Delhi: ಸರಕಾರಿ ಆಸ್ಪತ್ರೆಗಳಿಗೆ ನಕಲಿ ಔಷಧಗಳ ಪೂರೈಕೆ: CBI ತನಿಖೆಗೆ ಆದೇಶ
Team Udayavani, Dec 24, 2023, 12:39 AM IST
ಹೊಸದಿಲ್ಲಿ: ದಿಲ್ಲಿ ಸರಕಾರಿ ಆಸ್ಪತ್ರೆಗಳಿಗೆ ನಕಲಿ ಔಷಧಗಳ ಪೂರೈಕೆಗೆ ಸಂಬಂಧಿಸಿ ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೆನಾ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದಾರೆ. ಸರಕಾರಿ ಆಸ್ಪತ್ರೆಗಳಿಗೆ ಪ್ರಮಾಣಿತವಲ್ಲದ ಔಷಧಗಳ ಪೂರೈಕೆ ಆಗಿದೆ ಎಂಬ ಆರೋಪ ಕೇಳಿಬಂದಿದೆ.
ಲಕ್ಷಾಂತರ ರೋಗಿಗಳಿಗೆ ಈ ಔಷಧಗಳನ್ನು ನೀಡಲಾಗಿದೆ. ಈ ಔಷಧ ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುವ ಸಾಧ್ಯತೆ ಇದೆ ಎಂದು ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕೃತ ನಿವಾಸ “ರಾಜ್‌ನಿವಾಸ್’ನ ಅಧಿಕಾರಿಗಳು ಹೇಳಿದ್ದಾರೆ. ಹಗರಣ ಸಂಬಂಧ ದಿಲ್ಲಿ ಆರೋಗ್ಯ ಸಚಿವರ ವಜಾಕ್ಕೆ ಬಿಜೆಪಿ ಆಗ್ರಹಿಸಿದೆ. “ಔಷಧಗಳ ಖರೀದಿ ಸಂಬಂಧ ಈ ಹಿಂದೆಯೇ ಆಡಿಟ್‌ಗೆ ಸೂಚಿಸಿದ್ದೇನೆ. ಆದರೆ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಕರಣ ಸಂಬಂಧ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದಿಲ್ಲಿ ಆರೋಗ್ಯ ಸಚಿವ ಸೌರಭ್‌ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.