401 ಬೀದಿ ನಾಯಿಗಳಿಗೆ ಲಸಿಕೆ, 383ಕ್ಕೆ ಸಂತಾನ ಶಕ್ತಿ ಹರಣ

Team Udayavani, Mar 3, 2022, 12:28 PM IST

401 ಬೀದಿ ನಾಯಿಗಳಿಗೆ ಲಸಿಕೆ, 383ಕ್ಕೆ ಸಂತಾನ ಶಕ್ತಿ ಹರಣ

ಉಡುಪಿ : ಸಾರ್ವಜನಿಕ ರಿಗೆ ಬೀದಿನಾಯಿಗಳಿಂದ ಆಗುತ್ತಿರುವ ಉಪಟಳ ತಪ್ಪಿಸಲು ನಗರದ 401 ಬೀದಿನಾಯಿಗಳಿಗೆ ರೇಬಿಸ್‌ ನಿರೋಧಕ ಲಸಿಕೆ ನೀಡುವ ಜತೆಗೆ 383 ನಾಯಿಗಳ ಸಂತಾನಶಕ್ತಿ ಹರಣಗೊಳಿಸಲಾಗಿದೆ.

148 ಹೆಣ್ಣು, 234 ಗಂಡು ನಾಯಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ, 154 ಗಂಡು, 247 ಹೆಣ್ಣು ನಾಯಿಗೆ ರೇಬಿಸ್‌ ನಿರೋಧಕ ಲಸಿಕೆ ನೀಡಲಾಗಿದೆ. ಬೀದಿ ನಾಯಿಗಳು ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಗೆ ತೀರ ಕಿರಿಕಿರಿಯಾಗಿ ಪರಿಣಮಿಸುತ್ತಿದೆ. ಹಗಲು ರಾತ್ರಿ ಕರ್ಕಶ ವಾಗಿ ಬೊಗಳುವುದು, ವಾಹನಗಳನ್ನು ಹಿಂಬಾಲಿಸಿಕೊಂಡು ಓಡುವುದು, ಸಾರ್ವಜನಿಕರಿಗೆ ಭಯ ಹುಟ್ಟಿಸುವ ಘಟನೆಗಳು ಹೆಚ್ಚುತ್ತಿದೆ. ಈ ನಡುವೆ ನಗರಸಭೆಯಿಂದ ಈ ವರ್ಷದಲ್ಲಿ ಲಸಿಕೆ ನೀಡಿ, ಚಿಕಿತ್ಸೆ ನಿರ್ವಹಿಸಲಾಗಿದೆ.

ಎಲ್ಲೆಲ್ಲಿ ಹೆಚ್ಚು ನಾಯಿಗಳು ?
ಮಲ್ಪೆ ಕೊಳ 18, ಮಲ್ಪೆ ಸೆಂಟ್ರಲ್‌ 30, ಕೊಡವೂರು 20, ಕಲ್ಮಾಡಿ, ಮೂಡುಬೆಟ್ಟು, ಕೊಡವೂರು ತಲಾ 12, ಸುಬ್ರಹ್ಮಣ್ಯ ನಗರ 19, ಮೂಡುಪೆರಂಪಳ್ಳಿ 30, ಸರಳೇಬೆಟ್ಟು 23, ಶೆಟ್ಟಿಬೆಟ್ಟು 21, ಮಣಿಪಾಲ 17, ಸಗ್ರಿ 11, ಚಿಟಾ³ಡಿ 16, ಒಳಕಾಡು 12, ಅಂಬಲಪಾಡಿ 13 ನಾಯಿಗೆ ರೇಬಿಸ್‌ ನಿರೋಧಕ ಲಸಿಕೆ ನೀಡಲಾಗಿದೆ.

ಸಾವಿರಕ್ಕೂ ಅಧಿಕ ನಾಯಿಗಳಿವೆ
ಪ್ರಮುಖವಾಗಿ ಸಾರ್ವಜನಿಕ ಸ್ಥಳದಲ್ಲಿ ಬೀದಿನಾಯಿಗಳ ಗುಂಪು ಹೆಚ್ಚಾಗುತ್ತಿದೆ. ಮಕ್ಕಳು ಆಟವಾಡುವ ಪಾರ್ಕ್‌ಗಳು, ಸರ್ವಿಸ್‌, ಸಿಟಿ ಬಸ್‌ ನಿಲ್ದಾಣ, ಮಣಿಪಾಲ ಬಸ್‌ ನಿಲ್ದಾಣ, ಮಲ್ಪೆ ಬಸ್‌ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆ ಬೀದಿ ನಾಯಿಗಳು ಕಂಡು ಬರುತ್ತಿದೆ. ಕಳೆದ ಹಲವಾರು ವರ್ಷಗಳಿಂದ ಬೀದಿ ನಾಯಿಗಳ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಸಾವಿರಕ್ಕೂ ಅಧಿಕ ಬೀದಿ ನಾಯಿಗಳು ನಗರದಲ್ಲಿವೆ. ಸಾರ್ವಜನಿಕರಿಗೆ ಇವುಗಳಿಂದ ಸಮಸ್ಯೆ ಆಗದಂತೆ ನಗರಸಭೆ ಎಚ್ಚರ ವಹಿಸಬೇಕು ಎಂಬ ಆಗ್ರಹವಿದೆ.

5 ಲಕ್ಷ ರೂ. ಬಿಲ್‌ ಮೊತ್ತ
ಜನವರಿಯಲ್ಲಿ ಕಾರ್ಯಾಚರಣೆ ನಡೆದಿದ್ದು, ಲಸಿಕೆ, ಸಂತಾನಶಕ್ತಿಹರಣ ಪ್ರಕ್ರಿಯೆ ನಡೆಸಿದ ಗುತ್ತಿಗೆ ಪಡೆದ ಎನ್‌ಜಿಒ ಸಂಸ್ಥೆ ನಗರಸಭೆಗೆ 5 ಲಕ್ಷ ರೂ., ಬಿಲ್‌ ನೀಡಿದೆ. ಇಷ್ಟೆಲ್ಲ ಆಗಿಯೂ ನಗರ ವ್ಯಾಪ್ತಿಯ ಕೆಲವೆಡೆ ಶ್ವಾನ ಕಾರ್ಯಾಚರಣೆ ಸಮರ್ಪಕವಾಗಿಲ್ಲ ಎಂದು ನಗರಸಭಾ ಸದಸ್ಯರು ಆರೋಪಿಸುತ್ತಾರೆ. ಮುಂದಿನ ಹಂತದಲ್ಲಿ ಸ್ಥಳೀಯರು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದು ಸಲಹೆಗಳನ್ನು ಪರಿಗಣಿಸಿ ಕಾರ್ಯಾಚರಣೆ ನಡೆಯಬೇಕು ಎಂಬುದು ಸರ್ವ ಸದಸ್ಯರ ಅಭಿಪ್ರಾಯವಾಗಿದೆ.

ಬೀದಿನಾಯಿಗಳ ನಿಯಂತ್ರಣಕ್ಕೆ ನಗರಸಭೆ ವತಿಯಿಂದ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಬೀದಿನಾಯಿಗಳ ಲಸಿಕೆ ಮತ್ತು ಸಂತಾನಶಕ್ತಿಹರಣ ಚಿಕಿತ್ಸೆ ನೀಡುವ ತಂಡಗಳು ಸಮರ್ಪಕ ವ್ಯವಸ್ಥೆಯೊಂದಿಗೆ ಕಾರ್ಯಾಚರಿಸಲು ಸೂಚನೆ ನೀಡಲಾಗುವುದು.
– ಸುಮಿತ್ರಾ ನಾಯಕ್‌, ಅಧ್ಯಕ್ಷೆ, ಉಡುಪಿ ನಗರಸಭೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.