JDS ನಿಂದ ಸಿ.ಎಂ.ಇಬ್ರಾಹಿಂ ಅಮಾನತು
Team Udayavani, Nov 17, 2023, 11:55 PM IST
ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರದಾನಿ ಎಚ್.ಡಿ. ದೇವೇಗೌಡರು ಘೋಷಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ದೇವೇಗೌಡರು, ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಸಂವಿಧಾನ ಹಾಗೂ ನಿಯಮಗಳ ಅಡಿಯಲ್ಲಿ ಶಿಸ್ತು ಉಲ್ಲಂಘನೆ ಮಾಡಿದ ಕಾರಣದಿಂದ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇಬ್ರಾಹಿಂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಂಪೂರ್ಣ ನಿಷ್ಕ್ರಿಯರಾಗಿದ್ದರು. ಸಂಘಟನೆ ಬಲವರ್ಧನೆಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿರುವುದಿಲ್ಲ, ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಪಕ್ಷದ ನಿರ್ಣಯವನ್ನು ಅವರು ಸ್ಪಷ್ಟವಾಗಿ ಉಲ್ಲಂ ಸಿರುತ್ತಾರೆ ಎಂದು ಪಕ್ಷದ ಹಿಂದಿನ ಮಹಾಪ್ರಧಾನ ಕಾರ್ಯದರ್ಶಿ ಎಸ್.ಎಲ್. ಭೋಜೇಗೌಡರು 2023ರ ಅ.19 ರಂದು ನೀಡಿರುವ ವರದಿ ಆಧರಿಸಿ ಈ ಕ್ರಮ ಕೈಗೊಳ್ಳ ಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.
ಅಮಾನತಿಗೆ ಕಾರಣಗಳು
ಪಕ್ಷದ ಹಿತಕ್ಕಾಗಿ ಬಿಜೆಪಿ ಜತೆ ಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸರ್ವಾನುಮತದ ಅಧಿಕಾರ ನೀಡಲಾಗಿತ್ತು ಹಾಗೂ ಮೈತ್ರಿ ಬಗ್ಗೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲು ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಪೂರ್ಣ ಅಧಿಕಾರ ನೀಡಲಾಗಿತ್ತು. ಈ ಬಗ್ಗೆ ನಿರ್ಣಯ ಕೈಗೊಳ್ಳಲು ನಡೆದ ಎಲ್ಲ ಸಭೆಗಳಲ್ಲಿ ಇಬ್ರಾಹಿಂ ಅವರು ಹಾಜರಿದ್ದರು. ಆದರೂ ಅವರು ಪಕ್ಷಕ್ಕೆ ಹಾನಿ ಉಂಟು ಮಾಡುವ ವಿರೋಧಾಭಾಸದ ಹೇಳಿಕೆಗಳನ್ನು ನೀಡಿರುತ್ತಾರೆ.
ಚಿಂತನ-ಮಂಥನ ಹೆಸರಲ್ಲಿ ಬೆಂಗಳೂರಿನಲ್ಲಿ 2023ರ ಅ.16ರಂದು ಸಮಾನ ಮನಸ್ಕರ ಸಭೆ ನಡೆಸಿ ಪಕ್ಷದ ನಾಯಕರ ವಿರುದ್ಧ ಬೇಜವಾಬ್ದಾರಿಯುತ ಹೇಳಿಕೆ ನೀಡಿ, ಸುಳ್ಳು ಆರೋಪಗಳನ್ನು ಮಾಡಿದ್ದಾರೆ.
ನವೆಂಬರ್ 15ರಂದು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ. ನಾಣು ಕೇರಳದ ತಿರುವನಂತಪುರದಲ್ಲಿ ಅನಧಿಕೃತವಾಗಿ ಕರೆದಿದ್ದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ, ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ವಿರೋಧಭಾಸದ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.