ತಲ್ಲೂರು: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಕಳವು

Team Udayavani, Feb 15, 2023, 1:05 AM IST

ತಲ್ಲೂರು: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಕಳವು

ಕುಂದಾಪುರ: ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ, ಹಾಡಹಗಲೇ ಒಳನುಗ್ಗಿ ಅಲ್ಲಿದ್ದ ಒಟ್ಟು 85 ಸಾವಿರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನಗೈದಿರುವ ಘಟನೆ ತಲ್ಲೂರು ಗ್ರಾಮದ ಪಾರ್ತಿಕಟ್ಟೆಯಲ್ಲಿ ಫೆ. 13ರಂದು ನಡೆದಿದೆ.

ಪಾರ್ತಿಕಟ್ಟೆಯಲ್ಲಿ ಶ್ರೀನಿಧಿ ಮೊಗವೀರ ಅವರು ವೈಲೇಟ್‌ ಸಿಕ್ವೇರಾ ಅವರ ಬಾಡಿಗೆ ಮನೆಯಲ್ಲಿ ವಾಸವಿದ್ದು, ಫೆ. 13ರ ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ತೆರಳಿದ್ದಳು. ಸಂಜೆ 6 ಗಂಟೆಗೆ ವಾಪಸು ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಮನೆಯ ಬಚ್ಚಲು ಮನೆಯ ಗೋಡೆ ಹತ್ತಿ ಒಳ ಬಂದು ಅಡುಗೆ ಮನೆಗೆ ಬರುವ ಬಾಗಿಲಿನ ಚಿಲಕ ಮುರಿದು, ಒಳಗಿನ ಕಪಾಟಿನಲ್ಲಿದ್ದ 70 ಸಾವಿರ ರೂ. ಮೌಲ್ಯದ 8 ಗ್ರಾಂನ 2 ಚಿನ್ನದ ಕಾಯಿನ್‌ಗಳು, 3 ಪ್ಲಾಸ್ಟಿಕ್‌ ಡಬ್ಬಿಯಲ್ಲಿದ್ದ 15 ಸಾವಿರ ರೂ. ಸೇರಿ ಒಟ್ಟು 85 ಸಾವಿರ ರೂ. ಮೌಲ್ಯದ ಹಣ ಹಾಗೂ ಚಿನ್ನ ಕಳವು ಮಾಡಲಾಗಿದೆ. ಕುಂದಾಪುರ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆರಳಚ್ಚು, ಶ್ವಾನದಳವನ್ನು ಕರೆಸಿ ತಪಾಸಣೆ ನಡೆಸಲಾಗಿದೆ. ಇದಲ್ಲದೆ ಸುತ್ತಮುತ್ತಲಿನ ಸಿಸಿ ಟಿವಿ ಕೆಮರಾಗಳನ್ನು ಸಹ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಶ್ರೀನಿಧಿ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಗಲು ವೇಳೆ ಕಳ್ಳತನ: ಆತಂಕ
ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದಾಗ ಕಳ್ಳತನ ನಡೆಯುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿದ್ದು, ಆದರೆ ಈಗ ಹಗಲು ವೇಳೆಯೂ ಈ ರೀತಿಯ ಕಳ್ಳತನ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ರೀತಿಯಾಗಿ ನಿರ್ಜನ ಪ್ರದೇಶದಲ್ಲಿರುವ ಮನೆಗಳನ್ನು ಗುರುತಿಸಿ ಅದರಲ್ಲೂ ಪ್ರಮುಖವಾಗಿ ಯಾರೂ ಇಲ್ಲದ ಮನೆಗಳನ್ನೇ ಗುರಿಯಾಗಿಸಿಕೊಂಡು, ಕಳ್ಳತನ ನಡೆಸುವ ತಂಡವೇನಾದರೂ ಸಕ್ರಿಯವಾಗಿದೆಯೇ ಎನ್ನುವ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.