ಗಣಿಗಾರಿಕೆ ನಿಲ್ಲಿಸಲು ಕ್ರಮಕೈಗೊಳ್ಳಿ: ಸಚಿವ ಹಾಲಪ್ಪ ಆಚಾರ್ ಗೆ ಪೇಜಾವರ ಶ್ರೀ ಅಹವಾಲು
Team Udayavani, Jan 28, 2022, 2:40 PM IST
ಉಡುಪಿ: ಉಡುಪಿ-ಮಂಗಳೂರು ಭೇಟಿಯಲ್ಲಿದ್ದ ರಾಜ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಮಂತ್ರಿ ಶ್ರೀ ಹಾಲಪ್ಪ ಆಚಾರ್ ಶುಕ್ರವಾರ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು .
ಈ ಸಂದರ್ಭ, ದಕ ಜಿಲ್ಲೆಯ ಪ್ರಾಚೀನ ತೀರ್ಥ ಕ್ಷೇತ್ರ ನರಹರಿ ಪರ್ವತದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಕ್ಷೇತ್ರದ ಪಾವಿತ್ರ್ಯಕ್ಕೆ ಅಪಾಯ ಎದುರಾಗುವ ಸಾಧ್ಯತೆಗಳನ್ನು ವಿವರಿಸಿ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಅಲ್ಲಿ ಗಣಿಗಾರಿಕೆ ನಿಲ್ಲಿಸಿ ಸಂರಕ್ಷಿತ ಪ್ರದೇಶವೆಂದು ಘೋಷಿಸುವಂತೆ ಸಚಿವರಿಗೆ ಲಿಖಿತ ಅಪೇಕ್ಷೆ ಸಲ್ಲಿಸಿದರು.
ಸ್ಪಂದಿಸಿದ ಸಚಿವ ಹಾಲಪ್ಪ ಆಚಾರ್ ಕೂಡಲೇ ಈ ವಿಚಾರ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳಲು ಸೂಚಿಸುವುದಾಗಿ ತಿಳಿಸಿದರು.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕ ರಾಮ್ ಮನೋಹರ್ ಪ್ರಸಾದ್, ಸಚಿವರ ಆಪ್ತ ಕಾರ್ಯದರ್ಶಿ ಡಾ ನಂದನ್ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.