KAT ಮೊರೆ ಹೋದ ಶಿಕ್ಷಕ ಅಭ್ಯರ್ಥಿಗಳು
Team Udayavani, Oct 27, 2023, 11:16 PM IST
ಬೆಂಗಳೂರು: ರಾಜ್ಯದ 13 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ವಿಚಾರ ಈಗ ಮತ್ತೂಂದು ಸುತ್ತಿನ ಕಾನೂನು ಹೋರಾಟಕ್ಕೆ ಹೋಗಿದ್ದು, ಹೈಕೋರ್ಟ್ ನಿರ್ದೇಶನದಂತೆ ತಮ್ಮ ತಂದೆಯ ಆದಾಯ ಪ್ರಮಾಣಪತ್ರವನ್ನು ಪರಿಗಣಿಸದೆ ಇರುವುದನ್ನು ಆಕ್ಷೇಪಿಸಿ ಕೆಲವು ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(ಕೆಎಟಿ) ಮೊರೆ ಹೋಗಿದ್ದಾರೆ.
ಹೈಕೋರ್ಟ್ ಇದೇ ತಿಂಗಳ 12ರಂದು ನೇಮಕಕ್ಕೆ ಹಸಿರು ನಿಶಾನೆ ತೋರಿ, ತಂದೆಯ ಆದಾಯ ಪ್ರಮಾಣಪತ್ರದ ಕುರಿತು ಅಭ್ಯರ್ಥಿಗಳು ತಮ್ಮ ತಕರಾರನ್ನು ಕೆಎಟಿ ಮುಂದೆ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದೆಂದು ಆದೇಶಿ ಸಿತ್ತು. ಅದರಂತೆ ಬೆಂಗಳೂರಿನ ಬಿಳೇಕ ಹಳ್ಳಿಯ ಚೈತ್ರಾ ಸಹಿತ 22 ಮಂದಿ ಅಭ್ಯರ್ಥಿಗಳು ಈಗ ಕೆಎಟಿ ಮುಂದೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಂಗ ಸದಸ್ಯ ನಾರಾಯಣ್ ಮತ್ತು ಆಡಳಿತ ಸದಸ್ಯ ಎಸ್.ಶಿವಸೈಲಂ ಅವರಿದ್ದ ಪೀಠ, ಪ್ರತಿವಾದಿ ರಾಜ್ಯ ಸರಕಾರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ನೋಟಿಸ್ ಜಾರಿ ಗೊಳಿಸಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿ ಅಂತಿಮ ವಿಚಾರಣೆಯನ್ನು
ನ.6 ಕ್ಕೆ ನಿಗದಿಪಡಿಸಿದೆ.
ಅಲ್ಲದೆ, ಅರ್ಜಿ ವಿಲೇವಾರಿಗೆ ಸರಕಾರದ ಉತ್ತರ ಅತ್ಯಾವಶ್ಯಕವಾಗಿದೆ. ಹಾಗಾಗಿ ಯಾವುದೇ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ನಡೆದರೆ ಅದು ಈ ಅರ್ಜಿಯ ತೀರ್ಪಿಗೆ ಒಳಪಡುತ್ತದೆ ಎಂದು ಕೆಎಟಿ ಹೇಳಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಕೆ. ಸತೀಶ್ ಭಟ್, ನಿಯಮದಂತೆ ತಂದೆಯ ಆದಾಯ ಪ್ರಮಾಣಪತ್ರವನ್ನು ಮಾತ್ರ ಪರಿಗಣಿಸಬೇಕೇ ಹೊರತು ಪತಿಯ ಆದಾಯವನ್ನಲ್ಲ. ಸುಪ್ರೀಂಕೋರ್ಟ್ ಕೂಡ ಎಲ್ಲ ಅಂಶಗಳನ್ನು ಪರಿಗಣಿಸಿ ಸುರೇಂದ್ರ ಸಿಂಗ್ ವರ್ಸಸ್ ಪಂಜಾಬ್ ಎಲೆಕ್ಟ್ರಿಕ್‌ಸಿಟಿ ಬೋರ್ಡ್ ಹಾಗೂ ಇತರರು ಪ್ರಕರಣದಲ್ಲಿ ಪೋಷಕರ ಆದಾಯವನ್ನು ಮಾತ್ರ ಪರಿಗಣಿಸಬೇಕು ಎಂದು ಆದೇಶಿಸಿದೆ ಎಂದರು.
ಅಲ್ಲದೆ, ಕರ್ನಾಟಕ ಹೈಕೋರ್ಟ್ ಕೂಡ ಸ್ಟೇಟ್ ಆಫ್ ಕರ್ನಾಟಕ ವರ್ಸಸ್ ಯೋಗೇಶ್ವರಿ ಪ್ರಕರಣದಲ್ಲಿ ಪೋಷಕರ ಆದಾಯ ಪ್ರಮಾಣಪತ್ರವನ್ನೇ ಪರಿಗಣಿಸ ಬೇಕು ಎಂದು ಆದೇಶಿಸಿದೆ. ಅದರಂತೆ ಈ ಪ್ರಕರಣದಲ್ಲೂ ಅರ್ಜಿದಾರರು ಸಲ್ಲಿಸಿರುವ ತಂದೆಯ ಆದಾಯ ಪ್ರಮಾಣಪತ್ರ ಪರಿಗಣಿಸಿ ಅವರ ಹೆಸರನ್ನು ಆಯ್ಕೆ ಪಟ್ಟಿಯಲ್ಲಿ ಸೇರಿಸಬೇಕು ಮತ್ತು ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡುವಂತೆ ಆದೇಶ ನೀಡಬೇಕೆಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.