CM ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಲ್ಲ: ಆರ್. ಅಶೋಕ್
Team Udayavani, Jul 12, 2024, 11:04 PM IST
ಮೈಸೂರು: ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಸಾವಿರಾರು ಕೋಟಿ ರೂ. ಅವ್ಯವಹಾರದ ತನಿಖೆಯನ್ನು ಸಿಬಿಐಗೆ ವಹಿಸಿ, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ಮಹಾರಾಜ ಕಾಲೇಜು ಮೈದಾನದ ಬಳಿ ಆಯೋಜಿಸಿದ್ದ ಪ್ರತಿಭಟನ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗಿದೆ. ಹಗರಣದಲ್ಲಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ನಿವೇಶನಗಳನ್ನು ಕಾನೂನಾತ್ಮಕವಾಗಿ ಪಡೆದುಕೊಂಡಿದ್ದೇವೆ ಎಂದು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾನೂನು ಬಾಹಿರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ನಿವೇಶನ ಪಡೆದಿರುವುದರಿಂದ ರಾಜೀನಾಮೆ ಕೊಡುವ ತನಕ ಹೋರಾಟ ಮುಂದುವರಿಯಲಿದೆ. ವಾಲ್ಮೀಕಿ ನಿಗಮ, ಮುಡಾ ಹಗರಣವನ್ನು ಸದನದಲ್ಲಿ ಪ್ರಸ್ತಾವಿಸುತ್ತೇವೆ ಎಂದು ಹೇಳಿದರು.
ನಾನು ಹಿಂದುಳಿದ ನಾಯಕನಾಗಿರು ವುದರಿಂದ ಬಿಜೆಪಿಯವರು ಸಹಿಸುತ್ತಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಈಗ ಜಾತಿ ಅಸ್ತ್ರ ಬಳಸಿ ರಕ್ಷಿಸಿಕೊಳ್ಳಲು ಮುಂದಾಗಿ¨ªಾರೆ. ಕಾಂಗ್ರೆಸ್‌ನಲ್ಲಿರುವ ಬಿ.ಕೆ.ಹರಿಪ್ರಸಾದ್ ಅವರೇ ನಾನೊಬ್ಬ ಅತಿ ಹಿಂದುಳಿದ ವರ್ಗಗಳ ನಾಯಕನೆಂದು ಹೇಳಿದ್ದಾರೆ. ಅಲ್ಲದೆ ಬಿಜೆಪಿಯವರು ಬಿಟ್ಟರೂ ನಾನು ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು ಹೇಳಿದ್ದಾರೆ. ಹೀಗಾಗಿ ಅವರನ್ನು ತುಳಿಯುವ ಪ್ರಶ್ನೆಯೇ ಬರುವುದಿಲ್ಲ ಎಂದರು.
ಗೂಡ್ಸ್ ಆಟೋದಲ್ಲಿ ಬಂದ ಅಶೋಕ್, ಅಶ್ವತ್ಥನಾರಾಯಣ
ಮೈಸೂರು: ನಗರದಲ್ಲಿ ಬಿಜೆಪಿ ಕರೆ ನೀಡಿದ್ದ ಬೃಹತ್ ಪ್ರತಿಭಟನೆಗೆ ಚಾಮರಾಜನಗರ, ಮಂಡ್ಯ, ಮೈಸೂರು ಮುಂತಾದ ವಿವಿಧ ಭಾಗಗಳಿಂದ ಆಗಮಿಸುತ್ತಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಅಲ್ಲಲ್ಲಿ ಸ್ಥಳೀಯ ಪೊಲೀಸರು ತಡೆದು, ವಶಕ್ಕೆ ತೆಗೆದುಕೊಂಡು ಬಿಜೆಪಿಯ ಪ್ರಯತ್ನಕ್ಕೆ ಅಡ್ಡಗಾಲು ಹಾಕಿದರು. ಪ್ರತಿಭಟನೆಗೂ ಮುನ್ನವೇ ಸರಕಾರ ತಡೆಯೊಡ್ಡಿದ್ದಲ್ಲದೇ, ಪ್ರಮುಖ ನಾಯಕರನ್ನು ವಶಕ್ಕೆ ಪಡೆಯುತ್ತಿರುವುದನ್ನು ಗಮನಿಸಿದ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಶಾಸಕ ಅಶ್ವತ್ಥ ನಾರಾಯಣ ಗೂಡ್ಸ್ ಆಟೋದಲ್ಲಿ ಮೈಸೂರಿಗೆ ಆಗಮಿಸಿದರು.
ಮೈಸೂರಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಹಲವು ಕಾರ್ಯಕರ್ತರನ್ನು ಬೆಂಗಳೂರಿನ ಕುಂಬಳಗೂಡಿನಲ್ಲಿ ವಶಕ್ಕೆ ಪಡೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಆರ್. ಅಶೋಕ್, ಅಶ್ವತ್ಥ ನಾರಾಯಣ ಅವರು ಪ್ರತಿಭಟನ ಸ್ಥಳಕ್ಕೆ ಗೂಡ್ಸ್ ಆಟೋ ಏರಿ ಆಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.