Supreme Court: ಶಸ್ತ್ರಚಿಕಿತ್ಸೆ ಲೈವ್: ಕೇಂದ್ರ, ಎನ್ಎಂಸಿಗೆ ಸುಪ್ರೀಂ ಕೋರ್ಟ್ ನೋಟಿಸ್
Team Udayavani, Oct 13, 2023, 10:47 PM IST
ನವದೆಹಲಿ: ವೈದ್ಯರು ನಡೆಸುವ ಶಸ್ತ್ರಚಿಕಿತ್ಸೆಯನ್ನು ಲೈವ್ ಆಗಿ ಪ್ರಸಾರ ಮಾಡುವ ಕುರಿತು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವೈದ್ಯಕೀಯ ಮಂಡಳಿ(ಎನ್ಎಂಸಿ)ಯ ಪ್ರತಿಕ್ರಿಯೆಗಳನ್ನು ಬಯಸಿ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ದೆಹಲಿಯ ಕೆಲವು ನಿವಾಸಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ಶಸ್ತ್ರಚಿಕಿತ್ಸೆಯನ್ನು ಲೈವ್ ಆಗಿ ಪ್ರಸಾರದ ವೇಳೆ ಅನೇಕ ಕಾನೂನಾತ್ಮಕ ಮತ್ತು ನೈತಿಕ ಪ್ರಶ್ನೆಗಳು ಏಳುವುದರಿಂದ, ಈ ಕುರಿತು ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಕೇಂದ್ರ ಹಾಗೂ ಎನ್ಎಂಸಿಗೆ ಸೂಚಿಸಿದೆ.
“ಶಸ್ತ್ರಚಿಕಿತ್ಸೆಗಳನ್ನು ಲೈವ್ ಆಗಿ ಪ್ರಸಾರ ಮಾಡಲಾಗುತ್ತಿದೆ. ಇದನ್ನು ಕೆಲವು ಜನರು ವೀಕ್ಷಿಸುತ್ತಿದ್ದಾರೆ ಮತ್ತು ಈ ಪ್ರಕ್ರಿಯೆ ಕುರಿತು ವೈದ್ಯರಿಗೆ ಪ್ರಶ್ನೆ ಕೇಳುತ್ತಾರೆ. ಇದು ಹೇಗೆಂದರೆ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುವ ಜತೆಗೆ ಅದೇ ಸಮಯದಲ್ಲಿ ಕಾಮೆಂಟರಿ ಮಾಡಿದಂತೆ. ಇದು ರೋಗಿಗಳ ಜೀವವನ್ನು ಅಪಾಯಕ್ಕೆ ತಳ್ಳಲಿದೆ. ಅಲ್ಲದೇ ಆರ್ಥಿಕವಾಗಿ ಹಿಂದುಳಿದ ರೋಗಿಗಳನ್ನೇ ಇದಕ್ಕೆ ಬಳಸಲಾಗುತ್ತಿದೆ’ ಎಂದು ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಗೋಪಾಲ್ ಶಂಕರ್ನಾರಾಯಣನ್ ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.