![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 3, 2020, 5:54 AM IST
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ಸಂಕಷ್ಟ ಸಹಾಯ ಧನಕ್ಕೆ ಇಲಾಖೆಯಡಿ ಹಾಲಿ ಪಿಂಚಣಿ ಪಡೆಯುತ್ತಿರುವ ಸುಮಾರು ಹದಿನೈದು ಸಾವಿರ ಕಲಾವಿದರು ಅರ್ಜಿ ಹಾಕಿರುವುದು ಇದೀಗ ಬೆಳಕಿಗೆ ಬಂದಿದೆ. ಇಂತಹ ಅರ್ಜಿಗಳನ್ನು ಆಧಾರ್ ಸಂಖ್ಯೆಯ ಮೂಲಕ ಪತ್ತೆ ಹಚ್ಚಲಾಗಿದ್ದು, ಈ ಎಲ್ಲಾ ಕಲಾವಿದರ ಅರ್ಜಿಗಳು ತಿರಸ್ಕೃತಗೊಂಡಿವೆ.
ಲಾಕ್‌ಡೌನ್ ವೇಳೆ ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ನೆರವಾಗಲಿ ಎಂಬ ಸದುದ್ದೇಶದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಾವಿದರಿಗೆ ತಲಾ 2 ಸಾವಿರ ರೂ. ಆರ್ಥಿಕ ಸಹಾಯ ಧನ ನೀಡಲು ಮುಂದಾಗಿತ್ತು. ಈ ಯೋಜನೆಯಡಿ ಸಹಾಯ ಧನ ಪಡೆಯಲು ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಸಹಾಯ ಧನ ಪಡೆಯುತ್ತಿರುವ ಕಲಾವಿದರು ಅರ್ಜಿ ಹಾಕುವ ಹಾಗಿಲ್ಲ ಎಂಬ ಷರತ್ತು ಕೂಡ ವಿಧಿಸಲಾಗಿತ್ತು.
ಈ ಯೋಜನೆಯಡಿಯ ಸಹಾಯ ಧನ ಪಡೆಯಲು ರಾಜ್ಯ ವಿವಿಧ ಮೂಲೆಗಳಿಂದ ಹಲವು ಕ್ಷೇತ್ರ ಸುಮಾರು 30 ಸಾವಿರ ಕಲಾವಿದರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳಲ್ಲಿ ಸುಮಾರು 15 ಸಾವಿರ ಅರ್ಜಿಗಳು ಪಿಂಚಣಿದಾರರ ಅರ್ಜಿಗಳಾಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಧಾರ್ ಸಂಖ್ಯೆಯ ಮೂಲಕ ಪತ್ತೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವಂತಹ ಕರ್ನಾಟಕ ನಾಟಕ ಅಕಾಡೆಮಿ, ಜಾನಪದ ಅಕಾಡೆಮಿ, ಯಕ್ಷಗಾನ ಅಕಾಡೆಮಿ, ಬಯಲಾಟದ ಅಕಾಡೆಮಿ, ಲಲಿತ ಕಲಾ ಅಕಾಡೆಮಿ ಸೇರಿದಂತೆ ವಿವಿಧ ಅಕಾಡೆಮಿಗಳಲ್ಲಿ ಹಾಲಿ ಪಿಂಚಣಿದಾರರು ಆರ್ಥಿಕ ಸಹಾಯ ಧನ ಪಡೆಯಲು ಅರ್ಜಿ ಸಲ್ಲಿಸಿರುವುದು ಕೂಡ ಬೆಳಕಿಗೆ ಬಂದಿದೆ.
ಸರ್ಕಾರ ರೂಪಿಸಿರುವ ಈ ಸಹಾಯ ಧನ ಸಿಗಬೇಕಾದ ಅರ್ಹ ಕಲಾವಿದರಿಗೆ ತಲುಪಬೇಕು ಎಂಬ ನಿಟ್ಟಿನಲ್ಲಿಯೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಆಧಾರ್ ಸಂಖ್ಯೆಯ ಮೊರೆ ಹೋದರು. ಈ ವೇಳೆ ಕಲಾವಿದರ ಆಧಾರ್ ಸಂಖ್ಯೆ ಪರೀಕ್ಷೆ ಮಾಡುತ್ತಿದ್ದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಪಿಂಚಣಿ ಪಡೆಯುತ್ತಿದ್ದ ಹಲವು ಹಾಲಿ ಕಲಾವಿದರು ಅರ್ಜಿ ಸಲ್ಲಿಸಿರುವುದು ತಿಳಿದು ಬಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್.ರಂಗಪ್ಪ ಮಾಹಿತಿ ನೀಡಿದ್ದಾರೆ.
ಇಲಾಖೆಯಿಂದ ಸಹಾಯ ಪಡೆಯದ ಹಲವು ಕಲಾವಿದರು ರಾಜ್ಯದ ನಾನಾ ಭಾಗದಲ್ಲಿದ್ದಾರೆ. ಅಂತಹವರಿಗೆ ನೆರವಾಗಲಿ ಎಂಬ ಮೂಲ ಉದ್ದೇಶದಿಂದ ಸರ್ಕಾರ 2 ಸಾವಿರ ರೂ. ಆರ್ಥಿಕ ಅನುದಾನ ನೀಡಲು ಮುಂದಾಗಿತ್ತು. ಅಂತಹ ಕಲಾವಿದರಿಗೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.
6 ಸಾವಿರ ಕಲಾವಿದರಿಗೆ ಬ್ಯಾಂಕ್ ಖಾತೆಗೆ ಹಣ: ಈಗಾಗಲೇ ಸುಮಾರು 10 ಸಾವಿರ ಅರ್ಹ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ ಈಗಾಗಲೇ ಸುಮಾರು 6 ಸಾವಿರ ಕಲಾವಿದರಿಗೆ ಬ್ಯಾಂಕ್ ಖಾತೆಯ ಮೂಲಕ ಸಹಾಯ ಧನ ನೀಡಲಾಗಿದೆ. ಇನ್ನೂ ನಾಲ್ಕು ಸಾವಿರ ಕಲಾವಿದರ ಬ್ಯಾಂಕ್ ಖಾತೆಯ ಮೂಲಕ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲೇ ಆ ಕಲಾವಿದರಿಗೂ ಹಣ ತಲುಪಿಸುವ ಕಾರ್ಯ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಸಹಾಯ ಧನಕ್ಕಾಗಿ ಬರುವ ಅರ್ಜಿಗಳ ಪರೀಶಿಲನೆ ನಡೆಸಿ ಕಲಾವಿದರ ಮತ್ತೂಂದು ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಇಲಾಖೆ ನೀಡುವ ಆರ್ಥಿಕ ಸಹಾಯಧನಕ್ಕಾಗಿ ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಪಿಂಚಣಿ ಪಡೆಯುತ್ತಿದ್ದ ಸುಮಾರು 15 ಸಾವಿರಕ್ಕೂ ಅಧಿಕ ಕಲಾವಿದರು ಅರ್ಜಿ ಸಲ್ಲಿಸಿದ್ದಾರೆ. ಅಂಥವರ ಅರ್ಜಿಯನ್ನು ಆಧಾರ್ ಸಂಖ್ಯೆ ಮೂಲಕ ಪತ್ತೆ ಹಚ್ಚಿ ತಿರಸ್ಕರಿಸಲಾಗಿದೆ.
-ಎಸ್.ರಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ
* ದೇವೇಶ ಸೂರಗುಪ್ಪ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.