Sullia: ಎಡಂಗಲ ಸಮೀಪ ಸಂಪರ್ಕ ಕಡಿತ
Team Udayavani, Sep 2, 2024, 11:57 PM IST
ಸುಳ್ಯ: ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಸೋಮವಾರ ಸಾಧಾರಣ ಮಳೆ ಮುಂದುವರಿದಿದ್ದು, ಕಡಬ ತಾಲೂಕಿನ ಎಡಮಂಗಲ ಸಮೀಪದಲ್ಲಿ ಮೋರಿ ಮಣ್ಣು ಕುಸಿದು ಸಂಪರ್ಕ ಕಡಿತಗೊಂಡಿದೆ.
ಅಲೆಕ್ಕಾರಿ- ಎಡಮಂಗಲ- ಪುಳಿಕುಕ್ಕು ರಸ್ತೆಯ ಎಡಮಂಗಲ ಸಮೀಪದ ಮಾಲೆಂಗಿರಿ ಸಮೀಪದ ಸೇತುವೆ ಕುಸಿದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮೋರಿ ಅಳವಡಿಸಿ ರಸ್ತೆ ನಿರ್ಮಿಸಲಾಗಿತ್ತು.
ನಿರಂತರ ಮಳೆಗೆ ಮೋರಿಯ ಮಣ್ಣು ಕುಸಿದು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ವಾಹನ ಸಂಚಾರವನ್ನು ಮತ್ತೆ ನಿರ್ಬಂಧಿಸಲಾಗಿದೆ. ಇದರಿಂದ ಈ ಭಾಗದ ಜನರು ಸುತ್ತು ಬಳಸಿ ಸಂಚರಿಸಬೇಕಾಗಿದೆ.
ಸುಳ್ಯ ತಾಲೂಕಿನ ಸುಳ್ಯ ನಗರ, ಜಾಲ್ಸೂರು, ಅರಂತೋಡು, ಬೆಳ್ಳಾರೆ, ಗುತ್ತಿಗಾರು, ಕೊಲ್ಲಮೊಗ್ರು, ಸುಬ್ರಹ್ಮಣ್ಯ, ಎಡಮಂಗಲ ಸೇರಿದಂತೆ ವಿವಿಧೆಡೆ ಸಾಧಾರಣ ಮಳೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.