ ಅಶೋಕ್‌ ರೈ, ಮಾಜಿ ಸಚಿವರಾದ ಕೆ. ಗಂಗಾಧರ ಗೌಡ, ವಿನಯಕುಮಾರ್‌ ಸೊರಕೆ, ಅಭಯಚಂದ್ರ ಜೈನ್‌, ಮಾಜಿ ಶಾಸಕರಾದ ಜೆ.ಆರ್‌. ಲೋಬೊ, ಕೆ. ಪ್ರಭಾಕರ ಬಂಗೇರ, ಶಕುಂತಳಾ ಶೆಟ್ಟಿ, ರುಕ್ಮಯ ಪೂಜಾರಿ, ಲೋಕಸಭಾ ಅಭ್ಯರ್ಥಿ ಪದ್ಮರಾಜ್‌ ಆರ್‌., ಐವನ್‌ ಡಿ’ಸೋಜಾ, ಬಿಲ್ಲವ ಮಹಾಮಂಡಳದ ಅಧ್ಯಕ್ಷ ರಾಜಶೇಖರ ಕೋಟ್ಯಾನ್‌, ವಿ.ಪ. ಸದಸ್ಯ ಆಯನೂರು ಮಂಜುನಾಥ್‌, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಸವಣೂರು ಸೀತಾರಾಮ ರೈ, ಸಹೋದರ ರಮೇಶ್‌ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಮ್‌, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎನ್‌. ಪದ್ಮನಾಭ ಮಾಣಿಂಜ, ಬಂಗೇರ ಕುಟುಂಬಿಕರ ಸಹಿತ ಗಣ್ಯರು ಉಪಸ್ಥಿತರಿದ್ದರು.

ಬಸ್‌ ನಿಲ್ದಾಣಕ್ಕೆ ವಸಂತ ಬಂಗೇರ ಹೆಸರು
ಬೆಳ್ತಂಗಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಕೆಎಸ್ಸಾರ್ಟಿಸಿ ಬಸ್‌ ತಂಗುದಾಣಕ್ಕೆ ಕೆ. ವಸಂತ ಬಂಗೇರ ಅವರ ಹೆಸರಿಡುವಂತೆ ಹಾಗೂ ಮುಖ್ಯವೃತ್ತದಲ್ಲಿ ಪುತ್ಥಳಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮನವಿ ಸಲ್ಲಿಸಲಾಯಿತು. ಸರಕಾರದಿಂದ ಮಂಜೂರು ಮಾಡಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದರು.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

3

Bantwal: ಕೋಟೆಕಣಿ; ಸ್ಕೂಟರ್‌ ಬಿದ್ದು ಸಹಸವಾರ ಗಾಯ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರು, ಸುಳ್ಯ ತಾಲೂಕಿಗೆ ಬಂಟ್ವಾಳದಿಂದ ನೀರು

ಪುತ್ತೂರು, ಸುಳ್ಯ ತಾಲೂಕಿಗೆ ಬಂಟ್ವಾಳದಿಂದ ನೀರು

tanker

Bantwala; ಅಲ್ಲಿಪಾದೆ ಅಣೇಜ ತಿರುವಿನಲ್ಲಿ ಸಿಲುಕಿಕೊಂಡ ಕಂಟೈನರ್ ಲಾರಿ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-weqwwe

Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.