ಮೌಲ್ವಿಗಳಿಗೆ 10 ಸಾವಿರ ಕೋಟಿ ಕೊಡಲು ಸಂಪನ್ಮೂಲ ಸಂಗ್ರಹಕ್ಕೆ ತೆರಿಗೆ: R. ಅಶೋಕ್
Team Udayavani, Dec 12, 2023, 11:41 PM IST
ಬೆಳಗಾವಿ: ಮೌಲ್ವಿಗಳಿಗೆ ಹತ್ತು ಸಾವಿರ ಕೋಟಿ ರೂ. ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅದಕ್ಕೆ ಅಗತ್ಯವಿರುವ ಸಂಪನ್ಮೂಲ ಸಂಗ್ರಹಕ್ಕಾಗಿ ತೆರಿಗೆ ವಿಧಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಜನರ ಮೇಲೆ ಬರೆ ಎಳೆಯುವ ಅಧಿವೇಶನ ಇದಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ ಕಲಾಪದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅನೇಕ ಸಮಸ್ಯೆಗಳಿಗೆ ಇಲ್ಲಿ (ಅಧಿವೇಶನದಲ್ಲಿ) ಪರಿಹಾರ ಸಿಗಬಹುದೆಂಬ ನಿರೀಕ್ಷೆ ಇತ್ತು. ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ತಲಾ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಿಲ್ಲ. ರೈತರ ಸಾಲ ಮನ್ನಾ ಬಗ್ಗೆ ಉತ್ತರ ಇಲ್ಲ. ಸಾಮಾನ್ಯರ ಮೇಲೆ ತೆರಿಗೆ ವಿಧಿಸಿ, ಅದರಿಂದ ಬಂದ ಹಣವನ್ನು ಮೌಲ್ವಿಗಳಿಗೆ ನೀಡಲು ನಡೆಸಿದ ಅಧಿವೇಶನವಾಗಿದೆ ಎಂದು ಆರೋಪಿಸಿದರು.
ಮಗು ದತ್ತು ತೆಗೆದುಕೊಂಡರೆ, ಸಾಲ ತೆಗೆದುಕೊಂಡರೆ, ಒಪ್ಪಂದ ಮಾಡಿಕೊಂಡರೆ ಹೀಗೆ ಎಲ್ಲದಕ್ಕೂ ಸರಕಾರ ತೆರಿಗೆ ವಿಧಿಸುತ್ತಿದೆ. ಬಿಜೆಪಿ ಬುಧವಾರ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.