ಸುವರ್ಣ ತ್ರಿಭುಜ ದೋಣಿ ದುರಂತ: ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ
Team Udayavani, Nov 19, 2020, 6:05 PM IST
ಮಲ್ಪೆ: ಸುವರ್ಣ ತ್ರಿಭುಜ ಬೋಟ್ ದುರಂತದಲ್ಲಿ ಮೃತಪಟ್ಟ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣ ದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ ಕರ್ನಾಟಕ ಸರಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.
ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮಂದಿ ಮೀನುಗಾರರ ಕುಟುಂಬಸ್ಥರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿಯನ್ನು ಪ್ರದರ್ಶಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿ ವಹಿಸಿದ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರರ ಮುಖಂಡ ನಾಡೋಜ ಡಾ ಜಿ ಶಂಕರ್ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕ ಕೆ ರಘುಪತಿ ಭಟ್ ಹಾಗೂ ಕರಾವಳಿಯ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.