Karnataka: ನ.16ರೊಳಗೆ 7ನೇ ವೇತನ ಆಯೋಗ ವರದಿ ಸಲ್ಲಿಕೆ: ಷಡಕ್ಷರಿ

ಸರ್ವಾನುಮತದಿಂದ ನೌಕರರ ಸಂಘದ ಬೈಲಾ ತಿದ್ದುಪಡಿ- ತಕ್ಷಣ, ಕೂಡಲೇ ವರದಿ ಕೊಡುವ ಎನ್ನುವ ಪದ ತೆಗೆದು ಹಾಕಿದ್ದೇವೆ

Team Udayavani, Oct 1, 2023, 10:20 PM IST

SHADAKSHARI

ಕೊಪ್ಪಳ: 7ನೇ ವೇತನ ಆಯೋಗ ಸಂಪೂರ್ಣವಾಗಿ ತನ್ನ ಕೆಲಸ ಮುಗಿಸಿದೆ. ವರದಿಯನ್ನು ಸಿದ್ಧಪಡಿಸಿ ಸಲ್ಲಿಸುವ ಹಂತಕ್ಕೆ ಬಂದಿದೆ. ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ನ.16ರೊಳಗೆ ವರದಿ ಕೊಡುವ ವಿಶ್ವಾಸವಿದೆ. ಮತ್ತೆ ಅವ ಧಿ ವಿಸ್ತರಣೆ ಮಾಡುವ ಸಾಧ್ಯತೆ ಕಡಿಮೆ. ಆಯೋಗದ ಶಿಫಾರಸಿನ ಮೇಲೆ ನಾವು ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಗ್ಯಾರಂಟಿಯಲ್ಲಿ ಸರ್ಕಾರಿ ನೌಕರರಿಗೆ ವೇತನದ ಸಮಸ್ಯೆ ಬರಲ್ಲ. ಸರ್ಕಾರ ಈಗಾಗಲೇ ನಮಗೆ ಶೇ.17ರಷ್ಟು ವೇತನ ಹೆಚ್ಚಿಸಿದೆ. ರಾಜ್ಯದ ಬಜೆಟ್‌ 3.25 ಲಕ್ಷ ಕೋಟಿ ರೂ. ಇದೆ. ಸರ್ಕಾರಕ್ಕೆ ನೌಕರರ ವೇತನ ದೊಡ್ಡ ಮೊತ್ತವಲ್ಲ. ಆಯೋಗ ಶಿಫಾರಸು ಮಾಡುವಷ್ಟು ನಮಗೆ ಕೊಟ್ಟರೆ ಮುಗಿಯುತ್ತದೆ. ಹಿಂದಿನ ಸರ್ಕಾರ ವರದಿ ಬಂದ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ ಎಂದಿತ್ತು. ನಾವು 40 ಪರ್ಸೆಂಟ್‌ ವೇತನ ಕೇಳಿದ್ದೇವೆ. ಆಯೋಗ ಶಿಫಾರಸು ಮಾಡಿದ ಮೇಲೆ ನಾವು ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತೇವೆ. ಹಿಂದೆ ಸಿದ್ದರಾಮಯ್ಯ ಅವರು 6ನೇ ವೇತನ ಆಯೋಗಕ್ಕೆ ಶೇ.30ರಷ್ಟು ವೇತನ ಹೆಚ್ಚಳಕ್ಕೆ ಆದೇಶಿಸಿದ್ದರು. ಹಿಂದೆ ಕೊಟ್ಟಿದ್ದಾರೆ, ಈಗ ಕೊಟ್ಟೇ ಕೊಡುತ್ತಾರೆ ಎನ್ನುವ ಭರವಸೆಯಿದೆ ಎಂದರು.

ಲಿಂಗಾಯತ ಅಧಿಕಾರಿಗಳ ವಿಚಾರ ನನಗೆ ಗೊತ್ತಿಲ್ಲ
ಶಾಮನೂರು ಶಿವಶಂಕರಪ್ಪ ಅವರು ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯದ ವಿಚಾರ ನನಗೆ ಗೊತ್ತಿಲ್ಲ. ಅವರು ಅಖೀಲ ಭಾರತ ಲಿಂಗಾಯತ ಸಮುದಾಯ ರಾಷ್ಟ್ರೀಯ ಅಧ್ಯಕ್ಷರು, ನಾನು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ. ನಮ್ಮಲ್ಲಿ ಎಲ್ಲರೂ ಇರುತ್ತಾರೆ. ಅಂತಹ ವಿಷಯ ನಮ್ಮ ಗಮನಕ್ಕೆ ಬಂದಿಲ್ಲ. ಆ ತರಹದ ವಿಷಯ ಗಮನಕ್ಕೆ ಬಂದರೆ ನಾವು ಸರ್ಕಾರದ ಗಮನಕ್ಕೆ ತರುತ್ತೇವೆ. ಅದಕ್ಕೆ ಅವರೇ ಉತ್ತರಿಸಬೇಕು ಎಂದು ಷಡಕ್ಷರಿ ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ 2012ರಲ್ಲಿ ಸಂಘದ ಬೈಲಾ ತಿದ್ದುಪಡಿಯಾಗಿತ್ತು. 2022ರಲ್ಲಿ ಸಮಗ್ರ ತಿದ್ದುಪಡಿ ಮಾಡಲಾಗಿತ್ತು. 150 ಪುಟದ ಬೈಲಾ ಮಾಡಿದ್ದೇವು. ಆದರೆ ಅದರಲ್ಲಿ ಕಠಿಣ ಅಂಶಗಳು ಇದ್ದವು. ಆರೇಳು ವಿಷಯ ತಿದ್ದುಪಡಿ ಮಾಡಬೇಕೆಂದು ಹಲವು ಸದಸ್ಯರು ಪ್ರತಿ ಸಭೆಯಲ್ಲಿ ಚರ್ಚೆ ಮಾಡುತ್ತಿದ್ದರು. ತಕ್ಷಣ, ಶೀಘ್ರ ಎನ್ನುವ ಪದಗಳನ್ನು ತೆಗೆಯಬೇಕೆನ್ನುವ ಒತ್ತಾಯ ಮಾಡಿದ್ದರು. ಬೈಲಾದಲ್ಲಿ ಮೂಲ ಸ್ವರೂಪದಲ್ಲಿ ಧಕ್ಕೆ ಇಲ್ಲದೆ ಪದಗಳಲ್ಲಿ ವ್ಯತ್ಯಾಸವನ್ನು ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ವಿರೋಧ ವ್ಯಕ್ತವಾಗಿಲ್ಲ.

ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದಾರೆ. ಎಲ್ಲರೂ ಮುಕ್ತವಾಗಿ ಪಾಲ್ಗೊಳ್ಳುವ ವ್ಯವಸ್ಥೆಗಾಗಿ ನಾವು ರಾಜ್ಯಮಟ್ಟದ ವಿಶೇಷ ಸಭೆ ನಡೆಸಿ ಸರ್ವರ ಒಪ್ಪಿಗೆ ಪಡೆದಿದ್ದೇವೆ. 6 ಲಕ್ಷ ನೌಕರರಿರುವ ನಮ್ಮ ಸಂಘದಲ್ಲಿ ಯಾರಾದರೊಬ್ಬರು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದರೆ ಎಲ್ಲವೂ ಪ್ರೊಸೆಸ್‌ ಆಗುತ್ತೆ. ಹಾಗಾಗಿ ಕಾನೂನು ಬದ್ಧವಾಗಿ ನಾವು ಮಾಡಿದ್ದೇವೆ. ಸಂಘದ ಸದಸ್ಯತ್ವ ಶುಲ್ಕ 200ಕ್ಕೆ ನಿಗದಿ , ತಕ್ಷಣ, ಕೂಡಲೇ ವರದಿ ಕೊಡುವ ಎನ್ನುವ ಪದ ತೆಗೆದು ಹಾಕಿದ್ದೇವೆ. ಜಿಲ್ಲಾಧ್ಯಕ್ಷರಿಗೆ ತಾಲೂಕು ನಿಯಂತ್ರಣಕ್ಕೆ ಅ ಧಿಕಾರ ನೀಡಿದೆ. ಚುನಾವಣೆಯಲ್ಲಿ ಪಾರದರ್ಶಕ ವ್ಯವಸ್ಥೆ ಮಾಡಿದ್ದೇವೆ ಎಂದರು.

ಅ.27ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ತುಮಕೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿಶೇಷ ಸನ್ಮಾನ ಹಮ್ಮಿಕೊಳ್ಳಲು ಉದ್ದೇಶಿಸಿದೆ. 12-15 ಸಾವಿರ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಾರೆ. ಸಿಎಂ ಅವರೇ ಉದ್ಘಾಟನೆ ಮಾಡಲಿದ್ದಾರೆ. ಸರ್ಕಾರಿ ನೌಕರರು ಮೃತಪಟ್ಟರೆ ಅವರಿಗೆ ವಿಮೆ ಹೊರತುಪಡಿಸಿ ವೇತನ ಖಾತೆ ಇರುವ ಬ್ಯಾಂಕ್‌ನಲ್ಲಿ ಇನ್ಸೂರೆನ್ಸ್‌ ಕವರೇಜ್‌ ಮಾಡುವ ಕುರಿತು ಬ್ಯಾಂಕ್‌ಗಳಿಗೆ ಮಾತನಾಡಿದ್ದೇವೆ. ಸರ್ಕಾರಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಕೊಡುವ ಕುರಿತು ಸಭೆ ನಡೆದಿದೆ. ಬ್ಯಾಂಕ್‌ನವರು ತಾತ್ವಿಕವಾಗಿ ಒಪ್ಪಿದ್ದಾರೆ, ಅನುಕಂಪದ ನೌಕರಿ ಸ್ಥಗಿತ ಮಾಡಿಲ್ಲ, ಸರ್ಕಾರ ಅದನ್ನು ಮಾಡಿಯೇ ಮಾಡುತ್ತದೆ ಎಂದರು.

ಟಾಪ್ ನ್ಯೂಸ್

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.