Sullia ಮಹಿಳೆ ಆತ್ಮಹತ್ಯೆ ಪ್ರಕರಣ: ಸರಕಾರದಿಂದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ
Team Udayavani, Aug 26, 2024, 6:20 AM IST
ಸುಳ್ಯ: ಬೆಂಗಳೂರಿನಲ್ಲಿ ನೆಲೆಸಿರುವ ಸುಳ್ಯದ ಉಬರಡ್ಕದ ಮದುವೆಗದ್ದೆ ಎಂ.ಎಸ್. ಸುಬ್ರಹ್ಮಣ್ಯ ಮತ್ತು ಉಷಾ ದಂಪತಿಯ ಪುತ್ರಿ ಐಶ್ವರ್ಯಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಗೋವಿಂದನಗರ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರದ ಪರವಾಗಿ ಹೈಕೋರ್ಟ್‌ನಲ್ಲಿ ವಾದಿಸಲು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ (ಎಸ್‌ಪಿಪಿ) ಬೆಂಗಳೂರಿನ ಹಿರಿಯ ನ್ಯಾಯವಾದಿ ಎಂ.ಎಸ್. ಶ್ಯಾಮ್‌ಸುಂದರ್ ಅವರನ್ನು ಸರಕಾರ ನೇಮಿಸಿದೆ.
ಬಿಇ ಪದವೀಧರೆಯಾಗಿದ್ದ ಸುಳ್ಯದ ಐಶ್ವರ್ಯಾ ಅವರು ಡೈರಿ ರಿಚ್ ಸಂಸ್ಥೆಯ ಮಾಲಕ ಕಾಪಿಲ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರ ಪತ್ನಿಯಾಗಿದ್ದು, 2023 ಅ. 26ರಂದು ಬೆಂಗಳೂರಿನಲ್ಲಿರುವ ತಂದೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿಯ ಮನೆಯವರು ಮತ್ತು ಸೋದರ ಮಾವನ ಮನೆಯವರು ನೀಡಿದ ಕಿರುಕುಳದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಐಶ್ವರ್ಯಾ ವಿವರವಾಗಿ ಡೆತ್‌ನೋಟ್ ಬರೆದಿಟ್ಟಿದ್ದರಿಂದ ಅವರೆಲ್ಲರ ಮೇಲೆ ಕೇಸು ದಾಖಲಾಗಿ ಗಿರಿಯಪ್ಪ ಗೌಡ ಮತ್ತು ಅವರ ಮನೆಯವರ ಬಂಧನವೂ ನಡೆದಿತ್ತು. ಬಳಿಕ ಅವರು ಹೈಕೋರ್ಟ್‌ನಿಂದ ಜಾಮೀನು ಪಡೆದುಕೊಂಡಿದ್ದರು. ಪ್ರಕರಣದ ತನಿಖೆಗೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ತಂದಿದ್ದರು ಎನ್ನಲಾಗಿದೆ.
ಇದೀಗ ಹೈಕೋರ್ಟ್‌ನಲ್ಲಿ ಈ ಪ್ರಕರಣವನ್ನು ಮುನ್ನಡೆಸಲು ಶ್ಯಾಮಸುಂದರ್ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ. ಇದರಿಂದಾಗಿ ಈ ಪ್ರಕರಣದ ವಿಚಾರಣೆ ಮತ್ತೆ ಮುಂದುವರಿಯುವ ಸಾಧ್ಯತೆ ಇದೆ. ಇದೇ ಪ್ರಕರಣದ ಕೆಳಹಂತದ ನ್ಯಾಯಾಲಯದಲ್ಲಿ ವಾದಿಸುವುದಕ್ಕೂ ಶ್ಯಾಮ್‌ಸುಂದರ್ ಅವರನ್ನೇ ನೇಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ
Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ
Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!
ಮರ ಬಿದ್ದು ಸವಾರ ಸಾವು; ಅಪಾಯಕಾರಿ ಮರ ತೆರವಿಗೆ ಅಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.