ಟಿ20 ವಿಶ್ವಕಪ್ ಮುಂದೂಡಿಕೆ ಬಹುತೇಕ ಖಚಿತ
ಮೇ 26-28ರ ಐಸಿಸಿ ಸಭೆಯಲ್ಲಿ ಅಂತಿಮ ನಿರ್ಧಾರ ನಿರೀಕ್ಷೆ
Team Udayavani, May 23, 2020, 6:10 AM IST
ಮುಂಬಯಿ: ಕೋವಿಡ್-19 ಮಹಾಮಾರಿಯಿಂದ ಆಸ್ಟ್ರೇಲಿಯ ಆತಿಥ್ಯದಲ್ಲಿ ಇದೇ ವರ್ಷ ನಡೆಯಬೇಕಿದ್ದ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಕೂಟ ಮುಂದೂಡುವುದು ಬಹುತೇಕ ಖಚಿತವೆನಿಸಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ ಎಂದು ಮೂಲಗಳು ತಿಳಿಸಿವೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಆಸ್ಟ್ರೇಲಿಯದಲ್ಲಿ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಬೇಕಿತ್ತು ಆದರೆ ಇದೀಗ ಬಂದಿರುವ ಮಾಹಿತಿಗಳ ಪ್ರಕಾರ ಟಿ20 ವಿಶ್ವಕಪ್ ಮುಂದೂಡಲಾಗುತ್ತಿದ್ದು, ಈ ಬಗ್ಗೆ ಅಧಿಕೃತ ಪ್ರಕಟನೆಯು ಮುಂದಿನ ವಾರ ಹೊರಬೀಳಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸಭೆಯು ಮೇ 26ರಿಂದ 28ರ ವರೆಗೆ ನಡೆಯುತ್ತದೆ. ಈ ವೇಳೆ ವಿಶ್ವಕಪ್ ಬಗ್ಗೆ ಅಂತಿಮ ನಿರ್ಧಾರವನ್ನು ನಿರೀಕ್ಷಿಸಬಹುದಾಗಿದೆ.
ಮುಂದಿನ ವರ್ಷ ನಡೆಯುವ ಸಾಧ್ಯತೆ
ಈ ವಿಶ್ವಕಪ್ ಕೂಟ 2021ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಅವಧಿಯಲ್ಲಿ ಆಯೋಜನೆಯಾಗುವ ಸಾಧ್ಯತೆಯಿದೆ. ಆದರೆ ಮೂಲಗಳ ಪ್ರಕಾರ ಖಚಿತವಾಗಿ ಇಂತಹದ್ದೇ ತಿಂಗಳಿನಲ್ಲಿ ನಡೆಯತ್ತದೆ ಎನ್ನುವುದನ್ನು ಹೇಳಲು ಈಗ ಸಾಧ್ಯವಿಲ್ಲ. ಏಕೆಂದರೆ ಈ ವೇಳೆಯಲ್ಲಿ ಇಂಗ್ಲೆಂಡ್ ತಂಡದ ಭಾರತ ಪ್ರವಾಸದ ಮೇಲೂ ಪರಿಣಾಮ ಬೀಳಲಿದೆ ಮತ್ತು ಈ ಪ್ರಸ್ತಾವಕ್ಕೆ ಜಾಹೀರಾತು ಹಕ್ಕುದಾರರು ಒಪ್ಪಿಗೆ ಸೂಚಿಸುವ ಸಾಧ್ಯತೆ ಕಡಿಮೆಯಾಗಿದೆ ಎನ್ನಲಾಗಿದೆ.
ಬಿಸಿಸಿಐ ಮನಸ್ಸು ಮಾಡಬೇಕು
ಐಸಿಸಿ ಫ್ಯೂಚರ್ ಟೂರ್ ಪ್ರೋಗ್ರಾಂನಂತೆ ಮುಂದಿನ ಟಿ20 ವಿಶ್ವಕಪ್ ಭಾರತದಲ್ಲಿ ನಡೆಯಬೇಕು. ಹಾಗಾಗಿ ಮುಂದಿನ ವರ್ಷ ಚುಟುಕು ವಿಶ್ವಕಪ್ ಆಯೋಜಿಸಲು ಆಸೀಸ್‌ಗೆ ಅವಕಾಶ ನೀಡಲು ಬಿಸಿಸಿಐ ದೊಡ್ಡ ಮನಸ್ಸು ಮಾಡಬೇಕಿದೆ. ಹಾಗೆಯೇ ಭಾರತ ಇನ್ನೂ ಒಂದು ವರ್ಷ ಬಿಟ್ಟು 2022ನೇ ಇಸವಿಯಲ್ಲಿ ಟಿ20 ವಿಶ್ವಕಪ್ ಆಯೋಜಿಸಬಹುದಾಗಿದೆ. ಆದರೆ ಇದಕ್ಕೂ ಸಾಧ್ಯತೆ ಕಡಿಮೆ ಎನ್ನಲಾಗಿದೆ.
2022ರಲ್ಲಿ ಆತಿಥ್ಯ
ಅಂತಿಮವಾಗಿ ಆಸ್ಟ್ರೇಲಿಯ ಎರಡು ವರ್ಷ ಬಿಟ್ಟು 2022ರಲ್ಲಿ ಟಿ20 ವಿಶ್ವಕಪ್ ಆಯೋಜಿಸುವ ಸಾಧ್ಯತೆಯಿದೆ. ಬೇರೆ ಯಾವುದೇ ಐಸಿಸಿ ಪ್ರಮುಖ ಟೂರ್ನಿಗಳು ಆಯೋಜನೆಯಾಗದಿದ್ದರೆ ಇದಕ್ಕೆ ಅವಕಾಶವಿರುತ್ತದೆ. ಒಟ್ಟಿನಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆಯೋಜನೆಗೆ ಆಸ್ಟ್ರೇಲಿಯ ಸರಕಾರದ ನಿರ್ಧಾರ ಅಂತಿಮವೆನಿಸಲಿದೆ. 16 ತಂಡಗಳು ಭಾಗವಹಿಸುವ ಟೂರ್ನಿಯನ್ನು ಆಯೋಜಿಸುವಾಗ ದೊಡ್ಡ ಸವಾಲೇ ಎದುರಾಗಲಿದೆ. ಮುಚ್ಚಿದ ಕ್ರೀಡಾಂಗಣದಲ್ಲಿ ಆಯೋಜಿಸುವ ಸಾಧ್ಯತೆ ಕಡಿಮೆಯಾಗಿದೆ. ಯಾಕೆಂದರೆ ಇದು ಆದಾಯದ ಮೇಲೆ ಪರಿಣಾಮ ಬೀರಲಿದೆ. ಒಟ್ಟಿನಲ್ಲಿ ಅಂತಿಮ ನಿರ್ಧಾರ ಇದೇ 28ರಂದು ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.