ಯಕ್ಷ ಕಲಾವಿದರಿಗೆ ಅಕಾಡೆಮಿ ನೆರವು
Team Udayavani, May 9, 2020, 5:58 AM IST
ಸಾಂದರ್ಭಿಕ ಚಿತ್ರ.
ಕೋಟ: ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಇರುವುದರಿಂದ ಸಂಕಷ್ಟಕ್ಕೆ ಒಳಗಾಗಿರುವ ಯಕ್ಷಗಾನ ಮೇಳಗಳ ಕಲಾವಿದರ ನೆರವಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಮುಂದಾಗಿದೆ.
ಅಕಾಡೆಮಿ ಅನುದಾನದ ಜತೆಗೆ ಸಾರ್ವಜನಿಕರು, ಯಕ್ಷಗಾನ ಅಭಿಮಾನಿ ಗಳಿಂದ ದೇಣಿಗೆಯನ್ನು ಸಂಗ್ರಹಿಸಿ ಕಲಾವಿದರಿಗೆ ನೀಡಲು ಚಿಂತನೆ ನಡೆಯುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಪ್ರೊ| ಎಂ.ಎ. ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.
ಕನ್ನಡ – ಸಂಸ್ಕೃತಿ ಇಲಾಖೆ ನೆರವು
ಅರ್ಥಿಕವಾಗಿ ಸಮಸ್ಯೆಗೊಳಗಾದ ಕಲಾವಿದರಿಗೆ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ 2 ಸಾವಿರ ರೂ. ಸಹಾಯಧನ ನೀಡುವ ಯೋಜನೆಗೆ ಅಕಾಡೆಮಿ 699 ಸದಸ್ಯರನ್ನು ಶಿಫಾರಸು ಮಾಡಿದೆ. ಶೀಘ್ರದಲ್ಲಿ ಅವರ ಖಾತೆಗಳಿಗೆ ಹಣ ಜಮೆಯಾಗಲಿದೆ. ಕೇವಲ ವೃತ್ತಿ ಕಲಾವಿದರಿಗೆ ಮಾತ್ರವಲ್ಲದೆ ಕಲೆ ಯನ್ನೇ ಆಶ್ರಯಿಸಿ ಬದುಕು ತ್ತಿರುವ ತರಬೇತುದಾರರು ಮತ್ತಿತರರಿಗೂ ಈ ಸೌಲಭ್ಯ ಸಿಗಲಿದೆ.
ಬೆಳಕು ಚೆಲ್ಲಿದ ಉದಯವಾಣಿ
ಲಾಕ್‌ಡೌನ್ ಕಾರಣ ಯಕ್ಷಗಾನ ಮೇಳಗಳ ಈ ವರ್ಷದ ತಿರುಗಾಟ ಸ್ಥಗಿತವಾಗಿದ್ದು, ಕಲಾವಿದರು ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಉದಯವಾಣಿಯ ಶುಕ್ರವಾರದ ಸಂಚಿಕೆಯಲ್ಲಿ “ಕೊರೊನಾಘಾತ: ಯಕ್ಷಗಾನ ಕಲಾವಿದರಿಗೂ ಬೇಕು ನೆರವು’ ಎಂಬ ವಿಶೇಷ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.