Telangana: ನಮ್ಮ ತೆಲಂಗಾಣ ಮಿಷನ್ ಯಶಸ್ವಿ- ಡಿ.ಕೆ. ಶಿವಕುಮಾರ್
ನಿಚ್ಚಳ ಬಹುಮತ ಸಾಮೂಹಿಕ ಪ್ರಯತ್ನ- ದ. ಭಾರತದಲ್ಲಿ ಪ್ರಾಬಲ್ಯ ಶುರು
Team Udayavani, Dec 4, 2023, 12:59 AM IST
ತೆಲಂಗಾಣ ಫಲಿತಾಂಶ ಹಲವು ಸಂದೇಶಗಳನ್ನು ನೀಡಿದೆ. ಇದು ಸಾಮೂಹಿಕ ನಾಯಕತ್ವಕ್ಕೆ ಸಿಕ್ಕ ಜಯ ಹಾಗೆಯೇ ಅಭಿವೃದ್ಧಿ ಮತ್ತು ಪ್ರಗತಿಗಾಗಿ ಜನ ಮತ ನೀಡಿದ್ದಾರೆ. ಇದು ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿರುವುದರ ಸಂಕೇತ. ನಮ್ಮ ಕಾರ್ಯಕರ್ತರು ಹಾಗೂ ಮತದಾರರು ಬದಲಾವಣೆ ತರಲು ತೀರ್ಮಾನ ಮಾಡಿದ್ದರು. ಹೀಗಾಗಿ ತೆಲಂಗಾಣದಲ್ಲಿ ನಿಚ್ಚಳ ಬಹುಮತ ಸಿಕ್ಕಿದೆ.ಅಲ್ಲಿನ ಟಿಪಿಸಿಸಿ ಅಧ್ಯಕ್ಷರಾದ ರೇವಂತ್ ರೆಡ್ಡಿ ಅವರು ತಂಡದ ನಾಯಕರಾಗಿದ್ದರು.
ನಮ್ಮ ಪಕ್ಷ ಸಾಮೂಹಿಕ ನಾಯಕತ್ವದ ಮೇಲೆ ಚುನಾವಣೆ ಮಾಡಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ನೆರೆಯ ರಾಜ್ಯಗಳ ನಮ್ಮ ನಾಯಕರು ಪ್ರತಿ ಕ್ಷೇತ್ರದಲ್ಲೂ ಕೆಲಸ ಮಾಡಿದ್ದಾರೆ. ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರಂತೆ ಕೆಲಸ ಮಾಡಿದ್ದೇವೆ. ಎಐಐಸಿ, ಟಿಪಿಸಿಸಿ ನಾಯಕರು, ಕಾರ್ಯಕರ್ತರಂತೆ ಕೆಪಿಸಿಸಿ ನಾಯಕರು, ಕಾರ್ಯಕರ್ತರೂ ಕೆಲಸ ಮಾಡಿದ್ದೇವೆ. ನಮ್ಮ ಸರಕಾರದ ಏಳೆಂಟು ಸಚಿವರು ತೆಲಂಗಾಣಕ್ಕೆ ಹೆಚ್ಚಿನ ಸಮಯ ಕೊಟ್ಟಿದ್ದಾರೆ.
ನಮ್ಮ ಮಿಶನ್ ಯಶಸ್ವಿಯಾಗಿದೆ. ಇದು ತೆಲಂಗಾಣ ರಾಜ್ಯದ ಜನರ ಗೆಲುವು. ತೆಲಂಗಾಣ ರಾಜ್ಯ ರಚನೆ ಮಾಡಿದ ಸೋನಿಯಾ ಗಾಂಧಿ ಅವರಿಗೆ ಆ ನಾಡಿನ ಜನರು ಈ ರೀತಿ ಧನ್ಯವಾದ ಅರ್ಪಿಸಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವ ತೆಲಂಗಾಣ ರಾಜ್ಯದ ಜನರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಹಾಗೂ ವೈಯಕ್ತಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಮ್ಮ ಮೇಲೆ ನಂಬಿಕೆ ಇಟ್ಟ ಜನರಿಗೆ ಧನ್ಯವಾದಗಳು. ನಾವು ಅವರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಕಳೆದ ಹತ್ತು ವರ್ಷಗಳ ಆಡಳಿತ ನೋಡಿ ಅಲ್ಲಿನ ಜನ ಬೇಸತ್ತಿದ್ದಾರೆ. ಹೀಗಾಗಿ ಅಭಿವೃದ್ಧಿ ಹಾಗೂ ಪ್ರಗತಿಯ ಬದಲಾವಣೆ ಬಯಸಿದ್ದಾರೆ. ಅದ ಕ್ಕಾಗಿಯೇ ಕಾಂಗ್ರೆಸ್‌ಗೆ ಮತದಾನ ಮಾಡಿದ್ದಾರೆ. ಜನರಿಟ್ಟ ನಂಬಿಕೆಯನ್ನು ಕಾಂಗ್ರೆಸ್ ಎಂದಿಗೂ ಹುಸಿಗೊಳಿಸುವುದಿಲ್ಲ.
ಫಲಿತಾಂಶದ ನಂತರ ಎಚ್ಚರಿಕೆಯ ಹೆಜ್ಜೆ: ತೆಲಂಗಾಣ ಸಿಎಂ ಕೆ.ಚಂದ್ರಶೇಖರರಾವ್ ಹಾಗೂ ಅವರ ಪುತ್ರ ಕೆ.ಟಿ. ರಾಮರಾವ್ ನಮ್ಮ ವಿರುದ್ಧ ಅವರು ಮಾಡಿದ ಟ್ವೀಟ್ ಹಾಗೂ ಅಪಪ್ರಚಾರಗಳಿಗೆ ತೆಲಂಗಾಣದ ಜನರು ಉತ್ತರ ನೀಡಿದ್ದಾರೆ. ಚುನಾವಣೆ ಫಲಿತಾಂಶದ ನಂತರ ಮುಂದಿನ ಕ್ರಮಗಳಬಗ್ಗೆ ನಾವು ಎಚ್ಚರಿಕೆಯಿಂದ ಇದ್ದೇವೆ. ಪ್ರತಿ ಕ್ಷೇತ್ರದಿಂದ ನಮ್ಮ ಅಭ್ಯರ್ಥಿಗಳನ್ನು ಕರೆ ತರಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿದಂತೆ ಅನುಷ್ಠಾನ ಮಾಡುತ್ತಿದ್ದೇವೆ. ಅದೇ ರೀತಿ ತೆಲಂಗಾಣದಲ್ಲಿ ಘೋಷಿಸಿರುವ 6 ಗ್ಯಾರಂಟಿಗಳನ್ನೂ ಜಾರಿಗೆ ತಂದೇ ತರುತ್ತೇವೆ. ಇದನ್ನು ಮತದಾರರಿಗೂ ಸ್ಪಷ್ಟನುಡಿಗಳಲ್ಲಿ ಹೇಳಿದ್ದೇವೆ.
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.