TCS: ನೇಮಕಾತಿ ಹಗರಣ- 16 ಉದ್ಯೋಗಿಗಳ ವಜಾ
Team Udayavani, Oct 16, 2023, 8:40 PM IST
ನವದೆಹಲಿ: ದೇಶದ ಅತಿದೊಡ್ಡ ಐಟಿ ಸೇವಾ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ನೇಮಕಾತಿ ಹಗರಣದಲ್ಲಿ ಸಂಸ್ಥೆಯ ಕೆಲ ಉದ್ಯೋಗಿಗಳ ಕೈವಾಡವಿರುವುದು ತಿಳಿದುಬಂದ ಹಿನ್ನೆಲೆಯಲ್ಲಿ 16 ಮಂದಿಯನ್ನು ವಜಾಗೊಳಿಸಿರುವುದಾಗಿ ಸಂಸ್ಥೆ ತಿಳಿಸಿದೆ.
ಪ್ರಕರಣ ಸಂಬಂಧ ನಡೆಸಿದ ತನಿಖೆಯ ಬಳಿಕ 16 ಉದ್ಯೋಗಿಗಳನ್ನು ತೆಗೆದುಹಾಕಲಾಗಿದ್ದು, ಮೂವರು ಉದ್ಯೋಗಿಗಳನ್ನು ಸಂಪನ್ಮೂಲ ನಿರ್ವಹಣೆ ವಿಭಾಗದಿಂದ ವಜಾಗೊಳಿಸಲಾಗಿದೆ. ಜತೆಗೆ 6 ಮಂದಿ ಮಾರಾಟಗಾರರು ಹಾಗೂ ಅವರ ಮಾಲೀಕರು ಮತ್ತು ಅಂಗಸಂಸ್ಥೆಗಳೊಂದಿಗೆ ಟಿಸಿಎಸ್ನ ವ್ಯಾಪಾರವನ್ನೂ ನಿರ್ಬಂಧಿಸಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ. ಟಿಸಿಎಸ್ಗೆ ಗುತ್ತಿಗೆದಾರರನ್ನು ಪೂರೈಸುವ ಸಂಸ್ಥೆಗಳು ಹಾಗೂ ಸಂಸ್ಥೆಯ ಕೆಲ ಉದ್ಯೋಗಿಗಳು ಸೇರಿ ನೀತಿ ಸಂಹಿತೆಯನ್ನು ಉಲ್ಲಂ ಸಿ ನೇಮಕಾತಿಯಲ್ಲಿ ಹಗರಣ ನಡೆಸಿರುವುದು ಜೂನ್ನಲ್ಲಿ ಬಹಿರಂಗಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.