“ಟಿ20 ವಿಶ್ವಕಪ್ ಮುಂದೂಡಿಕೆಯನ್ನು ಐಪಿಎಲ್ ಲಾಭಕ್ಕೆ ಬಳಸುವುದಿಲ್ಲ’
Team Udayavani, May 23, 2020, 6:45 AM IST
ಹೊಸದಿಲ್ಲಿ: ಆಸ್ಟ್ರೇಲಿಯದಲ್ಲಿ ನಡೆಯುವ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಮುಂದೂಡಲ್ಪಟ್ಟರೂ ತಾನು ಈ ಅವಕಾಶವನ್ನು ಐಪಿಎಲ್ ನಡೆಸಲು ಬಳಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಆಸ್ಟ್ರೇಲಿಯ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದೆ. ಅಕ್ಟೋಬರ್-ನವಂಬರ್ ತಿಂಗಳಲ್ಲಿ ಅವಕಾಶ ಸಿಕ್ಕಿದರಷ್ಟೇ ಇದನ್ನು ಐಪಿಎಲ್‌ಗೆ ಪರಿಗಣಿಸಲಾಗುವುದು ಎಂದಿದೆ.
ಅ. 18ರಿಂದ ಆಸೀಸ್‌ನಲ್ಲಿ ಟಿ20 ವಿಶ್ವಕಪ್ ಆರಂಭವಾಗಬೇಕಿದೆ. ಆದರೆ ಬಿಸಿಸಿಐ ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿ ಮೇಲೆ ಒತ್ತಡ ಹೇರಿ ಐಪಿಎಲ್‌ಗೋಸ್ಕರ ಇದನ್ನು
ಮುಂದೂಡಲು ಪ್ರಯತ್ನಿಸುತ್ತಿದೆ ಎಂದು ಆಸೀಸ್ ಮಾಧ್ಯಮಗಳು ವರದಿ ಮಾಡಿವೆ.
ಐಸಿಸಿ ನಿರ್ಧಾರವೇ ಅಂತಿಮ
“ನಾವೇಕೆ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಮುಂದೂಡಲು ಹೇಳುತ್ತೇವೆ? ಬಿಸಿಸಿಐ ಏಕೆ ಇದರಲ್ಲಿ ಮಧ್ಯ ಪ್ರವೇಶಿಸುತ್ತದೆ? ಇದು ಐಸಿಸಿ ನಡೆಸುವ ಕೂಟವೇ ಹೊರತು ನಮ್ಮ ನಡುವಿನ ದ್ವಿಪಕ್ಷೀಯ ಸರಣಿ ಅಲ್ಲ. ಐಸಿಸಿ ಹಾಗೂ ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿಯ ತೀರ್ಮಾನವೇ ಇಲ್ಲಿ ಅಂತಿಮ’ ಎಂದು ಬಿಸಿಸಿಐ ಖಜಾಂಚಿ ಅರುಣ್ ಸಿಂಗ್ ಧುಮಾಲ್ ಹೇಳಿದ್ದಾರೆ.
ಕ್ರಿಕೆಟ್ ಆಸ್ಟ್ರೇಲಿಯದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆವಿನ್ ರಾಬರ್ಟ್ಸ್ ಕೂಡ ಇದೇ ಧಾಟಿಯಲ್ಲಿ ಮಾತಾಡಿದ್ದಾರೆ. “ಈ ಬಗ್ಗೆ ನಮಗೆ ಸ್ಪಷ್ಟತೆ ಇಲ್ಲ. ಪರಿಸ್ಥಿತಿ ಸುಧಾರಿಸಿದರೆ ಪಂದ್ಯಾವಳಿ ವೇಳಾಪಟ್ಟಿಯಂತೆ ನಡೆಯಲೂಬಹುದು. ಆದರೆ ಅಂತಿಮ ನಿರ್ಧಾರವೇನಿದ್ದರೂ ಐಸಿಸಿಯದೇ ಆಗಿರುತ್ತದೆ’ ಎಂದು ಹೇಳಿದ್ದಾರೆ.
ಸುಮಾರು 530 ಮಿ. ಡಾಲರ್ ಲಾಭವನ್ನು ತಂದುಕೊಡುವ 2020ರ ಐಪಿಎಲ್ ಪಂದ್ಯಾವಳಿ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟರೂ ಇದು ಯಾವಾಗ ನಡೆದೀತು ಎಂಬ ಬಗ್ಗೆ ಯಾವುದೇ ಅಂತಿಮ ತೀರ್ಮಾನಕ್ಕೆ ಬರಲಾಗಿಲ್ಲ. ಸೂಕ್ತ ದಿನಾಂಕಕ್ಕಾಗಿ ಬಿಸಿಸಿಐ ಹೊಂಚು ಹಾಕುತ್ತಲೇ ಇದೆ. ಟಿ20 ವಿಶ್ವಕಪ್ ಪಂದ್ಯಾವಳಿ ಮುಂದೂಡಲ್ಪಟ್ಟರೆ ಐಪಿಎಲ್ ಹಾದಿ ಸುಗಮ ಎಂಬುದೊಂದು ಲೆಕ್ಕಾಚಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.