ಬರ ನಿರ್ವಹಣೆ, ಬಜೆಟ್‌ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಿ


Team Udayavani, Jun 2, 2019, 3:09 AM IST

bara

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಬಜೆಟ್‌ನಲ್ಲಿ ಘೋಷಿಸಿದ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಲೋಕಸಭೆ ಫ‌ಲಿತಾಂಶದ ನಂತರ “ಆಪರೇಷನ್‌ ಕಮಲ’ ಕಾರ್ಯಾಚರಣೆಯ ಆತಂಕದ ಗುಂಗಿನಿಂದ ಹೊರ ಬಂದು, ಆಡಳಿತ ಯಂತ್ರ ಚುರುಕುಗೊಳಿಸಲು ಮುಂದಾಗಿರುವ ಮುಖ್ಯಮಂತ್ರಿ, ಶನಿವಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರೊಂದಿಗೆ ಚರ್ಚಿಸಿದರು. ಬರ ನಿರ್ವಹಣೆ ಹಾಗೂ ಬಜೆಟ್‌ನಲ್ಲಿ ಘೋಷಿಸಿದ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ಕರೆಯುವಂತೆ ನಿರ್ದೇಶನ ನೀಡಿದರು.

ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗಿದ್ದರೆ, ಕಾರ್ಯಕ್ರಮಗಳ ಅನುಷ್ಠಾನದಲ್ಲಿ ನಿಧಾನವಾಗುತ್ತಿದ್ದರೆ ಅದಕ್ಕೆ ಕಾರಣ ಅರಿತು ಸಮಸ್ಯೆ ನಿವಾರಿಸಲು ಗಮನ ಹರಿಸುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದರು.

ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ವಸತಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣದ ಗುಣಮಟ್ಟವನ್ನು ಖಾತರಿಪಡಿಸಲು ಹಾಗೂ ಶಾಲಾ ಕಾಲೇಜುಗಳ ಮೂಲಸೌಕರ್ಯಕ್ಕೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ಆಂಗ್ಲ ಮಾಧ್ಯಮ ಶಾಲೆಗಳ ಪ್ರಾರಂಭದ ಕುರಿತು ವಿವರಗಳನ್ನು ಪಡೆದ ಮುಖ್ಯಮಂತ್ರಿ, ಈ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಣ ದೊರಕುವಂತೆ ಖಾತರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಅಂತೆಯೇ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಬಗ್ಗೆ ಗಮನ ಹರಿಸಬೇಕು. ವಸತಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಅರ್ಹ ಫ‌ಲಾನುಭವಿಗಳಿಗೆ ಸೌಲಭ್ಯ ದೊರೆಯುವುದನ್ನು ಖಾತರಿ ಪಡಿಸಿಕೊಳ್ಳಬೇಕು.

ನಗರ ಪ್ರದೇಶಗಳಲ್ಲಿ ಮೂಲಸೌಕರ್ಯ, ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಣೆ ನಿಟ್ಟಿನಲ್ಲಿ ಬಿಬಿಎಂಪಿ, ಬಿಡಿಎ ಹಾಗೂ ಸಂಚಾರಿ ಪೊಲೀಸರ ಜತೆಗೂಡಿ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು. ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕಾರ್ಯದರ್ಶಿ ಎಸ್‌.ಸೆಲ್ವಕುಮಾರ್‌ ಈ ಸಂದರ್ಭ ಉಪಸ್ಥಿತರಿದ್ದರು.

ಸಿದ್ದು-ಎಚ್‌ಡಿಕೆ ಭೇಟಿ; ಇಬ್ಬರು ಪಕ್ಷೇತರರ ಸಂಪುಟ ಸೇರ್ಪಡೆ ಖಚಿತ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶನಿವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಮಾತುಕತೆ ನಡೆಸಿದರು. ಕಾವೇರಿ ನಿವಾಸಕ್ಕೆ ಆಗಮಿಸಿದ ಕುಮಾರಸ್ವಾಮಿ, ಪ್ರಸಕ್ತ ರಾಜಕೀಯ ವಿದ್ಯಮಾನ, ಸಂಪುಟ ವಿಸ್ತರಣೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಇದೇ ಸಂದರ್ಭದಲ್ಲಿ ಪಕ್ಷೇತರ ಶಾಸಕ ಆರ್‌.ಶಂಕರ್‌ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಸಿದ್ದರಾಮಯ್ಯ, ಕುಮಾರಸ್ವಾಮಿ ಸಮ್ಮುಖದಲ್ಲೇ ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ ಮತ್ತೂಬ್ಬ ಪಕ್ಷೇತರ ಶಾಸಕ ಆರ್‌.ನಾಗೇಶ್‌ ಸಹ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬಹುತೇಕ ಇಬ್ಬರೂ ಪಕ್ಷೇತರ ಶಾಸಕರು ರಾಜ್ಯ ಸಚಿವ ಸಂಪುಟ ಸೇರುವ ಸಾಧ್ಯತೆಯಿದ್ದು, ಸಂಪುಟ ವಿಸ್ತರಣೆ ದಿನಾಂಕವಷ್ಟೇ ನಿಗದಿಯಾಗಬೇಕಿದೆ.

ಎಚ್ಡಿಕೆಗೆ ಸಿದ್ದು ಸಲಹೆ: ಸುಮಾರು 45 ನಿಮಿಷಗಳ ಕಾಲ ನಡೆದ ಮಾತುಕತೆ ಸಮಯದಲ್ಲಿ “ಆಪರೇಷನ್‌ ಕಮಲ’ ಕಾರ್ಯಾಚರಣೆಗೆ ಅವಕಾಶ ಕೊಡದಂತೆ ಸಿದ್ದರಾಮಯ್ಯ ಅವರು ಕುಮಾರಸ್ವಾಮಿಯವರಿಗೆ ಸಲಹೆ ನೀಡಿದರು. ಸಂಪುಟದಲ್ಲಿ ಖಾಲಿಯಿರುವ ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಗಳನ್ನು ಪಕ್ಷೇತರರಿಗೆ ನೀಡಿದರೆ ಬಿಜೆಪಿಗೆ ತಿರುಗೇಟು ನೀಡಿದಂತಾಗುತ್ತದೆ.

ಅವರ ಸಂಖ್ಯಾಬಲ ಹೆಚ್ಚಾಗುವುದಿಲ್ಲ. ಇದರಿಂದ “ಆಪರೇಷನ್‌ ಕಮಲ’ ಕಾರ್ಯಾಚರಣೆಗೆ ಬಿಜೆಪಿ ಪ್ರಯತ್ನಿಸುವುದನ್ನೂ ತಡೆಯಬಹುದು. ಎಲ್ಲ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ. ಆದಷ್ಟು ಬೇಗ ಜಂಟಿ ಶಾಸಕಾಂಗ ಪಕ್ಷದ ಸಭೆ ಕರೆದು ಈ ಬಗ್ಗೆ ಚರ್ಚಿಸೋಣ ಎಂದು ಸಲಹೆ ನೀಡಿದರು ಎಂದು ಹೇಳಲಾಗಿದೆ.

ಸೋನಿಯಾಗೆ ಅಭಿನಂದನೆ: ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕಿಯಾಗಿ ಆಯ್ಕೆಯಾದ ಸೋನಿಯಾಗಾಂಧಿ ಅವರನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಭಿನಂದಿಸಿದ್ದಾರೆ. ತಮ್ಮ ಅನುಭವ ಹಾಗೂ ನಾಯಕತ್ವವು ಪ್ರತಿಪಕ್ಷಗಳಿಗೆ ಸಂಸತ್ತಿನಲ್ಲಿ ದೊಡ್ಡ ಮಟ್ಟದ ಧ್ವನಿಯಾಗಲಿ ಎಂದು ಆಶಿಸುತ್ತೇನೆ. ನಿಮಗೆ ಶುಭ ಹಾರೈಸುತ್ತೇನೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.