Sullia: ಚಾಲಕನ ನಿಯಂತ್ರಣ ತಪ್ಪಿದ ಕಾರು
Team Udayavani, May 22, 2024, 10:04 PM IST
ಸುಳ್ಯ: ಸುಳ್ಯ ಹಳೆಗೇಟು ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡದ ಮೇಲೆ ಹತ್ತಿ ಹೊರಬಂದು ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಸ್ಕಾರ್ಪಿಯೋ ವಾಹನಕ್ಕೆ ಢಿಕ್ಕಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಹಳೆಗೇಟು ಪೆಟ್ರೋಲ್ ಬಂಕ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗದ ಗುಡ್ಡಕ್ಕೆ ಹತ್ತಿ ಅಲ್ಲಿಂದ ಹೊರ ಬಂದು ಮನೆಯ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕಾರ್ಪಿಯೊ ವಾಹನಕ್ಕೆ ಢಿಕ್ಕಿಯಾಗಿದೆ. ಘಟನೆಯಿಂದ ಎರಡು ವಾಹನಗಳು ಜಖಂ ಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಾರೀಸುದಾರರಿಲ್ಲದೆ ಅನಾಥವಾದ ಶವದ ದಫನ
ಸುಳ್ಯ: ವಾರದ ಹಿಂದೆ ಸುಳ್ಯದ ಅರಂಬೂರು ಬಳಿ ಅನಾಥವಾಗಿ ಸಿಕ್ಕಿದ್ದ ಅಪರಿಚಿತ ವ್ಯಕ್ತಿಯ ಮೃತ ದೇಹವನ್ನು ವಾರಸುದಾರರು ಯಾರೂ ಬಾರದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸ್ ಇಲಾಖೆ ಹಾಗೂ ನಗರ ಪಂಚಾಯತ್ ಜಂಟಿಯಾಗಿ ಸುಳ್ಯದ ಕೇರ್ಪಳ ಹಿಂದೂ ರುದ್ರಭೂಮಿಯಲ್ಲಿ ದಫನ ಕಾರ್ಯ ನಿರ್ವಹಿಸಿತು.
ಪ್ರಗತಿ ಆಂಬುಲೆನ್ಸ್ ನ ಮಾಲಕ ಅಚ್ಚು ಪ್ರಗತಿಯವರು ದಫನ ಕಾರ್ಯದಲ್ಲಿ ತೊಡಗಿಕೊಂಡರು. ಕಳೆದ
ಮೃತದೇಹವನ್ನು ಒಂದು ವಾರದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯ ಶೀತಲೀಕರಣ ಘಟಕದಲ್ಲಿ ಇರಿಸಲಾಗಿದ್ದು, ಸಂಬಂಧಿಕರು ಯಾರಾದರೂ ಇದ್ದರೆ ಮೃತದೇಹವನ್ನು ಪಡೆದುಕೊಂಡು ಹೋಗುವಂತೆ ಸುಳ್ಯ ಪೊಲೀಸ್ ಠಾಣೆಯಿಂದ ಪತ್ರಿಕಾ ಪ್ರಕಟನೆ ನೀಡಲಾಗಿತ್ತು. ಘಟನೆ ನಡೆದು ವಾರವಾದರೂ ಮನೆಯವರು ಯಾರೂ ಬಾರದ ಹಿನ್ನೆಲೆಯಲ್ಲಿ ಮಂಗಳವಾರ ದಫನ ಮಾಡಲಾಗಿದೆ. ಈ ವೇಳೆ ಸ್ಥಳೀಯ ಪಂಚಾಯತ್ ಸಿಬಂದಿ, ಸುಳ್ಯ ಪೊಲೀಸ್ ಠಾಣೆಯ ಅನು ಕುಮಾರ್, ಮಹಿಳಾ ಪೊಲೀಸ್ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.