Telangana Election: ಕೆಸಿವಿ ಜತೆ ಜಮೀರ್ ಚರ್ಚೆ
Team Udayavani, Nov 8, 2023, 9:54 PM IST
ಬೆಂಗಳೂರು :ತೆಲಂಗಾಣ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಬುಧವಾರ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ತೆಲಂಗಾಣ ವಿಧಾನ ಸಭೆ ಚುನಾವಣೆಯ ಕ್ಲಸ್ಟರ್ ಉಸ್ತುವಾರಿ ಹಾಗೂ ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿರುವ ಜಮೀರ್ ಅವರು, ವೇಣುಗೋಪಾಲ್ ಅವರೊಂದಿಗೆ ಚುನಾವಣೆ ರಣತಂತ್ರ ಕುರಿತು ಸಮಾಲೋಚಿಸಿದರು.
ನೆರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಬಗ್ಗೆ ಸಮೀಕ್ಷೆ ಗಳಲ್ಲೂ ಅಭಿಪ್ರಾಯ ವ್ಯಕ್ತ ವಾಗಿರುವುದರಿಂದ ಹೆಚ್ಚಿನ ಸ್ಥಾನ ಗಳಿಸಲು ಹೋರಾಟ ನಡೆಸಬೇಕು ಎಂದು ವೇಣುಗೋಪಾಲ್ ಅಭಿಪ್ರಾಯ ವ್ಯಕ್ತ ಪಡಿಸಿದರು.
ವೇಣುಗೋಪಾಲ್ ಅವರು ತೆಲಂಗಾಣ ಪ್ರವಾಸ ಮಾಡಿ ಬಂದ ನಂತರ ಜಮೀರ್ ಅಹಮದ್ ಖಾನ್ ಅವರನ್ನು ದೆಹಲಿಗೆ ಬರುವಂತೆ ತಿಳಿಸಿ ಸುಮಾರು ಒಂದೂವರೆ ಗಂಟೆ ಕಾಲ ಅಲ್ಲಿನ ರಾಜಕೀಯ ಸ್ಥಿತಿಗತಿ, ಕಾಂಗ್ರೆಸ್ ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ಸಮಾಲೋಚಿಸಿದರು. ಮೌಲಾನಾ ತನ್ವಿರ್ ಹಾಶ್ಮಿ ಪೀರಾ, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.