29ಕ್ಕೆ ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ: ಸುಮಲತಾ
Team Udayavani, May 25, 2019, 6:00 AM IST
ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆಯಲ್ಲಿ ಮೇ 29 ರಂದು ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ ಆಚರಿಸುವುದಾಗಿ ನೂತನ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಶುಕ್ರವಾರ ತಮ್ಮ ಪತಿ ದಿ. ಅಂಬರೀಶ್ ಅವರ ಸಮಾಧಿಗೆ ತೆರಳಿ ಚುನಾವಣೆಯಲ್ಲಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಜಯದ ಪ್ರಮಾಣ ಪತ್ರವನ್ನು ಅಂಬರೀಶ್ ಸಮಾಧಿಯ ಮೇಲೆ ಇಟ್ಟು ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಮೇ 29 ರಂದು ಅಂಬರೀಶ್ ಅವರ ಹುಟ್ಟು ಹಬ್ಬ ಇರುವುದರಿಂದ ಅಂದು ಸ್ವಾಭಿಮಾನಿ ವಿಜಯೋತ್ಸವ ಆಚರಿಸಲು ನಿರ್ಧರಿಸಿದ್ದೇವೆ. ಈ ಸಮಾವೇಶದಲ್ಲಿ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್ ಪಾಲ್ಗೊಳ್ಳಲಿದ್ದಾರೆ. ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸುವ ಮೂಲಕ ಮಂಡ್ಯ ಜನತೆಗೆ ಅಭಿನಂದನೆ ಸಲ್ಲಿಸುತ್ತೇವೆ. ಮಂಡ್ಯದಲ್ಲಿ ನನ್ನ ಗೆಲುವಿನಲ್ಲಿ ಮಹಿಳೆಯರ ಪಾಲು ದೊಡ್ಡದಿದೆ ಎಂದರು.
ಚುನಾವಣೆ ಗೆಲುವಿಗೆ ನಟ ಚಿರಂಜೀವಿ, ಓಮರ್ ಅಬ್ದುಲ್ಲಾ ಸೇರಿ ಅನೇಕ ನಾಯಕರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ನಟ ಯಶ್ ಮೊದಲು ಕರೆ ಮಾಡಿ ಏನ್ ಎಂಪಿ ಮೇಡಂ ಅಂದರು, ದರ್ಶನ್ ಕರೆ ಮಾಡಿ, ಎಂಪಿ ಮದರ್ ಇಂಡಿಯಾ ಎಂದು ಹೇಳಿದರು. ಮುಖ್ಯ ಮಂತ್ರಿ ಕುಮಾರಸ್ವಾಮಿ, ದೇವೇಗೌಡರು ಹಾಗೂ ನಿಖೀಲ್ ಕುಮಾರಸ್ವಾಮಿ ಕರೆ ಮಾಡಿಲ್ಲ ಎಂದು ಹೇಳಿದರು.
ಸದ್ಯ ಜವಾಬ್ದಾರಿ ಹೆಚ್ಚಾಗಿರುವುದರಿಂದ ಚಲನಚಿತ್ರದಲ್ಲಿ ನಟಿಸುವುದಿಲ್ಲ. ರಾಜಕಾರಣದಿಂದ ಕಲಿಯುವುದು ಇನ್ನೂ ತುಂಬಾ ಇದೆ. ಚುನಾವಣಾ ಪ್ರಚಾರದ ವೇಳೆ ರಾಜಕಾರಣದಲ್ಲಿ ಏನು ಮಾಡಬಾರದು ಎನ್ನುವುದನ್ನು ಕಲಿತೆ. ನನ್ನ ಗೆಲುವನ್ನು ಎಲ್ಲರೂ ಇತಿಹಾಸ ಎಂದು ಕರೆಯುತ್ತಿದ್ದಾರೆ. ಇದು ಮಂಡ್ಯ ಜನತೆ ಬರೆದ ಇತಿಹಾಸ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನಕ್ಕೆ ಆಹ್ವಾನ ಬಂದರೆ ಹೋಗುವುದಾಗಿ ಇದೇ ವೇಳೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.