ತ.ನಾ.ನ ಉಪಟಳಕ್ಕೆ ತಾತ್ಕಾಲಿಕ ತಡೆ- ಕಾವೇರಿ ನೀರು ಬಿಡುಗಡೆಗೆ ನಿರ್ದೇಶನ ನೀಡದ ಪ್ರಾಧಿಕಾರ
Team Udayavani, Feb 2, 2024, 12:06 AM IST
ಬೆಂಗಳೂರು: ಕಾವೇರಿ ನದಿ ನೀರಿಗಾಗಿ ಕರ್ನಾಟಕವನ್ನು ನಿರಂತರ ಕಾಡುತ್ತಿದ್ದ ತಮಿಳುನಾಡಿನ ಉಪಟಳಕ್ಕೆ ತಾತ್ಕಾಲಿಕ ತಡೆ ಬಿದ್ದಿದ್ದು, ಪ್ರಸಕ್ತ ಸಾಲಿನ ನೀರಾವರಿ ಅವಧಿ ಅಂತ್ಯಗೊಂಡ ಗುರುವಾರ ಎರಡೂ ರಾಜ್ಯಗಳ ಜಲಾಶಯ ಗಳ ಉಪಯುಕ್ತ ನೀರಿನ ಸಂಗ್ರಹ ವನ್ನು ಪರಿಗಣಿಸಿ ಕರ್ನಾಟಕ ನೀರು ಬಿಡಬೇಕೆಂದು ಕಾವೇರಿ ನೀರು ನಿರ್ವಹಣ ಪ್ರಾಧಿಕಾರ ಯಾವುದೇ ನಿರ್ದೇಶನಗಳನ್ನೂ ನೀಡಲಿಲ್ಲ.
ಗುರುವಾರ ನಡೆದ ಪ್ರಾಧಿಕಾರದ ಸಭೆಯ ಮುಂದೆ ತಮಿಳುನಾಡು ಅಧಿಕಾರಿಗಳು, ಕರ್ನಾಟಕವು ಈವರೆಗೆ ಬಿಡಬೇಕಿರುವ 7.61 ಟಿಎಂಸಿ ಬಾಕಿ ಸಹಿತ 2024ರ ಮೇ ಅಂತ್ಯದವರೆಗೆ 18 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿತು.
ಇದಕ್ಕೆ ಆಕ್ಷೇಪಿಸಿರುವ ಕರ್ನಾಟಕವು, 2023ರ ಜೂನ್ 1ರಿಂದ 2024ರ ಜ.29ರ ವರೆಗೆ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ಶೇ.52.44ರಷ್ಟು ಒಳಹರಿವಿನ ಕೊರತೆಯಿದ್ದು, ಪ್ರಸಕ್ತ ಜಲ ವರ್ಷದಲ್ಲಿ ತಮಿಳು ನಾಡಿಗಿಂತ ಕರ್ನಾಟಕವೇ ಹೆಚ್ಚು ಸಂಕಷ್ಟವನ್ನು ಅನುಭವಿ ಸಿದೆ. ಬಿಳಿಗುಂಡ್ಲು ತಲುಪಲು ಕರ್ನಾಟಕವು ತನ್ನ ಜಲಾಶಯ ಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಸಮಿತಿಯು ಈ ಹಿಂದೆ ನೀಡಿದ್ದ ನಿರ್ದೇಶನಗಳನ್ನು ಪ್ರಾಧಿಕಾರ ಮರುಪರಿಶೀಲಿಸಬೇಕೆಂದು ಕರ್ನಾಟಕ ಮನವಿ ಮಾಡಿತು. ಕೊನೆಗೆ 2024ರ ಜ.31ರಂದು ಎರಡೂ ರಾಜ್ಯಗಳ ಜಲಾಶಯಗಳಲ್ಲಿರುವ ಉಪಯುಕ್ತ ಸಂಗ್ರಹ (ಲೈವ್ ಸ್ಟೋರೇಜ್)ವನ್ನು ಪರಿಗಣಿಸಿ, ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ. ಇದರಿಂದ ಕರ್ನಾಟಕವು ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.