ಕೋವಿಡ್ 19 ನಿಗ್ರಹಕ್ಕೆ ಕಠಿನ ಕ್ರಮ
Team Udayavani, Apr 27, 2020, 6:20 AM IST
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಳವಾಗುತ್ತಿ ರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿನ ಕ್ರಮಗಳನ್ನು ಕೈಗೆತ್ತಿಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರವಿವಾರ ಸಚಿವರು ಹಾಗೂ ಸಂಸದರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಬಂಟ್ವಾಳದಲ್ಲಿ ಮೇ 3ರ ವರೆಗೆ ಲಾಕ್‌ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ. ಕಸಬಾ ಹೋಬಳಿಯ 92 ಮನೆಗಳು ಹಾಗೂ ನರಿಕೊಂಬು ಗ್ರಾ.ಪಂ. ವ್ಯಾಪ್ತಿಯ 213 ಮನೆಗಳಿಗೆ ಪ್ರತಿನಿತ್ಯ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬಂದಿ ಭೇಟಿಕೊಟ್ಟು ವರದಿ ನೀಡಬೇಕು. ಆ ಪರಿಸರದ ಲಾಕ್‌ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ದ.ಕ. ಜಿಲ್ಲೆಯಲ್ಲಿ ಒಟ್ಟು 19 ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 12 ಪ್ರಕರಣಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿರುತ್ತಾರೆ. ಇಬ್ಬರು ಸಾವನ್ನಪ್ಪಿದ್ದು, ಉಳಿದ ಪ್ರಕರಣಗಳಲ್ಲಿ ನಿಗಾ ಇಡಲಾಗಿದೆ. ಈ ಮಧ್ಯೆ ಫಸ್ಟ್ ನ್ಯೂರೋ ಆಸ್ಪತ್ರೆಯ 198 ಸಿಬಂದಿ ಹಾಗೂ ಇನ್ನಿತರರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸ ಲಾಗಿದೆ. ಈ ಪೈಕಿ 49 ಪ್ರಕರಣಗಳ ವರದಿ ಬಂದಿದ್ದು, 48 ನೆಗೆಟಿವ್, ಒಂದು ಮಾತ್ರ ಪಾಸಿಟಿವ್ ವರದಿಯಾಗಿದೆ ಎಂದರು.
ಜಿಲ್ಲಾಡಳಿತದ ಪೂರ್ಣ ಕಣ್ಗಾವಲಿನಲ್ಲಿ ಕೋವಿಡ್ 19 ನಿಯಂತ್ರಣ ಮಾಡಲಾಗುತ್ತಿದೆ. ಸಾರ್ವಜನಿಕರು ಯಾವುದೇ ಕಾರಣಕ್ಕೆ ಘಟನೆಗಳನ್ನು ಲಘುವಾಗಿ ಪರಿಗಣಿಸದೆ, ಸ್ವಯಂ ಪ್ರೇರಿತ ಕರ್ಫ್ಯೂಗೆ ಒಳಪಡಬೇಕು. ಇಲ್ಲವಾದರೆ ಜಿಲ್ಲಾಡಳಿತದ ಕಠಿನ ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಚ್ಚರಿಸಿದರು.
ಕಟ್ಟುನಿಟ್ಟಿನ ಪಾಲನೆ
ದಿನಸಿ ಸಾಮಗ್ರಿ, ಹಾಲು ದಿನಪತ್ರಿಕೆ, ಔಷಧ, ಊಟೋಪಚಾರ, ತರಕಾರಿ, ಹಣ್ಣು, ಮಾಂಸಗಳನ್ನು ಸಾರ್ವಜನಿಕರ ಬೇಡಿಕೆಯಂತೆ ಒದಗಿಸಲು ಹಾಗೂ ಬ್ಯಾಂಕಿಂಗ್ ಸೇವೆ, ಗ್ಯಾಸ್ ಇನ್ನಿತರ ಸೇವೆ, ತುರ್ತು ಸೇವೆಗಳನ್ನು ಒದಗಿಸಲು ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸರಕಾರದ ಆದೇಶಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಚಿವರು ತಿಳಿಸಿದರು.
ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಅಧಿಕಾರಿಗಳು ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕು, ವಲಸೆ ಕಾರ್ಮಿಕರು ಹಾಗೂ ಜಿಲ್ಲೆಯ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ ಪರಿಹರಿಸಬೇಕು. ಆಹಾರಗಳ ಪೂರೈಕೆ ಸೇರಿದಂತೆ ಸ್ಥಳೀಯ ಶಾಸಕರು ಸಹಕಾರ ನೀಡಲಿದ್ದಾರೆ ಎಂದರು.
ಶಾಸಕ ರಾಜೇಶ್ ನಾೖಕ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಮಂಗಳೂರು ಸಹಾಯಕ ಕಮಿಷನರ್ ಮದನಮೋಹನ್ ಸಿ., ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ತಾ.ಪಂ. ಇಒ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು, ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಡಿ. ನಾಗರಾಜ್, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಉಪಸ್ಥಿತರಿದ್ದರು.
24 ಗಂಟೆ ನಿಯಂತ್ರಣ ಕೊಠಡಿ
ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾ.ಪಂ. ವ್ಯಾಪ್ತಿಯನ್ನು ಸೀಲ್‌ಡೌನ್ ಮಾಡಲಾಗಿದ್ದು, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ನಿಯಂತ್ರಣ ಕೊಠಡಿ ತೆರೆದು ಸಾರ್ವಜನಿಕರ ಅನುಕೂಲಕ್ಕೆ ದೂರವಾಣಿ ಸಂಪರ್ಕ ನೀಡಲಾಗಿದೆ. 11 ಅಧಿಕಾರಿಗಳನ್ನು ಈ ಪ್ರದೇಶದಲ್ಲಿ ಹಗಲು-ರಾತ್ರಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿದ್ದುಕೊಂಡು ಅಗತ್ಯ ಸಾಮಗ್ರಿಗಳನ್ನು ತರಿಸಿಕೊಳ್ಳಬಹುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.