Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಢಿಕ್ಕಿ
Team Udayavani, Apr 17, 2024, 10:57 PM IST
ಸುಳ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ಮಂಗಳವಾರ ಸಂಭವಿಸಿದೆ.
ಮುಜೀಬ್ ಅವರು ಕಾರನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದ ವೇಳೆ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಿಂದ ಕಾರು ಜಖಂಗೊಂಡಿದೆ.
ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
ಸುಳ್ಯ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ಬುಧವಾರ ಬೆಳಗ್ಗೆ ಸುಳ್ಯದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿ ಸಂಭವಿಸಿದೆ.
ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ (55) ಮೃತರು. ಅವರು ಬುಧವಾರ ಮುಂಜಾನೆ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ವೇಳೆ ಇವರಿಗೆ ಕಾರು ಢಿಕ್ಕಿಯಾಗಿದೆ. ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು. ಜಟ್ಟಿಪಳ್ಳ ನಿವಾಸಿಯಾಗಿದ್ದ ಅವರು ಹಲವಾರು ವರ್ಷಗಳಿಂದ ಮೇಸಿŒ ವೃತ್ತಿ ಮಾಡುತ್ತಿದ್ದರು. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.