LET: ಕರ್ನಾಟಕದಲ್ಲಿಆತ್ಮಾಹುತಿ ಸಂಚು: ಚಾರ್ಜ್‌ಶೀಟ್ ಸಲ್ಲಿಕೆ
ಕರ್ನಾಟಕದಲ್ಲಿ ಸಂಚು ರೂಪಿಸಿದ್ದ 8 ಲಷ್ಕರ್ ಉಗ್ರರ ವಿರುದ್ಧ ಆರೋಪ ಪಟ್ಟಿ
Team Udayavani, Jan 13, 2024, 12:36 AM IST
ಹೊಸದಿಲ್ಲಿ: ಉಗ್ರ ಸಂಘಟನೆ ಲಷ್ಕರೆ ತಯ್ಯಬಾ (ಎಲ್‌ಇಟಿ)ದಿಂದ ಕರ್ನಾಟಕದಲ್ಲಿ ಆತ್ಮಾಹುತಿ ದಾಳಿ ನಡೆಸಲು ಸಂಚು ಹಾಗೂ ಜೈಲಿನಲ್ಲೇ ಕುಳಿತು ಭಯೋತ್ಪಾದನೆ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ ಆರೋಪದ ಮೇರೆಗೆ ಎಂಟು ಮಂದಿ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಶುಕ್ರವಾರ ಆರೋಪ ಪಟ್ಟಿ ದಾಖಲಿಸಿದೆ.
ಈ ಎಂಟು ಮಂದಿ ಪೈಕಿ ಉಗ್ರರಾದ ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ತಲೆಮರೆಸಿಕೊಂಡಿದ್ದಾರೆ. ಇಬ್ಬರು ವಿದೇಶಕ್ಕೆ ಪರಾರಿ ಯಾಗಿರುವ ಶಂಕೆ ಇದೆ. ಉಳಿದಂತೆ, ಹಲವು ಬಾಂಬ್ ಸ್ಫೋಟ್ ಪ್ರಕರಣದಲ್ಲಿ ಭಾಗಿಯಾಗಿರುವ ಕೇರಳದ ಕಣ್ಣೂರಿನ ಟಿ.ನಸೀರ್ ಜೀವಾವಧಿ ಶಿಕ್ಷೆಗೆ ಒಳಗಾಗಿ 2013ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಜತೆಗೆ ಆರೋಪಿಗಳಾದ ಸಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಜಯೀದ್ ತಬ್ರೇಜ್, ಸಯದ್ ಮುದಾಸ್ಸಿರ್ ಪಾಷಾ ಮತ್ತು ಮೊಹಮ್ಮದ್ ಫೈಸಲ್ ರಬ್ಟಾನಿ ಅಲಿಯಾಸ್ ಸದತ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಕಳೆದ ವರ್ಷ ಜುಲೈನಲ್ಲಿ ಈ ಉಗ್ರರ ಅಡ್ಡೆ ಮೇಲೆ ದಾಳಿ ನಡೆಸಿದ್ದ ಬೆಂಗಳೂರು ನಗರ ಪೊಲೀಸರು, ಶಸ್ತ್ರಾಸ್ತ್ರಗಳು, ಮದ್ದು- ಗುಂಡುಗಳು, ಹ್ಯಾಂಡ್ ಗ್ರೆನೇಡ್‌ಗಳು ಮತ್ತು ವಾಕಿ-ಟಾಕಿಗಳನ್ನು ವಶಪಡಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.