Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ
338 ಕೊಳವೆ ಬಾವಿ, 13 ತೆರೆದ ಬಾವಿಗಳು; 85 ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದೆ
Team Udayavani, Mar 15, 2024, 6:19 PM IST
ರಬಕವಿ ಬನಹಟ್ಟಿ: ಮುಂದಿನ ಹದಿನೈದು ಇಪ್ಪತ್ತು ದಿನಗಳಲ್ಲಿ ಸಮೀಪದ ಕೃಷ್ಣಾ ನದಿ ಸಂಪೂರ್ಣವಾಗಿ ಬತ್ತಲಿದ್ದು, ನಗರಸಭೆಯ ಅಧಿಕಾರಿಗಳು ಈಗಿನಿಂದಲೇ ನೀರು ಪೂರೈಕೆಯ ಬಗ್ಗೆ ಗಮನ ನೀಡಬೇಕು ಮತ್ತು ನಗರಸಭೆಯ ವ್ಯಾಪ್ತಿಯ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲು ಸನ್ನದ್ಧರಾಗಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಶುಕ್ರವಾರ ಇಲ್ಲಿನ ನಗರಭೆಯ ಸಭಾ ಭವನದಲ್ಲಿ ನೀರಿನ ಸಮಸ್ಯೆ ಕುರಿತು ಹಮ್ಮಿಕೊಂಡ ಸಭೆಯಲ್ಲಿ ಮಾತನಾಡಿದರು.
ವಾರ್ಡ್ ನಲ್ಲಿರುವ ಸಮಸ್ಯೆಗಳ ಕುರಿತು ಸದಸ್ಯರಿಂದ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ನಗರೋತ್ಥಾನ ಯೋಜನೆ ಅಡಿಯಲ್ಲಿ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಇರುವ ಟೆಂಡರ್ ಗಳನ್ನು ಆದಷ್ಟು ಬೇಗನೆ ಕರೆದು ಕಾಮಗಾರಿಯನ್ನು ಆರಂಭಿಸುವಂತೆ ಮೇಲಾಧಿಕಾರಿಗಳ ಜೊತೆಗೆ ಚರ್ಚೆ ಮಾಡಲಾಗಿದೆ.
ನಗರಸಭೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ನಿವಾರಣೆ ಮಾಡಲು ರೂ. 5೦ ಲಕ್ಷ ಪರಿಹಾರ ಧನವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ಕೇಳಲಾಗುವುದು. ನೀರಿನ ತೊಂದರೆ ಇದ್ದಲ್ಲಿ ನಗರಸಭೆಯ ಅಧಿಕಾರಿಗಳು ಗಮನ ನೀಡಬೇಕು ನಗರಸಭೆಯ ಸದಸ್ಯರು ನೀರಿನ ಸಮಸ್ಯೆಯನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲರೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಪೌರಾಯುಕ್ತ ಜಗದೀಶ ಈಟಿ ಮಾತನಾಡಿ ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ಈಗಾಗಲೇ 338 ಕೊಳವೆ ಬಾವಿಗಳಿವೆ. ಅದರಲ್ಲಿ 326 ಕಾರ್ಯ ಮಾಡುತ್ತಿವೆ. ಉಳಿದ ಕೊಳವೆ ಬಾವಿಗಳ ದುರಸ್ತಿ ಕಾರ್ಯವನ್ನು ಕೂಡಾ ಕೈಗೊಳ್ಳಲಾಗುವುದು. 13 ತೆರೆದ ಬಾವಿಗಳು ಇದ್ದು, ಅವುಗಳನ್ನು ಕೂಡಾ ಸ್ವಚ್ಛಗೊಳಿಸಿ ನೀರು ಪೂರೈಕೆಗೆ ಬಳಸಿಕೊಳ್ಳಲಾಗುವುದು ಮತ್ತು 85 ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದೆ.
ಕೊಳವೆ ಬಾವಿಗಳ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ನೀರು ಪೂರೈಸಿದ ಕೊಳವೆ ಬಾವಿಗಳ ಮಾಲೀಕರ ವಿದ್ಯುತ್ ಬಿಲ್ ನ್ನು ನಗರಸಭೆಯಿಂದ ಪಾವತಿಸಲಾಗುವುದು. ನೀರಿನ ಸಮಸ್ಯೆಯನ್ನು ಎದುರಿಸುವ ಸಂದರ್ಭದಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ಎಂಜಿನಿಯರ್ ರಾಘವೇಂದ್ರ ಕುಲಕರ್ಣಿ, ವೈಶಾಲಿ ಹಿಪ್ಪರಗಿ, ಸುರೇಶ ಬಾಗೇವಾಡಿ, ಸಂಜಯ ತೆಗ್ಗಿ, ಶ್ರೀಶೈಲ ಬೀಳಗಿ, ಯಲ್ಲಪ್ಪ ಕಟಗಿ, ಬಸವರಾಜ ಗುಡೋಡಗಿ, ಶ್ರೀಶೈಲ ಆಲಗೂರ, ಶಿವಾನಂದ ಬುದ್ನಿ, ಅರುಣ ಬುದ್ನಿ, ವಿಜಯ ಕಲಾಲ, ಗೌರಿ ಮಿಳ್ಳಿ, ಮಾರುತಿ ಗಾಡಿವಡ್ಡರ, ಜಯಶ್ರೀ ಬಾಗೇವಾಡಿ, ದುರ್ಗವ್ವ ಹರಿಜನ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.