ಬೀದಿ ದೀಪ, ಚರಂಡಿ ವ್ಯವಸ್ಥೆ ಕಲ್ಪಿಸಲು ಆಗ್ರಹ


Team Udayavani, Jun 14, 2020, 5:14 AM IST

ಬೀದಿ ದೀಪ, ಚರಂಡಿ ವ್ಯವಸ್ಥೆ ಕಲ್ಪಿಸಲು ಆಗ್ರಹ

ಹೆಮ್ಮಾಡಿ: ಮುಳ್ಳಿಕಟ್ಟೆ, ನಾಡಗುಡ್ಡೆ ಅಂಗಡಿಯಾಗಿ ಕೊಲ್ಲೂರು ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಆಲೂರು ಜಿಲ್ಲಾ ಮುಖ್ಯ ರಸ್ತೆಯ ದುರಸ್ತಿ ಸಹಿತ ಬೀದಿ ದೀಪ, ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಂಚಿನಕೊಡ್ಲು – ಆಲೂರು ಕ್ರಾಸ್‌ನಿಂದ ಕಳಿಯ ತನಕ ಚಿತ್ತೂರು, ವಂಡ್ಸೆ, ಆಲೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಹಾದು ಹೋಗುವ ಈ ರಸ್ತೆಯನ್ನು ನೂರಾರು ಕುಟುಂಬಗಳು ಆಶ್ರಯಿಸಿದ್ದು, ಪ್ರತಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿವೆ.

ಸೂಚನಾ ಫಲಕವೂ ಇಲ್ಲ
ಆದರೆ ಈ ರಸ್ತೆಗೆ ದಾರಿದೀಪದ ವ್ಯವಸ್ಥೆಯಾ ಗಲಿ, ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲ. ಮಾತ್ರವಲ್ಲದೆ ಸೂಚನಾ ಫಲಕ, ರಸ್ತೆತಡೆ ಸೂಚನೆ ಯಾವುದೂ ಇಲ್ಲ. ದಿನಂಪ್ರತಿ ಸಾವಿರಾರು ವಾಹನಗಳು ಈ ಮಾರ್ಗ ದಲ್ಲಿ ಸಂಚರಿಸುತ್ತಿದ್ದು ಅಪಘಾತಗಳು ಸಹ ಸಂಭವಿಸುತ್ತಲೇ ಇವೆ. ಕೆಲವೊಂದು ಕಡೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಮಳೆಯ ನೀರು ರಸ್ತೆಯ ಮೇಲೆ ಹರಿದು ಹೋಗುತ್ತಿದ್ದು, ಕೆಲವೆಡೆ ಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ.

ಇದೇ ಮಾರ್ಗ ದಲ್ಲಿ ಸರಕಾರಿ ಶಾಲೆ ಯೊಂದಿದ್ದು, ಅದರ ಸಮೀಪ ಸುರಕ್ಷತೆಯ ಬಗ್ಗೆ ರಸ್ತೆತಡೆ ಅಥವಾ ವೇಗಮಿತಿಗೆ ಸಂಬಂಧಪಟ್ಟಂತೆ ಯಾವುದೇ ಸೂಚನಾ ಫಲಕದ ವ್ಯವಸ್ಥೆಯೂ ಇಲ್ಲಿಲ್ಲ.

ಸೌಕರ್ಯ ಒದಗಿಸಿ
ಹಲವಾರು ಬಾರಿ ಸ್ಥಳೀಯ ನಾಗರಿಕರು ಜನಪ್ರತಿನಿಧಿಗಳಲ್ಲಿ ಅಧಿಕಾರಿಗಳಲ್ಲಿ ಈ ಬಗ್ಗೆ ತಮ್ಮ ಅಳಲು ತೋಡಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ. ಈಗಲಾದರೂ ಈ ರಸ್ತೆಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು.
-ಎಚ್‌. ಆನಂದ ಮಡಿವಾಳ, ನ್ಯಾಯವಾದಿ, ಸ್ಥಳೀಯರು

ಚರಂಡಿ ನಿರ್ಮಾಣಕ್ಕೆ ಕ್ರಮ
ಆಲೂರು ಜಿಲ್ಲಾ ಮುಖ್ಯ ರಸ್ತೆಯ ಬಾಕಿ ಇರುವ ಕಡೆಗಳಲ್ಲಿ ಚರಂಡಿ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗುವುದು. ಬೀದಿ ದೀಪಗಳನ್ನು ಸಂಬಂಧಪಟ್ಟ ಪಂಚಾ ಯತ್‌ ನವರು ವ್ಯವಸ್ಥೆ ಮಾಡಬೇಕು. ಇನ್ನು ಶಾಲೆಯ ಸಮೀಪ ಸೂಚನಾ ಫಲಕಗಳನ್ನು ಇಲಾಖೆಯಿಂದ ಮಾಡಲಾಗುವುದು.
-ದುರ್ಗಾದಾಸ್‌, ಕಾರ್ಯನಿರ್ವಾಹಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-tma-pai

Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

12(2)

Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ

11

Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ

10

Kaup ಒಳಚರಂಡಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ

6

Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

24-tma-pai

Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

12(2)

Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ

11

Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.