ಹೆಂಡತಿಯ ಬುದ್ದಿಮಾತಿಗೆ ಮನನೊಂದ ಪತಿ ನದಿಗೆ ಹಾರಿ ಆತ್ಮಹತ್ಯೆ
Team Udayavani, Dec 18, 2019, 9:10 PM IST
ವಿಜಯಪುರ: ತಂದೆಯ ನಿಧನದ ಕಾರಣ ಬಂದಿದ್ದ ವಿಮಾ ಹಣವನ್ನು ಹಾಳುಮಾಡದಂತೆ ಪತ್ನಿ ಬುದ್ದಿ ಮಾತು ಹೇಳಿದಳೆಂಬ ಕ್ಷುಲ್ಲಕ ಕಾರಣಕ್ಕೆ ಪತಿ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ಕೊಲ್ಹಾರ ಬಳಿ ಸಂಭವಿಸಿದೆ.
ಕಲಬುರಗಿ ಜಿಲ್ಲೆ ಆಳಂದ ಪಟ್ಟಣದ ನಿವಾಸಿ ಶ್ರೀಶೈಲ ಚೌಡಪ್ಪ ಷಣ್ಮುಖ (35) ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ .
ತನ್ನ ತಂದೆ ಮೃತಪಟ್ಟ ಕಾರಣ ಬಂದಿರುವ ವಿಮಾ ಹಣವನ್ನು ಹಾಳು ಮಾಡದೇ ತಾಯಿಯ ಬಳಿ ಕೊಡಿ ಎಂದು ಪತ್ನಿ ಬುದ್ದಿಮಾತು ಹೇಳಿದ್ದಳು.
ಇದರಿಂದ ನೊಂದುಕೊಂಡ ಶ್ರೀಶೈಲ, ಮಂಗಳವಾರ ತಮ್ಮ ಸ್ನೇಹಿತರೊಂದಿಗೆ ಹುಬ್ಬಳ್ಳಿಗೆ ಹೋಗಿ ಬರುವುದಾಗಿ ಹೆಂಡತಿಗೆ ಹೇಳಿ ಮನೆಯಿಂದ ಹೋಗಿದ್ದ. ನಂತರ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿ ಇರುವ ಕೃಷ್ಣಾ ಸೇತುವೆ ಮೇಲಿಂದ ಮೊಬೈಲ್ ನಲ್ಲಿ ಸೆಲ್ಫು ತೆಗೆದುಕೊಳ್ಳುವುದಾಗಿ ಹೇಳಿ ಸೇತುವೆ ಮೇಲಿಂದ ನದಿಗೆ ಹಾರಿದ್ದಾನೆ.
ಬುಧವಾರ ಬೆಳಿಗ್ಗೆ ಮೃತದೇಹ ನದಿಯಲ್ಲಿ ತೇಲಿದ್ದು, ಶವವನ್ನು ಹೊರ ತಗೆಯಲಾಗಿದೆ.
ಈ ಕುರಿತು ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.