Sullia ಪರವಾನಿಗೆ ಇಲ್ಲದೆ ನಾಡ ಕೋವಿ ಹೊಂದಿದ್ದ ಪ್ರಕರಣ: ಆರೋಪ ಸಾಬೀತು : ಶಿಕ್ಷೆ
Team Udayavani, Nov 23, 2023, 12:24 AM IST
ಸುಳ್ಯ: ಪರವಾನಗಿ ಇಲ್ಲದೆ ನಾಡಕೋವಿ ಹೊಂದಿದ್ದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ಸುಳ್ಯ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ.
2013ರಲ್ಲಿ ಕಣ್ಣೂರು ಜಿಲ್ಲೆಯ ಎಂ.ಕೆ. ಅಜಿತ್ ಅವರು ಆಲೆಟ್ಟಿ ಗ್ರಾಮದ ಬಟ್ಟಂಗಾಯ ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಇರುವ ಮನೆಗೆ ಪರವಾನಿಗೆ ಇಲ್ಲದ ನಾಡ ಕೋವಿ, ಗನ್ ಪೌಡರ್ ಹಾಗೂ 2 ಕಬ್ಬಿಣದ ಕಡ್ಡಿಗಳನ್ನು ತಂದಿದ್ದರು.
ಈ ವಿಚಾರ ಪೋಲೀಸರಿಗೆ ತಿಳಿದು ಆರೋಪಿಯ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಸುಳ್ಯ ನ್ಯಾಯಾಲಯದಲ್ಲಿ ನಡೆದಿದ್ದು, ಅಪರಾಧ ಸಾಬೀತಾಗಿದೆ. ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಬಿ.ಮೋಹನ್ ಬಾಬು ಅವರು ಅಪರಾಧಿಗೆ 2 ವರ್ಷಗಳ ಸರಳ ಜೈಲು ಶಿಕ್ಷೆ ಮತ್ತು ರೂ. 10,000 ದಂಡ ಪಾವತಿಯ ಶಿಕ್ಷೆ ವಿಧಿಸಿ ಆದೇಶ ಮಾಡಿದ್ದಾರೆ.
ಸರಕಾರದ ಪರವಾಗಿ ಸುಳ್ಯದ ಸಹಾಯಕ ಸರಕಾರಿ ಅಭಿಯೋಜಕರು ವಾದ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.